ಲೋಕಸಭಾ ಚುನಾವಣೆ | ಗ್ಯಾರಂಟಿ ಯೋಜನೆಗಳು ಮಹಿಳಾ ಮತದಾನದ ಪ್ರಮಾಣವನ್ನು ಹೆಚ್ಚಿಸಲಿವೆಯೇ?

Date:

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು 2023ರ ವಿಧಾನಸಭಾ ಚುನಾವಣೆಯಲ್ಲಿ ಘೋಷಿಸಿದ ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಪಕ್ಷಕ್ಕೆ ಬಹುಮತವನ್ನು ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿವೆ.

ಮಹಿಳಾ ಮತದಾನವು ಒಂದು ರಾಷ್ಟ್ರ ಮತ್ತು ರಾಜ್ಯದ ಬಹುಮತದ ಸರ್ಕಾರವನ್ನು ರಚಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ದೇಶದ ಒಟ್ಟು ಮತದಾರರ ಸಂಖ್ಯೆ 96.88 ಕೋಟಿ, ಅದರಲ್ಲಿ ಪುರುಷ ಮತದಾರರ ಸಂಖ್ಯೆ 49.7ಕೋಟಿ. ಮಹಿಳಾ ಮತದಾರರ ಸಂಖ್ಯೆ 47.1 ಕೋಟಿಯಷ್ಟಿದ್ದು, ಈ ಅಂಕಿ ಅಂಶಗಳನ್ನು ಗಮನಿಸಿದಾಗ ಸರ್ಕಾರ ರಚನೆಯಲ್ಲಿ ಮಹಿಳಾ ಮತದಾರರ ಪಾತ್ರ ಎಷ್ಟು ಮುಖ್ಯ ಎಂಬುದನ್ನು ಅರ್ಥಮಾಡಿಕೊಳ್ಳಬಹುದಾಗಿದೆ‌.

- Advertisement -

ಮಹಿಳಾ ಮತದಾನವನ್ನು ಹೆಚ್ಚಿಸುವಲ್ಲಿ ಮಹಿಳಾ ಪರವಾದ ಯೋಜನೆಗಳ ಪಾತ್ರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಹಿಂದಿನ ಚುನಾವಣೆಗಳ ಸಂದರ್ಭದಲ್ಲಿ ಮಹಿಳೆಯರನ್ನು “ನೀವು ಯಾರಿಗೆ ವೋಟ್ ಹಾಕ್ತೀರಿ ಅಂತ ಕೇಳಿದಾಗ” “ಯಾರಿಗೆ ವೋಟ್ ಹಾಕಿದ್ರ ಎನ್ ಬರ್ತೈತ್ರಿ ನಾವು ದುಡಿಯುವದಂತೂ ತಪ್ಪಾಂಗಿಲ್ಲಾರಿ” ಎಂಬ ಮಾತುಗಳು ಸಾಮಾನ್ಯವಾಗಿದ್ದವು. ಆದರೆ ಇತ್ತೀಚಿನ ವರ್ಷಗಳಲ್ಲಿ ನಡೆದ ಚುನಾವಣೆಯಲ್ಲಿ ಮಹಿಳೆಯರು ಅತ್ಯಂತ ಆಸಕ್ತಿಯಿಂದ ಮತದಾನದಲ್ಲಿ ಭಾಗಿಯಾಗುತ್ತಿದ್ದಾರೆ ಮತ್ತು ಮಹಿಳಾ ಪರವಾದ ಯೋಜನೆಗಳು ಸಹ ಇದಕ್ಕೆ ಪ್ರಮುಖ ಕಾರಣವಾಗಿವೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು 2023ರ ವಿಧಾನಸಭಾ ಚುನಾವಣೆಯಲ್ಲಿ ಘೋಷಿಸಿದ ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಪಕ್ಷಕ್ಕೆ ಬಹುಮತವನ್ನು ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿವೆ.

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಮಹಿಳೆಯರ ಮನಸ್ಸು ಗೆದ್ದಿರುವುದಕ್ಕೆ ಬೆಳಗಾವಿ ಜಿಲ್ಲೆಯ ಎರಡು ಘಟನೆಗಳೆ ಸಾಕ್ಷಿ

ಬೆಳಗಾವಿ ಜಿಲ್ಲೆ ಸಂಗೊಳ್ಳಿ ಗ್ರಾಮದ ನಿಂಗವ್ವ ಸಿಂಗಾಡಿ ಎಂಬ ಅಜ್ಜಿಯು ಸವದತ್ತಿಯಲ್ಲಿರುವ ತನ್ನ ಮೊಮ್ಮಗನ ಮನೆಯ ಗೃಹ ಪ್ರವೇಶಕ್ಕೆ ಹೋಗಲು ಧಾರವಾಡ-ಗೋಕಾಕ ಬಸ್ ಹತ್ತುವಾಗ ಬಸ್ ನ ಮೆಟ್ಟಿಲುಗಳಿಗೆ ತಲೆ ಬಾಗಿ ನಮಸ್ಕರಿಸಿದ ಘಟನೆ ರಾಜ್ಯದ ತುಂಬೆಲ್ಲ ದೊಡ್ಡ ಸುದ್ದಿಯನ್ನು ಮಾಡಿತ್ತು ಹಾಗೂ ಶಕ್ತಿ ಯೋಜನೆಯ ಮಹತ್ವದ ಬಗ್ಗೆ ಅರಿವು ಮೂಡಿಸಿತ್ತು.

