‘ಗ್ಯಾರಂಟಿ’ ಕಾಂಗ್ರೆಸ್‌ನ ಅಸಲಿ; ‘ಪ್ರಧಾನಿ ಗ್ಯಾರಂಟಿ’ ನಕಲಿ: ಲಕ್ಷ್ಮೀ ಹೆಬ್ಬಾಳ್ಕರ್

Date:

“ಗ್ಯಾರಂಟಿ ಎಂಬ ಪದ ಕರ್ನಾಟಕ ಮತ್ತು ಕಾಂಗ್ರೆಸ್‌ನಿಂದ ಬಂದಿದೆ. ಈಗ ದೊಡ್ಡ ಹೋರ್ಡಿಂಗ್‌ಗಳಲ್ಲಿ ‘ಪ್ರಧಾನಿ ಗ್ಯಾರಂಟಿ’ ಎಂದು ಬಿಜೆಪಿ ಬಿಂಬಿಸುತ್ತಿದೆ. ಇದು ನಮ್ಮ ಗ್ಯಾರಂಟಿಯ ನಕಲು ಅಷ್ಟೇ” ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದರು.

ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, “ರಾಜ್ಯದಲ್ಲಿ ನಾವು ಆಶ್ವಾಸನೆ ನೀಡಿದಂತೆ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನಗೊಳಿಸಿದ್ದೇವೆ. ಗ್ಯಾರಂಟಿಯ ಮಹತ್ವ ಅರಿವಾಗಿ ಬಿಜೆಪಿಯವರು ಬಳಸುತ್ತಿದ್ದಾರೆ” ಎಂದರು.

“ಕೇಂದ್ರದಿಂದ ನಮಗೆ ಪದೇಪದೇ ಅನ್ಯಾಯವಾಗಿದೆ. ರಾಜ್ಯಕ್ಕೆ ಸಮರ್ಪಕವಾಗಿ ಅನುದಾನ ಸಿಗುತ್ತಿಲ್ಲ. ಬರ ಪರಿಸ್ಥಿತಿಯಲ್ಲಿ ಕೇಂದ್ರ ಸಹಾಯಕ್ಕೆ ಬರಲಿಲ್ಲ. ಹಾಗಾಗಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆಯೇ ಇದಕ್ಕೆ ಅಸ್ತ್ರ. ದೆಹಲಿಯಲ್ಲಿ ಫೆ.7ರಂದು ಪ್ರತಿಭಟನೆ ನಡೆಯುತ್ತಿದ್ದು, ಜಿಲ್ಲೆಯಲ್ಲಿರುವ ಕಾಂಗ್ರೆಸ್‌ನ 11 ಶಾಸಕರು ಮತ್ತು ಇಬ್ಬರು ವಿಧಾನ ಪರಿಷತ್‌ ಸದಸ್ಯರು ಭಾಗವಹಿಸಲಿದ್ದೇವೆ” ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಗರ ರಥ, ರಕ್ತ ಮತ್ತು ಭಾರತ ರತ್ನ

“ಬೆಳಗಾವಿ ಲೋಕಸಭೆ ಕ್ಷೇತ್ರದಿಂದ ನನ್ನ ಪುತ್ರ ಮೃಣಾಲ್ ಹೆಬ್ಬಾಳಕರ ಕೂಡ ಟಿಕೆಟ್ ಆಕಾಂಕ್ಷಿ. ಪಕ್ಷದ ಹೈಕಮಾಂಡ್ ಯಾರಿಗೆ ಟಿಕೆಟ್ ಕೊಡುತ್ತದೆಯೋ ಅವರನ್ನು ಗೆಲ್ಲಿಸುತ್ತೇವೆ. ನಾನು ಪಕ್ಷದ ಶಿಸ್ತಿನ ಸಿಪಾಯಿ. ಹೈಕಮಾಂಡ್ ನಿರ್ಧಾರವೇ ನಮ್ಮ ನಿರ್ಧಾರ” ಎಂದು ಹೇಳಿದರು.

ಲಕ್ಷ್ಮಣ ಸವದಿ ಪಕ್ಷ ಬಿಡುವುದಿಲ್ಲ

“ಎಲ್ಲ ಪಕ್ಷಗಳು ಲೋಕಸಭಾ ಚುನಾವಣೆಗೆ ತಯಾರಿ ನಡೆಸುತ್ತೇವೆ. ನಾವು ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಿಗೆ ತಿಳಿವಳಿಕೆ ಮೂಡಿಸುತ್ತಿದ್ದೇವೆ. ಲಕ್ಷ್ಮಣ ಸವದಿ ಪಕ್ಷ ಬಿಡುವ ವಿಚಾರ ಸುಳ್ಳು” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೈಲಿಗೆ ಬೆಂಕಿ ಹಚ್ಚಿ ಸುಡುತ್ತೇವೆ ಎಂದವರನ್ನು ಒದ್ದು ಒಳಗೆ ಹಾಕಬೇಕು: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಅಯೋಧ್ಯೆಯ ರಾಮ ಮಂದಿರಕ್ಕೆ ತೆರಳುತ್ತಿದ್ದ ರೈಲಿಗೆ ಹೊಸಪೇಟೆಯಲ್ಲಿ ಬೆಂಕಿ ಹಚ್ಚಿ ಸುಡುತ್ತೇವೆ...

ವಿಪಕ್ಷ ನಾಯಕ ಸ್ಥಾನದಿಂದ ಅಶೋಕ್‌ರನ್ನು ಕೆಳಗಿಳಿಸಿ: ಬಿಜೆಪಿ ರಾಜ್ಯಾಧ್ಯಕ್ಷರಿಗೆ ಬಜರಂಗದಳ ಒತ್ತಾಯ

ಬಜೆಟ್ ಅಧಿವೇಶನದ ವೇಳೆ ಮಾತನಾಡುತ್ತಿದ್ದ ಸಂದರ್ಭದಲ್ಲಿ ವಿಪಕ್ಷ ನಾಯಕ ಆರ್. ಅಶೋಕ್,...

ನಟ ದರ್ಶನ್ ವಿರುದ್ಧ ಮತ್ತೆರಡು ದೂರು ದಾಖಲು; ಕ್ಷಮೆ ಕೇಳಿದ ಶಫಿ

ನಟ ದರ್ಶನ್ ಮತ್ತು ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ನಡುವಿನ ಗಲಾಟೆ...