ಜಿಎಸ್‌ಟಿ ಕಡಿತ- ರಾಜ್ಯಗಳಿಗೆ ಹೊರೆ: ಮೋದಿಗೆ ಸಿದ್ದರಾಮಯ್ಯ ಪತ್ರ

Date:

ಇತ್ತೀಚೆಗೆ ಕೇಂದ್ರ ಸರ್ಕಾರವು ಜಿಎಸ್‌ಟಿ ದರ ಪತಿಷ್ಕರಣೆ ನಡೆಸಿದೆ. ಹಲವು ವಸ್ತುಗಳ ಮೇಲಿನ ತೆರಿಗೆ ಪ್ರಮಾಣವನ್ನು ಕಡಿತಗೊಳಿಸಿದೆ. ಆದರೆ, ಜಿಎಸ್‌ಟಿ ದರ ಕಡಿತದ ಹೊರೆಯನ್ನು ಕೇಂದ್ರ ಸರ್ಕಾರವು ರಾಜ್ಯಗಳ ಮೇಲೆ‌ ಹೇರಿದೆ. ಇದರಿಂದ, ರಾಜ್ಯಗಳ ಆರ್ಥಿಕತೆ ಮೇಲೆ ಗಂಭೀರ‌ ಪರಿಣಾಮ ಬೀರಲಿದೆ ಎಂದು ಹಲವು ರಾಜ್ಯಗಳು ಕಳವಳ ವ್ಯಕ್ಯಪಡಿಸಿವೆ. ರಾಜ್ಯಗಳ ಮೇಲಾಗುವ ಹೊರೆಯನ್ನು‌ ತಗ್ಗಿಸುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿವೆ.

- Advertisement -

ಜಿಎಸ್‌ಟಿ ಕಡಿತದ ಹೊರೆಯು ರಾಜ್ಯಗಳ ಮೇಲೆ‌ ಬೀಳಲಿದೆ. ಪರಿಣಾಮ, ಕರ್ನಾಟಕಕ್ಕೆ‌ 18,500 ಕೋಟಿ ರೂ. ನಷ್ಟವಾಗಲಿದೆ ಎಂದು ಮುಖ್ಯಮಂತ್ರಿ‌ ಸಿದ್ದರಾಮಯ್ಯ ಈ ಹಿಂದೆಯೇ ಹೇಳಿದ್ದರು. ಜಿಎಸ್​​ಟಿ ದರ ಕಡಿತವನ್ನು ಖಂಡಿಸಿದ್ದರು. ಇದೀಗ, ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ಸೆಸ್‌ನಿಂದ ಸಂಗ್ರಹವಾಗುವ ಆದಾಯದಲ್ಲಿ 50% ಹಣವನ್ನು ರಾಜ್ಯಗಳೊಂದಿಗೆ ಹಂಚಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಮೌಢ್ಯತೆಯೊಳಗೆ ನಾ ಕಂಡ ಭಾರತ

ಭಾರತವು ಏಕತೆಯಲ್ಲಿ ವೈವಿಧ್ಯತೆಯನ್ನು ಕಂಡ ದೇಶ. ಹಲವು ಭಾಷೆಗಳು, ಧರ್ಮಗಳು, ಸಂಸ್ಕೃತಿಗಳು, ಆಹಾರ ಪದ್ಧತಿಗಳು, ಜೀವನಶೈಲಿಗಳು ಮತ್ತು ಆಚರಣೆಗಳು ಇಲ್ಲಿನ ಸಾಮಾಜಿಕ ಬದುಕಿನ ವೈಶಿಷ್ಟ್ಯ. ಈ ವೈವಿಧ್ಯತೆಯೇ ಭಾರತದ ಶಕ್ತಿ. ಆದರೆ, ವೈವಿಧ್ಯತೆಯನ್ನು...

