ತಾವು ತೊಂದರೆಗೆ ಸಿಗದಿರಲಿ ಅಂತ ಸಿದ್ದರಾಮಯ್ಯ ಪರ ಜಿ ಟಿ ದೇವೇಗೌಡ ಬ್ಯಾಟ್‌ : ಕುಮಾರಸ್ವಾಮಿ

Date:

ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿರುವ ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಬಿಜೆಪಿ-ಜೆಡಿಸ್ ಮುಖಂಡರ ವಿರುದ್ಧ ಜೆಡಿಎಸ್ ಶಾಸಕ ಜಿ ಟಿ ದೇವೇಗೌಡ ಮೈಸೂರು ದಸರಾ ವೇದಿಕೆಯಲ್ಲೇ ತಿರುಗೇಟು ನೀಡಿದ್ದಾರೆ.

- Advertisement -

ಸ್ವಪಕ್ಷದ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸಿರುವ ಜಿ ಟಿ ದೇವೇಗೌಡ ನಡೆಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, “ಜಿ ಟಿ ದೇವೇಗೌಡ ಅವರು ಮೈಸೂರಿನವರು. ಅವರು ತೊಂದರೆಗೆ ಸಿಗದೇ ಇರಲಿ ಅಂತ ಹೀಗೆ ಹೇಳಿರಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ನನ್ನ ವಿರುದ್ಧ ಯಾರು ಏನೇ ಷಡ್ಯಂತ್ರ ಮಾಡಲಿ. ಏನೂ ಮಾಡಲು ಆಗುವುದಿಲ್ಲ. ನಾನು ಎಂದೂ ಸಿಎಂ ಸಿದ್ದರಾಮಯ್ಯ‌ ಅವರು ರಾಜೀನಾಮೆ ನೀಡಿ ಎಂದು ಆಗ್ರಹಿಸಿಲ್ಲ. ಅವರ ನಿತ್ಯದ ಹೇಳಿಕೆ ನೋಡಿ ರಾಜೀನಾಮೆ ನೀಡಿದರೆ ಒಳ್ಳೆಯದು ಎಂದಿರುವೆ” ಎಂದು ಹೇಳಿದರು.

“ಎಫ್‌ಐಆರ್‌ ದಾಖಲಾದವರೆಲ್ಲ ರಾಜೀನಾಮೆ ನೀಡಬೇಕು ಅಂತ ನಾನು ಯಾವಾಗ ಹೇಳಿರುವೆ? ತಮ್ಮನ್ನು ರಕ್ಷಿಸಿಕೊಳ್ಳಲು ಜಿ ಟಿ ದೇವೇಗೌಡ ಅವರು ಸಿದ್ದರಾಮಯ್ಯ ಅವರನ್ನು ಸಮರ್ಥಿಸಿಕೊಂಡಿದ್ದಾರೆ” ಎಂದು ದೂರಿದರು.

ಜಿ ಟಿ ದೇವೇಗೌಡ ಹೇಳಿದ್ದೇನು?

ನಾಡಹಬ್ಬ ದಸರಾ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ‌ ವಹಿಸಿ ಮಾತನಾಡಿದ ಅವರು, “ಮುಡಾ ಪ್ರಕರಣದಲ್ಲಿ ಯಾರೆಲ್ಲರ‌ ವಿರುದ್ಧ ಎಫ್‌ಐಆರ್ ದಾಖಲಾಗಿದೆಯೋ‌ ಎಲ್ಲರೂ ರಾಜೀನಾಮೆ‌ ಕೊಡಲಿ. ಕುಮಾರಸ್ವಾಮಿ ಕೂಡ ರಾಜೀನಾಮೆ ನೀಡಲಿ” ಎಂದಿದ್ದರು.

“ಅವರೆಲ್ಲರಿಗೂ ದೇವಿ ಚಾಮುಂಡೇಶ್ವರಿ ಒಳ್ಳೆ ಬುದ್ಧಿ ಕೊಡಲಿ. ಮುಡಾ ಹಗರಣದಲ್ಲಿ ಸಿಎಂ ರಾಜೀನಾಮೆ ನೀಡಬೇಕೆಂದು ವಾದಿಸುತ್ತಾ ಹೋದರೆ ರಾಜ್ಯದಲ್ಲಿ ಎಲ್ಲ ರಾಜಕೀಯ ನಾಯಕರೂ ರಾಜೀನಾಮೆ ನೀಡಬೇಕಾದೀತು. ಹಾಗೆ ಮಾಡಲು ಸಾಧ್ಯವೇ” ಎಂದು ಪ್ರಶ್ನಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...