ಸರ್ಕಾರದ ಐತಿಹಾಸಿಕ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸಮಿತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದಿಸಿದ್ದಾರೆ.
ಮಾಜಿ ಸಚಿವ ಹೆಚ್.ಎಂ.ರೇವಣ್ಣ ಅವರು ಅಧ್ಯಕ್ಷರಾಗಿ ಕ್ಯಾಬಿನೆಟ್ ದರ್ಜೆ ಹೊಂದಲಿದ್ದಾರೆ ಎಂದು ಸಿಎಂ ಕಚೇರಿ ಮಾಹಿತಿ ನೀಡಿದೆ.
ಉಪಾಧ್ಯಕ್ಷರಾಗಿ ಮೆಹರೂಜ್ ಖಾನ್, ಪುಷ್ಪಾ ಅಮರನಾಥ್, ಎಸ್.ಆರ್.ಪಾಟೀಲ್ ಮತ್ತು ಸೂರಜ್ ಹೆಗ್ಡೆ ಅವರ ಹೆಸರನ್ನು ಮುಖ್ಯಮಂತ್ರಿಗಳು ಅನುಮೋದಿಸಿದ್ದಾರೆ.
44 ಮಂದಿ ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿಗೂ ಸಿಎಂ ಅನುಮೋದನೆ
ಇದೇ ವೇಳೆ, 44 ಮಂದಿ ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದಿಸಿದ್ದಾರೆ. ಈ ಪಟ್ಟಿ ಆಯಾ ಇಲಾಖೆಗಳಿಗೆ ರವಾನೆಯಾಗಿದೆ. ನಾಳೆ ಆಯಾ ಇಲಾಖೆಗಳಿಂದ ಪ್ರತಿಯೊಬ್ಬರಿಗೂ ವೈಯುಕ್ತಿಕವಾಗಿ ನೇಮಕ ಆದೇಶ ರವಾನೆಯಾಗಲಿದೆ ಎಂದು ಸಿಎಂ ಕಚೇರಿ ಮಾಹಿತಿ ನೀಡಿದೆ.
