ಮೈಸೂರು | ಸಿಎಂ ಸಿದ್ದರಾಮಯ್ಯ ಪರ ಜಿಟಿಡಿ ಅಬ್ಬರ; ಸ್ವಪಕ್ಷೀಯರ ವಿರುದ್ಧವೇ ವಾಗ್ದಾಳಿ

Date:

ಆಪಾದಿತ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಆಗ್ರಹಿಸುತ್ತಿರುವ ಬಿಜೆಪಿ-ಜೆಡಿಎಸ್ ನಾಯಕರಿಗೆ ಜೆಡಿಎಸ್‌ ಕೋರ್ ಕಮಿಟಿ ಅಧ್ಯಕ್ಷ, ಶಾಸಕ ಜಿ ಟಿ ದೇವೇಗೌಡ ಟಾಂಗ್ ಕೊಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಬ್ಯಾಟಿಂಗ್‌ ಮಾಡುವ ಮೂಲಕ ಅಬ್ಬರಿಸಿದ್ದಾರೆ.

- Advertisement -

ಮೂಸೂರಿನಲ್ಲಿ ನಡೆದ ದಸರಾ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಜಿ.ಡಿ ದೇವೇಗೌಡ, “ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅವಶ್ಯಕತೆ ಇಲ್ಲ. ರಾಜೀನಾಮೆ ಕೋಡೋದೆ ಆದರೆ, ಎಫ್ಐಆರ್ ಆಗಿರೋ ಎಲ್ಲ ನಾಯಕರು ಕೊಡಲಿ. ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯೂ ರಾಜೀನಾಮೆ ಕೊಡಲಿ” ಎಂದಿದ್ದಾರೆ. ತಮ್ಮದೇ ಪಕ್ಷದ ಅಧ್ಯಕ್ಷ ಕುಮಾರಸ್ವಾಮಿ ವಿರುದ್ಧವೇ ಗುಡುಗಿದ್ದಾರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

“ಎಲ್ಲರು ಗಾಜಿನ ಮನೆಯಲ್ಲಿ ಕೂತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡಲು ನ್ಯಾಯಾಲಯ ಹೇಳಿದೆಯಾ? ಕೇಂದ್ರದಲ್ಲಿ ಮಂತ್ರಿ ಆದವರಿಗೆ ಜವಾಬ್ದಾರಿ ಬೇಡವಾ? ಕುಮಾರಸ್ವಾಮಿಗೆ ರಾಜೀನಾಮೆ ಕೊಡು ಅಂದರೆ ಕೊಡುತ್ತಾರಾ? 136 ಸ್ಥಾನ ಗೆದ್ದು ಮುಖ್ಯಮಂತ್ರಿ ಆಗಿರುವ ಸಿದ್ದರಾಮಯ್ಯ ರಾಜೀನಾಮೆ ಕೊಡಲು ಆಗುತ್ತಾ?” ಎಂದು ಅಬ್ಬರಿಸಿದ್ದಾರೆ.

“ಒಂದು ಅತ್ಯಾಚಾರ, ಕೊಲೆ ಪ್ರಕರಣವನ್ನು ಮೂರು ತಿಂಗಳು ಮಾಧ್ಯಮಗಳಲ್ಲಿ ತೋರಿಸಲಾಗುತ್ತದೆ. ಒಂದು ಎಫ್ಐಆರ್‌ನ ಎಷ್ಟು ದಿನ ತೋರಿಸುತ್ತಿರಾ? ಯಾರ ಯಾರ ಮೇಲೆ ಎಫ್‌ಐಆರ್ ಆಗಿದೆ. ಎಲ್ಲರೂ ರಾಜೀನಾಮೆ ಕೊಡಿ” ಎಂದು ಬಿಜೆಪಿ-ಜೆಡಿಎಸ್‌ ನಾಯಕರಿಗೆ ಸವಾಲು ಹಾಕಿದ್ದಾರೆ.

ಜಿಟಿ ದೇವೇಗೌಡರ ಭಾಷಣ ಕಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಸೇರಿದಂತೆ ಕಾಂಗ್ರೆಸ್‌ ಸಚಿವರು, ಶಾಸಕರೇ ಆಶ್ಚರ್ಯಚಕಿತರಾದರು. ಭಾಷಣ ಮುಗಿಸಿ ತಮ್ಮ ಸ್ಥಾನಕ್ಕೆ ತೆರಳಿದ ಜಿ.ಟಿ ದೇವೇಗೌಡರಿಗೆ ಶಾಸಕ ರಮೇಶ್ ಬಂಡೀಸಿದ್ದೇಗೌಡ, ತನ್ವೀರ್ ಸೇಠ್‌ ಎದ್ದು ನಿಂತು ಗೌರವ ಸಲ್ಲಿಸಿದರು. ಸಚಿವ ಹೆಚ್.ಕೆ ಪಾಟೀಲ್, ಕೆ ವೆಂಕಟೇಶ್‌ ಹಸ್ತಲಾಘವ ಮಾಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಟ್ಕಳ | ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ ಬಸ್ ಕಳವು

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ...

ಯಲ್ಲಾಪುರ | ಉಡ ಬೇಟೆ ಆರೋಪ: ತಂದೆ-ಮಗ ಬಂಧನ

ಅಕ್ರಮವಾಗಿ ವನ್ಯಪ್ರಾಣಿಗಳನ್ನು ಬೇಟೆಯಾಡಿ, ಅದರ ಮಾಂಸವನ್ನು ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ...

ಉಡುಪಿ | ಡಾ.ಮೆಹೆವಿಶ್ ಮುಶೀರ್ ಶೇಖ್‌ಗೆ ಪಿಎಚ್‌ಡಿ ಪದವಿ

ಡಾ. ಮಮತಾ ಬಾಲಚಂದ್ರ ಅವರ ಮಾರ್ಗದರ್ಶನದಲ್ಲಿ ಹಾಗೂ ಡಾ. ನರೇಂದ್ರ ವಿ.ಜಿ....