ಬೆಲೆ ಏರಿಕೆಯಿಂದ ತತ್ತರಿಸಿದ ಜನರ ನೆರವಿಗಾಗಿ ಗ್ಯಾರಂಟಿಗಳನ್ನು ತರಬೇಕಾಯ್ತು: ದಿನೇಶ್ ಗುಂಡೂರಾವ್

Date:

  • ಬಿಜೆಪಿ ವಿರುದ್ಧ ಹರಿಹಾಯ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
  • ಜನಸಾಮಾನ್ಯರ ಹೊರೆ ಇಳಿಸಲು ತಂದ ಯೋಜನೆ ಕಾಂಗ್ರೆಸ್ ಗ್ಯಾರಂಟಿ

ಬಿಜೆಪಿ ಸರ್ಕಾರದ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನಸಾಮಾನ್ಯರಿಗೆ ನೆರವಾಗುವ ಸಲುವಾಗಿಯೇ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಬೇಕಾಯ್ತು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

- Advertisement -

ಉಚಿತ ಅಕ್ಕಿ ಹಂಚಿಕೆ ವಿಚಾರದಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿರುವ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಸರ್ಕಾರದ ನಡೆ ಖಂಡಿಸಿದ ಅವರು, “ಕೇಂದ್ರ ಸರ್ಕಾರ ನಮಗೆ ಸಹಕಾರ ಕೊಡಲಿ, ಬಿಡಲಿ ನಾವಂತೂ ನಮ್ಮ ಯೋಜನೆಗಳನ್ನು ಜನರಿಗೆ ತಲುಪಿಸುತ್ತೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪ್ರಜಾಪ್ರಭುತ್ವದ ಪ್ರತಿಭಟನೆ ಮತ್ತು ಪೊಲೀಸ್ ವ್ಯವಸ್ಥೆ

ಭಾರತದಲ್ಲಿ ಪ್ರತಿಭಟನೆಗಳಿಗೆ ಶತಮಾನಗಳ ಸಂಪ್ರದಾಯವಿದೆ. ಬ್ಯಾರಿಕೇಡ್‌ಗಳನ್ನು ಹಾರುವುದು, ಮಾನವ ಸರಪಳಿ ರಚಿಸುವುದು ಅಥವಾ ಬಂಧನವನ್ನು ವಿರೋಧಿಸಿ ನೆಲದ ಮೇಲೆ ಮಲಗುವುದು ಪ್ರಜಾಪ್ರಭುತ್ವದ ಸಹಜ ಆಂದೋಲನದ ಭಾಗವೇ ಹೊರತು ಖಂಡಿಸಬೇಕಾದ ಅಪರಾಧಗಳಲ್ಲ. ಅಕ್ಟೋಬರ್ 10ರಂದು ದೆಹಲಿಯಲ್ಲಿ...

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಈ ವಿಚಾರವನ್ನು ಟ್ವೀಟ್ ಮೂಲಕ ಹಂಚಿಕೊಂಡಿರುವ ಅವರು, “ಐದು ಗ್ಯಾರಂಟಿಗಳಿಂದ ಸರ್ಕಾರದ ಮೇಲೆ ಸಾಕಷ್ಟು ಹೊರ ಆಗುತ್ತಿದ್ದರೂ, ರಾಜ್ಯದ ಜನಸಾಮಾನ್ಯರ ಹೊರೆ ಇಳಿಯಲಿದೆ” ಎಂದು ಹೇಳಿಕೊಂಡಿದ್ದಾರೆ.

“ಕೇಂದ್ರ ಬಿಜೆಪಿ ಸರ್ಕಾರದ ತಪ್ಪು ಆರ್ಥಿಕ ನೀತಿಗಳಿಂದ ಬೆಲೆ ಏರಿಕೆ ಬಿಸಿ ಜನಸಾಮಾನ್ಯನಿಗೆ ತಟ್ಟಿದೆ. ಜನರ ಮೇಲಾಗಿರುವ ಬೆಲೆ ಏರಿಕೆಯ ಹೊರೆ ಕಡಿಮೆ ಮಾಡಲೆಂದೇ ಕಾಂಗ್ರೆಸ್ ಐದು ಗ್ಯಾರಂಟಿಗಳನ್ನ ತರಬೇಕಾಯ್ತು” ಎಂದು ಅವರು ಹೇಳಿಕೊಂಡಿದ್ದಾರೆ.

ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮಹಿಳೆಯೋರ್ಯೊವರು ಅಕ್ಕಿ ಬೇಳೆ ಕಾಳುಗಳ ಬೆಲೆ ಏರಿಕೆ ಕಡಿಮೆ ಮಾಡಿ ಎಂದು ಮನವಿ ಮಾಡಿದ್ದರು. ಮಹಿಳೆಯ ವಿಡಿಯೋವನ್ನ ಟ್ವೀಟ್ ಮಾಡಿದ್ದ ಬಿಜೆಪಿ ಸರ್ಕಾರದ ವಿರುದ್ಧ ಮಹಿಳೆಯರು ತಿರುಗಿ ಬಿದ್ದಿದ್ದಾರೆ ಎಂದು ಆರೋಪಿಸಿತ್ತು.