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ತಾವು ಬರೆದ ಪತ್ರದ ಚಿತ್ರಗಳನ್ನು ಸಾಮಾಜಿಕ‌ಜಾಲತಾಣದಲ್ಲಿ‌ ಹಂಚಿಕೊಂಡಿರುವ ಸಿದ್ದರಾಮಯ್ಯ, “ಜಿಎಸ್​​ಟಿ ದರ ಕಡಿತದಿಂದ ರಾಜ್ಯಗಳ ಆದಾಯಕ್ಕೆ ನಷ್ಟ ಉಂಟಾಗಿದೆ. GST ಕೌನ್ಸಿಲ್ ಸಭೆಯಲ್ಲಿ ನಾಗರಿಕರ ಹೊರೆ ಕಡಿಮೆ ಮಾಡಲು ರಾಜ್ಯಗಳು ಬೆಂಬಲ ಸೂಚಿಸಿವೆ. ಆದರೆ, ದೇಶದ GST ಸಂಗ್ರಹದಲ್ಲಿ ಭಾರಿ ಕುಸಿತ ಕಂಡಿದೆ” ಎಂದು ಹೇಳಿದ್ದಾರೆ.

“ಕಳೆದ ವರ್ಷ, 2024-25ರ ನವೆಂಬರ್‌ನಲ್ಲಿ GST 9.3% ಬೆಳವಣಿಗೆ ಆಗಿತ್ತು. 2025-26ರ ನವಂಬರ್‌ನಲ್ಲಿ GST ಸಂಗ್ರಹದಲ್ಲಿ 2% ಕುಸಿತವಾಗಿದೆ. ನಿವ್ವಳ ದೇಶೀಯ GST ಬೆಳವಣಿಗೆ ದರ ಇಳಿಕೆ ಕಂಡಿದೆ. ಜಿಎಸ್‌ಟಿ ದರ ಕಡಿತದ ಬಳಿಕ 3 ತಿಂಗಳಲ್ಲಿ 1.7% ಮಾತ್ರ ಬೆಳವಣಿಗೆ ಆಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 8.9% ಬೆಳವಣಿಗೆ ಇತ್ತು. ಇದರಿಂದ ಕರ್ನಾಟಕದ ಬೊಕ್ಕಸಕ್ಕೆ 18,500 ಕೋಟಿ ರೂ. ನಷ್ಟವಾಗಿದೆ” ಎಂದು ವಿವರಿಸಿದ್ದಾರೆ.

“ಈ ವರ್ಷ, ಕರ್ನಾಕಟಕ್ಕೆ 9,000 ಕೋಟಿಗಳ ಆದಾಯ ಕೊರತೆ ಸಾಧ್ಯತೆ ಇದೆ. ವಿಲೀನಗೊಳಿಸದಿರುವಿಕೆಯಿಂದ 9,500 ಕೋಟಿ ರೂ. ನಷ್ಟವಾಗಲಿದೆ. ಈ ನಷ್ಟವನ್ನು ಕೇಂದ್ರವು ರಾಜ್ಯಗಳಿಗೆ ಸರಿದೂಗಿಸಬೇಕು. ಪಾನ್ ಮಸಾಲಾ ಸೆಸ್ ಆದಾಯವನ್ನು 50:50 ಆಧಾರದ ಮೇಲೆ ರಾಜ್ಯಗಳೊಂದಿಗೆ ಹಂಚಿಕೆ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ ಕರೆಘಂಟೆಯೇ?

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ...

ಬ್ರೆಜಿಲ್‌ ಚುನಾವಣೆ | ಸೋಲುಂಡ ಬೆನ್ನಲ್ಲೇ‌ ಪ್ಲೇವಿಯೋ ಬೊಲ್ಸೊನಾರೊ ಅಮೆರಿಕಗೆ ಪಲಾಯನ!

ಬ್ರೆಜಿಲ್‌ನ ಮಾಜಿ ಅಧ್ಯಕ್ಷ ಜೈರ್ ಬೊಲ್ಸೊನಾರೊ ಅವರ ಪುತ್ರ, ಹಾಲಿ ಸೆನೆಟರ್...

ಬೆಳಗಾವಿಯಲ್ಲಿ ಡಿ. 7ರಿಂದ ಚಳಿಗಾಲದ ಅಧಿವೇಶನ

ರಾಜ್ಯ ಕರ್ನಾಟಕ ವಿಧಾನಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯ ಸುವರ್ಣ...