ಜಿ ಟಿ ದೇವೇಗೌಡರು ತಮ್ಮ ಆತ್ಮಸಾಕ್ಷಿಯ ಕರೆಗೆ ಓಗೊಟ್ಟು ಮಾತನಾಡಿದ್ದಾರೆ: ಸಿಎಂ ಸಿದ್ದರಾಮಯ್ಯ

Date:

ಜಿ ಟಿ ದೇವೇಗೌಡರು ತಮ್ಮ ಆತ್ಮಸಾಕ್ಷಿಯ ಕರೆಗೆ ಓಗೊಟ್ಟು, ತಾಯಿ ಚಾಮುಂಡೇಶ್ವರಿಯನ್ನು ಸಾಕ್ಷಿಯಾಗಿಟ್ಟುಕೊಂಡು ದಸರಾ ಹಬ್ಬದ ಬೃಹತ್ ಸಮಾರಂಭದಲ್ಲಿ ಸತ್ಯ ಮಾತನಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

- Advertisement -

ಎಕ್ಸ್‌ ತಾಣದಲ್ಲಿ ಈ ಬಗ್ಗೆ ಬರೆದುಕೊಂಡಿರುವ ಅವರು, “ಶಾಸಕ ಮಿತ್ರರಾದ ಜಿ.ಟಿ.ದೇವೇಗೌಡರು ಬಹಳ ವರ್ಷಗಳಿಂದ ನನ್ನ ವೈಯಕ್ತಿಕ ಮತ್ತು ರಾಜಕೀಯ ಜೀವನವನ್ನು ಸಮೀಪದಿಂದ ಕಂಡು ಬಲ್ಲವರು. ಕಳೆದ ಹಲವು ವರ್ಷಗಳಿಂದ ಅವರು ಮುಡಾದ ಸದಸ್ಯರೂ ಆಗಿದ್ದಾರೆ. ರಾಜಕೀಯವಾಗಿ ನಾವು ಬೇರೆ ಬೇರೆ ಪಕ್ಷದಲ್ಲಿರಬಹುದು. ಆದರೆ ಸತ್ಯ ಮತ್ತು ನ್ಯಾಯಕ್ಕೆ ಪಕ್ಷ ಇಲ್ಲ. ಅದು ವ್ಯಕ್ತಿಯ ಆತ್ಮಸಾಕ್ಷಿಗೆ ಸಂಬಂಧಿಸಿದ್ದು” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ನಾನೆಂದೂ ದ್ವೇಷದ ರಾಜಕೀಯ ಮಾಡಿದವನಲ್ಲ, ವಿರೋಧಿ ರಾಜಕಾರಣಿಗಳ ವೈಯಕ್ತಿಕ ಬದುಕು ಇಲ್ಲವೆ, ಅವರ ಕುಟುಂಬವನ್ನು ರಾಜಕೀಯ ಜಿದ್ದಾಜಿದ್ದಿಗೆ ಬಳಸಿಕೊಂಡವನಲ್ಲ. ಬಿಜೆಪಿ ಮತ್ತು ಜೆಡಿಎಸ್ ಪಕ್ಷದಲ್ಲಿರುವ ಅನೇಕ ನಾಯಕರಿಗೆ ಜಿ.ಟಿ.ದೇವೇಗೌಡರು ಹೇಳಿರುವ ಸತ್ಯ ಗೊತ್ತಿದೆ. ಆದರೆ ತಮ್ಮ ಪಕ್ಷದ ಕೆಲವು ಹಿರಿಯ ನಾಯಕರ ಒತ್ತಡಕ್ಕೆ ಬಲಿಯಾಗಿ ಮೌನವಾಗಿದ್ದಾರೆ. ಅವರು ಕೂಡಾ ಮುಕ್ತವಾಗಿ ಮಾತನಾಡಬೇಕಾದ ಕಾಲ ಸನ್ನಿಹಿತವಾಗಿದೆ” ಎಂದು ಹೇಳಿದ್ದಾರೆ.

“ರಾಜಕೀಯವನ್ನು ರಾಜಕೀಯವಾಗಿ ಎದುರಿಸಬೇಕೇ ವಿನ: ಸುಳ್ಳು ಆರೋಪಗಳ ಮೂಲಕ ಹೆಣೆಯುವ ರಾಜಕೀಯ ಷಡ್ಯಂತ್ರದಿಂದ ಅಲ್ಲ. ಈ ಕೆಟ್ಟ ಪರಂಪರೆಯನ್ನು ತಡೆಗಟ್ಟಬೇಕಾದರೆ ನಮ್ಮ ರಾಜಕೀಯ ನಾಯಕರೆಲ್ಲರೂ ಪಕ್ಷಾತೀತವಾಗಿ ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲುವ ಧೈರ್ಯ ಮಾಡಬೇಕಾಗುತ್ತದೆ. ಈ ಮೂಲಕ ಕರ್ನಾಟಕದಿಂದ ಹೊಸ ರಾಜಕೀಯ ಪರಂಪರೆಗೆ ನಾಂದಿ ಹಾಡಬೇಕಾಗುತ್ತದೆ” ಎಂದು ಹೇಳಿ “ಸತ್ಯಮೇವ ಜಯತೆ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...