ಬಿಜೆಪಿ ಟ್ವೀಟ್‌ಗೆ ತಿರುಗೇಟು ನೀಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಬೆಲೆ ಏರಿಕೆ ಕೇಂದ್ರ ಬಿಜೆಪಿ ಸರ್ಕಾರದ ಕುರುಡು ಆರ್ಥಿಕ ನೀತಿಗಳಿಂದ ಆಗಿರುವುದು. ಬೆಲೆ ಏರಿಕೆಗೆ ನರೇಂದ್ರ ಮೋದಿಯವರಲ್ಲದೇ ಬೇರೆ ಯಾರು ಕಾರಣ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿಗೆ ಆತ್ಮಸಾಕ್ಷಿಯಿದ್ದರೆ ಬೆಲೆ ಏರಿಕೆಗೆ ಯಾರು ಕಾರಣ ಎಂದು ತಮ್ಮನ್ನ ತಾವು ಪ್ರಶ್ನಿಸಿಕೊಳ್ಳಲಿ ಎಂದಿದ್ದಾರೆ.

ಜನಸಾಮಾನ್ಯರಿಗೆ ನೇರವಾಗಿ ಬಿಸಿ ತಟ್ಟುವಂತಹ ನಾಲ್ಕು ಉತ್ಪನ್ನಗಳ ಬೆಲೆ ಏರಿಕೆಯ ಲಿಸ್ಟ್ ಟ್ವೀಟ್ ಮಾಡಿರುವ ಗುಂಡೂರಾವ್ ಇದಕ್ಕೆ ಯಾರು ಕಾರಣ ಎಂದು ಪ್ರಶ್ನಿಸಿದ್ದಾರೆ. “65 ರೂ ಇದ್ದ ಪೆಟ್ರೋಲ್ 103 ಆಯ್ತು, 50 ರೂ ಇದ್ದ ಡಿಸೇಲ್ ಬೆಲೆ 90 ರೂಪಾಯಿಗೆ ಏರಿಸಿದ್ರು. 80 ರೂಪಾಯಿ ಇದ್ದ ಅಡುಗೆ ಎಣ್ಣೆ 170ಕ್ಕೆ, 400 ರೂ ಇದ್ದ ಸಿಲೆಂಡರ್ ಗ್ಯಾಸ್ 1150 ರೂಗೆ ಏರಿಸಿದ್ದು ನಾವಾ? ಮೋದಿಯವರಾ?” ಎಂದು ಬಿಜೆಪಿಯನ್ನ ಪ್ರಶ್ನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಅಕ್ಕಿ ವಿತರಣೆ ರಾಜ್ಯ ಸರ್ಕಾರದ ಜವಾಬ್ದಾರಿ; ಕೇಂದ್ರ ಸರ್ಕಾರವನ್ನು ದೂರುವುದು ಸರಿಯಲ್ಲ: ಬಿಎಸ್‌ವೈ

ಇಷ್ಟೊಂದು ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯನ ಹೊರ ಇಳಿಸಲೆಂದೇ ಕಾಂಗ್ರೆಸ್ ಸರ್ಕಾರ ಗೃಹ ಲಕ್ಷ್ಮೀ, ಅನ್ನಭಾಗ್ಯ, ಗೃಹ ಜ್ಯೋತಿಯಂಥ ಕಾರ್ಯಕ್ರಮಗಳನ್ನು ತರಬೇಕಾಯ್ತು ಎಂದು ದಿನೇಶ್ ಗುಂಡೂರಾವ್ ಮಾಹಿತಿ ಹಂಚಿಕೊಂಡಿದ್ದಾರೆ. ಐದು ಗ್ಯಾರಂಟಿಗಳಿಂದ ಸರ್ಕಾರಕ್ಕೆ ಹೊರೆಯಾಗಬಹುದು. ಆದರೆ, ಜನರನ್ನು ಬೆಲೆ ಏರಿಕೆಯಿಂದ ರಕ್ಷಿಸುವುದು ಮುಖ್ಯವಾಗಿದೆ ಎಂದು ಗಂಡೂರಾವ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮಹಿಳೆಯರು ಬಿಜೆಪಿ ವಿರುದ್ಧ ತಿರುಗಿಬಿದ್ದು ಫಲಿತಾಂಶವನ್ನು ಕೊಟ್ಟಿದ್ದಾರೆ. ಕರ್ನಾಟಕ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ಬೆಲೆ ಏರಿಕೆ ವಿರುದ್ಧ ಮಹಿಳೆಯರ ಸಿಟ್ಟು ಸೆಡವು ಸ್ಪಷ್ಟವಾಗಿ ಕಾಣಿಸುತ್ತದೆ. ಹೀಗಿರುವಾಗ ಬಿಜೆಪಿ ಆಕಾಶಕ್ಕೆ ಉಗುಳುವ ಮೂರ್ಖತನ್ನ ಏಕೆ ಮಾಡುತ್ತಿದೆ ಎಂದು ಗುಂಡೂರಾವ್ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರತಿಭಟನೆ ತಡೆಯಲು ಸಾಮಾಜಿಕ ಕಾರ್ಯಕರ್ತನ ಗೃಹಬಂಧನ: ದೆಹಲಿ ಪೊಲೀಸರಿಗೆ ಹೈಕೋರ್ಟ್ ತರಾಟೆ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ದೆಹಲಿ ಪೊಲೀಸರ ಭೇಟಿಗೆ ಮುಂದಾದ ಸಿಜೆಪಿ ನಾಯಕರು: ಪ್ರತಿಭಟನೆಗೆ ಅನುಮತಿ ಕೋರಲು ನಿರ್ಧಾರ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಕಾಂಗ್ರೆಸ್ ನಾಯಕರ ಭೇಟಿಗೆ ನಕಾರ; ನಾಲ್ಕು ಕಾರಣಗಳು ನೀಡಿದ ಸಿಜೆಐ ಸೂರ್ಯ ಕಾಂತ್

ಏಕಪಕ್ಷೀಯ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್...