ಜಿಎಸ್‌ಟಿ ಜಟಾಪಟಿ | ಸಚಿವ ಕೃಷ್ಣ ಬೈರೇಗೌಡ ಏಟಿಗೆ ವಿಪಕ್ಷ ನಾಯಕ ಆರ್‌ ಅಶೋಕ್‌ ತಿರುಗೇಟು

Date:

Advertisements

ನನ್ನನ್ನು ನಿಂದಿಸುವ ಭರದಲ್ಲಿ ಕಡಲೆಕಾಯಿ ಬೆಳೆಯುವ ಸಾಮಾನ್ಯ ರೈತನಿಗೆ ಇರುವಷ್ಟು ‘ಕನಿಷ್ಠ ಜ್ಞಾನ’ ಎಂದು ರೈತರನ್ನು ಯಾಕೆ ಹೀಯಾಳಿಸುತ್ತೀರಿ ಎಂದು ವಿಪಕ್ಷ ನಾಯಕ ಆರ್‌ ಅಶೋಕ್‌ ಅವರು ಕಂದಾಯ ಸಚಿವ ಕೃಷ್ಣ ಬೈರೇಗೌಡರನ್ನು ಪ್ರಶ್ನಿಸಿದ್ದಾರೆ.

“ಜಿಎಸ್‌ಟಿ ಸಭೆಗೆ ಹೋಗುವ ಪ್ರತಿನಿಧಿ ಕಡಲೆಕಾಯಿ ತಿನ್ನುತ್ತಾರಾ?” ಎಂಬ ವಿರೋಧ ಪಕ್ಷ ನಾಯಕ ಆರ್.‌ ಅಶೋಕ್‌ ಅವರ ಟೀಕೆಗೆ ಪ್ರತ್ಯುತ್ತರ ನೀಡಿದ್ದ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಮರಳಿ ಎಕ್ಸ್‌ ತಣದಲ್ಲಿ ಆರ್‌ ಅಶೋಕ್‌ ಪ್ರತಿಕ್ರಿಯಿಸಿದ್ದಾರೆ.

“ಕೃಷ್ಣ ಬೈರೇಗೌಡ ಅವರೇ ಎಲ್ಲರಿಗೂ ತಮ್ಮ ರೀತಿ ವಿದೇಶಕ್ಕೆ ಹೋಗಿ ವಿದ್ಯಾಭ್ಯಾಸ ಮಾಡಿಕೊಂಡು ಬರುವಷ್ಟು ಅನುಕೂಲ ಇರುವುದಿಲ್ಲ. ರಾಜಕಾರಣದಲ್ಲಿ ಕುಟುಂಬದ ಹಿನ್ನೆಲೆ ಇಲ್ಲದಂತಹ ನಮ್ಮಂತಹ ಸಾಮಾನ್ಯರೂ ಇದ್ದೀವಿ. ರೈತರ ಬಗ್ಗೆ ಇಂತಹ ಕೀಳರಿಮೆ ಇರುವ ತಮ್ಮಂತಹವರು ಐದು ವರ್ಷಗಳ ಕಾಲ ರಾಜ್ಯದ ಕೃಷಿ ಸಚಿವರಾಗಿದ್ದರಲ್ಲ, ಅದೇ ನಮ್ಮ ರಾಜ್ಯದ ದೌರ್ಭಾಗ್ಯ” ಎಂದು ವ್ಯಂಗ್ಯವಾಡಿದ್ದಾರೆ.

Advertisements

“ಜಿಎಸ್‌ಟಿ ಸಭೆಯಲ್ಲಿ ತೆರಿಗೆ ಹಂಚಿಕೆ ಬಗ್ಗೆ ಅಧಿಕೃತವಾಗಿ ಚರ್ಚೆ ನಡೆಯುವುದಿಲ್ಲ ಎಂಬ ಅರಿವು ನನಗೂ ಇದೆ. ಆದರೆ ಜಿಎಸ್‌ಟಿ ಸಭೆಯಲ್ಲಿ ಕೇಂದ್ರ ಹಣಕಾಸು ಸಚಿವರು, ರಾಜ್ಯಗಳ ಹಣಕಾಸು ಸಚಿವರು ಅಥವಾ ಇನ್ಯಾರಾದರೂ ಪ್ರತಿನಿಧಿ ಮಂತ್ರಿಗಳು ಬಂದಿರುತ್ತಾರೆ ಅಲ್ಲವೇ? ಇಂತಹ ವೇದಿಕೆಯಲ್ಲಿ ಅನೌಪಚಾರಿಕವಾಗಿ ತೆರಿಗೆ ಹಂಚಿಕೆ ಬಗ್ಗೆ ಚರ್ಚಿಸಿ ಒಂದು ಒಮ್ಮತ ಸೃಷ್ಟಿಸುವ ಪ್ರಯತ್ನ ಮಾಡಬಹುದಿತ್ತಲ್ಲವೇ? ನನ್ನ ಮಾತಿನ ಅರ್ಥ ಇದಾಗಿತ್ತು” ಎಂದು ತಮ್ಮ ಹೇಳಿಕೆ ಸಮರ್ಥಿಸಿಕೊಂಡಿದ್ದಾರೆ.