ಇನ್ನೊಂದು ಘಟನೆ: ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮರಕುಂಬಿ ಗ್ರಾಮದ ವಿಶ್ವನಾಥ ಗುರಕ್ಕನವರ (34) ಮೃತಪಟ್ಟಾಗ, ಅಂತ್ಯಸಂಸ್ಕಾರದ ಸಂದರ್ಭದಲ್ಲಿ ವಿಶ್ವನಾಥ ಅವರ ತಾಯಿ ನೀಲವ್ವ ಅಳುತ್ತಲೇ “ಯವ್ವಾ ನೀ ಬದುಕಾಕ ಗೃಹಲಕ್ಷ್ಮೀ ಯೋಜನೆಯ 2 ಸಾವಿರ ರೂಪಾಯಿ ಬರ್ತಾವ ಬಿಡು” ಎಂದು ಹೇಳಿದ್ದ ಮಗನ ಮಾತನ್ನು ನೆನಪಿಸಿಕೊಂಡು ತಾಯಿ ಕಣ್ಣೀರು ಹಾಕಿದ್ದು, ಗೃಹಲಕ್ಷ್ಮೀ ಯೋಜನೆಯು ಮಹಿಳೆಯರಿಗೆ ಅದೆಷ್ಟು ಅನುಕೂಲವಾಗಿದೆ ಎಂದು ತಿಳಿಸಿಕೊಟ್ಟಿತ್ತಲ್ಲದೆ, ಬಿಟ್ಟಿಭಾಗ್ಯವೆಂದು ಅಪಪ್ರಚಾರ ಮಾಡುತ್ತಿದ್ದವರ ಕಣ್ಣು ತೆರೆಸಿತ್ತು. ರಾಜ್ಯದಲ್ಲಿ ಒಟ್ಟು ಮತದಾರರ ಸಂಖ್ಯೆ 5 ಕೋಟಿ 42 ಲಕ್ಷಕ್ಕೂ ಅಧಿಕವಾಗಿದ್ದು ಅದರಲ್ಲಿ ಮಹಿಳಾ ಮತದಾರರ ಸಂಖ್ಯೆ 2 ಕೋಟಿ 70 ಲಕ್ಷಕ್ಕಿಂತ ಹೆಚ್ಚಿದ್ದು ಈ ಸಂಖ್ಯೆಯು ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲಿ ಲಾಭವನ್ನು ತಂದುಕೊಡಬಹುದಾಗಿದೆ.

ದೇಶದ 12 ರಾಜ್ಯಗಳಲ್ಲಿ ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚು

ಕೇರಳ, ತಮಿಳುನಾಡು, ಆಂಧ್ರ ಪ್ರದೇಶ, ಬಿಹಾರ, ಮಣಿಪುರ, ಮೇಘಾಲಯ, ಪುದುಚೆರಿ, ಗೋವಾ, ಅರುಣಾಚಲ ಪ್ರದೇಶ, ಉತ್ತರಾಖಂಡ, ಮಿಜೋರಾಂ, ದಿಯು ಮತ್ತು ದಾಮನ್‌ ಗಳಲ್ಲಿ ಪುರುಷರಿಗಿಂತ ಮಹಿಳಾ ಮತದಾರರ ಸಂಖ್ಯೆಯು ಅಧಿಕವಾಗಿದ್ದು, ಈ ಕಾರಣಕ್ಕಾಗಿ ಕಾಂಗ್ರೆಸ್ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಮಹಿಳಾ ನ್ಯಾಯ ಹೆಸರಿನಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ.

1. ಮಹಾಲಕ್ಷ್ಮೀ ಗ್ಯಾರಂಟಿ ಯೋಜನೆಯಡಿ ಬಡ ಕುಟುಂಬದ ಮಹಿಳೆಗೆ ವಾರ್ಷಿಕ 1 ಲಕ್ಷ ರೂಪಾಯಿ ಕೊಡುವುದು
2. ಆದಿ ಆಭಾರಿ ಪೂರಾ ಹಕ್
3. ಶಕ್ತಿ ಕಾ ಸಮ್ಮಾನ
4. ಅಧಿಕಾರ ಮೈತ್ರಿ
5. ಸಾವಿತ್ರಿಬಾಯಿ ಫುಲೆ ಹಾಸ್ಟೆಲ್

ಈ ಎಲ್ಲ ಯೋಜನೆಗಳು ಮಹಿಳೆಯರನ್ನು ಮತದಾನದತ್ತ ಸೆಳೆಯುವ ಸಾಧ್ಯತೆಗಳಿವೆ‌. ದೇಶದ ಮಹಿಳೆಯರ ಅಭಿವೃದ್ಧಿ ಆ ದೇಶದ ನಿಜವಾದ ಅಭಿವೃದ್ಧಿಯಾಗಿದ್ದು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವುದು ಪ್ರಜಾಪ್ರಭುತ್ವಕ್ಕೆ ತಂದುಕೊಡುವ ಜಯವಾಗಿದೆ‌.

WhatsApp Image 2025 11 17 at 5.27.06 PM
ಸುನಿಲ್ ಹಂಪನ್ನವರ
+ posts

ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಸುನಿಲ್ ಹಂಪನ್ನವರ
ಸುನಿಲ್ ಹಂಪನ್ನವರ
ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...