ಗ್ಯಾರಂಟಿ ಗೆಲುವು, ಕರ್ನಾಟಕದ ಗೆಲುವು, ನಿಮ್ಮೆಲ್ಲರ ಗೆಲುವು: ಸಿಎಂ ಸಿದ್ದರಾಮಯ್ಯ

Date:

ನುಡಿದಂತೆ ನಡೆಯುತ್ತೇವೆ ಎನ್ನುವುದು ನಾವು ಜನತೆಗೆ ನೀಡಿರುವ ವಚನ. ನಾವು ಉಳಿದವರಂತೆ ವಚನ ಭ್ರಷ್ಟರಲ್ಲ, ವಚನ ಪಾಲಕರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

“ನಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಐದಕ್ಕೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳುವುದು ಜನರಿಂದ ಆಯ್ಕೆಯಾದ ಒಂದು ಸರ್ಕಾರದ ಕರ್ತವ್ಯ, ಈ ಯೋಜನೆಗಳು ದುರುಪಯೋಗ ಆಗದಂತೆ ಪೂರ್ಣ ಪ್ರಮಾಣದಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕಿರುವುದು ನಿಮ್ಮೆಲ್ಲರ ಕರ್ತವ್ಯ”ಎಂದು ಎಕ್ಸ್‌ ತಾಣದಲ್ಲಿ ಹೇಳಿದ್ದಾರೆ.

ನಿಮ್ಮದೇ ತೆರಿಗೆ ಹಣ, ನಿಮ್ಮದೇ ಕಲ್ಯಾಣ ಕಾರ್ಯಕ್ರಮಗಳು, ಇವು ಉಚಿತ ಯೋಜನೆಗಳು ಎಂಬ ತಪ್ಪು ಕಲ್ಪನೆ ಬೇಡ. ಗ್ಯಾರಂಟಿಗಳ ಪ್ರತಿ ಪೈಸೆಯೂ ನಿಮ್ಮ ಬದುಕಿಗೆ ಸದುಪಯೋಗವಾಗಬೇಕು” ಎಂದು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅನ್ನಪೂರ್ಣಿ ‘ನಿಷೇಧ’- ಧರ್ಮಗಳ ನಡುವೆ ಬೆಂಕಿ ಇಟ್ಟು ಬೇಳೆ ಬೇಯಿಸುವ ಕೃತ್ಯ

“ಚುನಾವಣಾ ಪ್ರಣಾಳಿಕೆಯನ್ನು ಚುನಾವಣಾ ಪ್ರಚಾರಕ್ಕೆ ಸೀಮಿತಗೊಳಿಸದೆ ಅದನ್ನು ಕಾರ್ಯರೂಪಕ್ಕೆ ತಂದು, ಜನರ ಬದುಕಲ್ಲಿ ಅವುಗಳ ಪ್ರತಿಫಲ ಕಾಣಬೇಕು ಎಂಬುದು ಆಶಯ ನಮ್ಮದು. ನಮ್ಮ ಸರ್ಕಾರದ ಸದಾಶಯಕ್ಕೆ ತಮ್ಮೆಲ್ಲರ ಬೆಂಬಲವಿರಲಿ. ಗ್ಯಾರಂಟಿ ಗೆಲುವು, ಕರ್ನಾಟಕದ ಗೆಲುವು, ನಿಮ್ಮೆಲ್ಲರ ಗೆಲುವು” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ...

ಕಾಂಗ್ರೆಸ್‌ನಲ್ಲಿ ನಿಲ್ಲದ ಮುಖ್ಯಮಂತ್ರಿ ಅಭ್ಯರ್ಥಿ ಕೂಗು, ‘ನಾನೂ ಸಿಎಂ ಆಗುವೆ’ ಎಂದ ಬಸವರಾಜ ರಾಯರೆಡ್ಡಿ

ಖಾಲಿ ಇಲ್ಲದ ಸಿಎಂ ಕುರ್ಚಿಗಾಗಿ ಕ್ಷುಲ್ಲಕ ರಾಜಕಾರಣದಲ್ಲಿ ಮುಳುಗೇಳಿ, ವ್ಯರ್ಥ ಹೇಳಿಕೆ...

ಸಿಡಿ ಪ್ರಕರಣ | ಎಸ್‌ಐಟಿ ರಚನೆ ಪ್ರಶ್ನಿಸಿ ರಮೇಶ್‌ ಜಾರಕಿಹೊಳಿ ಸಲ್ಲಿಸಿದ ಅರ್ಜಿ ವಿಚಾರಣೆ ಮುಂದೂಡಿಕೆ

ಸಿಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಮಾಡಿರುವುದನ್ನು...

ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದೂಡಿದ ಹೈಕೋರ್ಟ್

ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಬಿಜೆಪಿ ಹಿರಿಯ...