“ಕೇರಳದಲ್ಲಿ ಇತ್ತೀಚೆಗೆ ಐದು ಬಿಜೆಪಿಯೇತರ ಸರ್ಕಾರಗಳ ಪ್ರತಿನಿಧಿಗಳು ಒಟ್ಟಿಗೆ ಸೇರಿ ಸಭೆ ಮಾಡಿದರಲ್ಲ, ಅದು ತೆರಿಗೆ ಹಂಚಿಕೆ ಬಗ್ಗೆ ಚರ್ಚಿಸುವ ವೇದಿಕೆನಾ? ವೇದಿಕೆಗಳ ಮೇಲೆ ರಾಜಕೀಯ ಭಾಷಣ ಮಾಡಿ ಕೇಂದ್ರ ಸಚಿವರಿಗೆ ಬಹಿರಂಗ ಚರ್ಚೆಗೆ ಬರಲು ಸವಾಲು ಹಾಕುತ್ತೀರಲ್ಲ, ತೆರಿಗೆ ಹಂಚಿಕೆ ಬಗ್ಗೆ ಚರ್ಚಿಸಲು ಅದು ವೇದಿಕೆನಾ” ಎಂದು ಪ್ರಶ್ನಿಸಿದ್ದಾರೆ.

“ದೆಹಲಿ ಚಲೋ ಅಂತ ಬೀದಿನಾಟಕ ಮಾಡಿ, ಜಂತರ್ ಮಂತರ್‌ನಲ್ಲಿ ಫೋಟೋ ಶೂಟ್ ಮಾಡಿಸಿಕೊಂಡರಲ್ಲ, ತೆರಿಗೆ ಹಂಚಿಕೆ ಬಗ್ಗೆ ಚರ್ಚೆ ಮಾಡಲು ಅದು ವೇದಿಕೆನಾ? ಚುನಾವಣೆ ಬಂದರೆ ಸಾಕು, ಸರ್ಕಾರಕ್ಕೆ ಒಂಚೂರು ಮುಜುಗರ ಆದರೆ ಸಾಕು ಜನರ ಗಮನ ಬೇರೆಡೆ ಸೆಳೆಯಲು ‘ನನ್ನ ತೆರಿಗೆ ನನ್ನ ಹಕ್ಕು’ ಅಂತ ನಾಟಕ ಶುರು ಮಾಡುತ್ತೀರಲ್ಲ, ಸಾಮಾಜಿಕ ಜಾಲತಾಣಗಳು ತೆರಿಗೆ ಹಂಚಿಕೆ ಬಗ್ಗೆ ಚರ್ಚೆ ಮಾಡಲು ವೇದಿಕೆನಾ? ಈ ತಂತ್ರಗಾರಿಕೆ, ಟೂಲ್ ಕಿಟ್ ರಾಜಕಾರಣ ಜನಸಾಮಾನ್ಯರಿಗೆ ಅರ್ಥ ಆಗೋದಿಲ್ಲ ಅಂತ ಎಣಿಸಿದ್ದೀರಾ” ಎಂದು ಕೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಆರ್‌ ಅಶೋಕ್‌ಗೆ ಜಿಎಸ್‌ಟಿ ಸೇರಿ ಕೇಂದ್ರದ ಅನ್ಯಾಯ ಕುರಿತು ಸಚಿವ ಕೃಷ್ಣ ಬೈರೇಗೌಡ ಪಾಠ!

“ರಾಜ್ಯದ ಹಿತಾಸಕ್ತಿ ಕಾಪಾಡಬೇಕು, ರಾಜ್ಯದ ಬೊಕ್ಕಸಕ್ಕೆ ಒಂದು ನಾಲ್ಕು ಕಾಸು ಹೆಚ್ಚು ಬರಬೇಕು ಎನ್ನುವ ಉದ್ದೇಶ ತಮಗೆ ಮತ್ತು ತಮ್ಮ ಕಾಂಗ್ರೆಸ್ ಪಕ್ಷಕ್ಕೆ ಕಿಂಚಿತ್ತಾದರೂ ಇದ್ದಿದ್ದರೆ ತಾವು, ತಮ್ಮ ಕಾಂಗ್ರೆಸ್ ಸರ್ಕಾರ ಕೇಂದ್ರ ಸರ್ಕಾರದ ಜೊತೆ ವ್ಯವಹರಿಸುವ ರೀತಿಯೇ ಬೇರೆ ಇರುತ್ತಿತ್ತು. ಆದರೆ ಸತ್ಯ ಏನಪ್ಪಾ ಅಂದರೆ, ನಿಮಗೆ ಅದ್ಯಾವ ಸದುದ್ದೇಶವೂ ಇಲ್ಲ. ತಮಗೆ ಬೇಕಾಗಿರೋದೆಲ್ಲ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಗೊಬೆ ಕೂರಿಸೋದು, ಆ ಮೂಲಕ ತಮ್ಮ ಸರ್ಕಾರದ ವೈಫಲ್ಯಗಳನ್ನ, ಭ್ರಷ್ಟಾಚಾರವನ್ನ, ತಪ್ಪುಗಳನ್ನ ಮುಚ್ಚಿಕೊಳ್ಳೋದು. ಜನರ ಗಮನ ಬೇರೆಡೆ ಸೆಳೆಯೋದು. ಬಿಜೆಪಿ ವಿರುದ್ಧ ಒಂದು ನರೆಟೀವ್‌ ಸೃಷ್ಟಿಸೋದು” ಎಂದು ವಿಶ್ಲೇಷಿಸಿದ್ದಾರೆ.

“ಜವಾಬ್ದಾರಿಯುತ ಸ್ಥಾನದಲ್ಲಿರುವವರು ಮನೆಹಾಳು ಮಾಡುವ ಕೆಲಸ ಮಾಡಬಾರದು. ಇವತ್ತು ನೀವು “ನಮ್ಮ ತೆರಿಗೆ ನಮ್ಮ ಹಕ್ಕು” ಎನ್ನುತ್ತೀರಿ. ನಾಳೆ ಬೆಂಗಳೂರಿನ ಜನತೆ ನಮ್ಮ ತೆರಿಗೆ ನಮ್ಮ ಹಕ್ಕು ಎನ್ನುತ್ತಾರೆ. ಮುಂದೊಂದು ದಿನ ಮಹದೇವಪುರದ ಜನ ನಮ್ಮ ತೆರಿಗೆ ನಮ್ಮ ಹಕ್ಕು ಎನ್ನುತ್ತಾರೆ. ಹೀಗೆ ಮುಂದುವರೆದರೆ ಪ್ರತಿಯೊಂದು ಧರ್ಮ, ಜಾತಿಯವರು ನಮ್ಮ ತೆರಿಗೆ ನಮ್ಮ ಹಕ್ಕು ಎನ್ನುತ್ತಾರೆ. ಹೀಗಾದರೆ ಇದಕ್ಕೆ ಕೊನೆ ಎಲ್ಲಿ” ಎಂದು ಪ್ರಶ್ನಿಸಿದ್ದಾರೆ.

“ಇದೆಲ್ಲಾ ತಮಗೆ ಗೊತ್ತಿಲ್ಲ ಎಂದೇನಿಲ್ಲ. ಬಹುಶಃ ಅತೀ ಬುದ್ಧಿವಂತಿಕೆ ಪ್ರದರ್ಶನ ಮಾಡುವ ಮೂಲಕ ಹೈಕಮಾಂಡ್ ಗಮನ ಸೆಳೆದು ಮುಖ್ಯಮಂತ್ರಿ ಕುರ್ಚಿಗೆ ನನ್ನದೂ ಒಂದು ಇರಲಿ ಅಂತ ಟವಲ್ ಹಾಕುತ್ತಿರಬಹುದು. ದುರಾಡಳಿತದಿಂದ ಬೇಸತ್ತಿರುವ ಕರ್ನಾಟಕಕ್ಕೆ ನಿಮ್ಮಂತಹ ಸುಶಿಕ್ಷಿತ, ಸಭ್ಯ, ಬುದ್ಧಿವಂತ ನಾಯಕರು ಮುಖ್ಯಮಂತ್ರಿ ಆದರೆ ಒಳ್ಳೆಯದೇ! ಆದರೆ ನಿಮ್ಮ ಕಾಂಗ್ರೆಸ್ ಹೈಕಮಾಂಡ್ ಗೆ ಬೇಕಾಗಿರೋದು ‘ಸಂಪನ್ಮೂಲ’ ಒದಗಿಸುವ ಮಹಾನಾಯಕರೇ ಹೊರತು ನಿಮ್ಮಂತಹ ಸಂಪನ್ಮೂಲ ವ್ಯಕ್ತಿಗಳಲ್ಲ. ಒಟ್ಟಿನಲ್ಲಿ ನಿಮಗೆ ಶುಭವಾಗಲಿ” ಎಂದು ಲೇವಡಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X