ಮಾರ್ಚ್ 31ಕ್ಕೆ ಕಾಂಗ್ರೆಸ್ ಸೇರುತ್ತೇನೆ; ಗುಬ್ಬಿ ಶ್ರೀನಿವಾಸ್

Date:


-‌ ಸಭಾಧ್ಯಕ್ಷರಿಗೆ ರಾಜೀನಾಮೆ ಸಲ್ಲಿಸಿದ ಗುಬ್ಬಿ ಜೆಡಿ‌ಎಸ್‌ ಶಾಸಕ ಶ್ರೀನಿವಾಸ್
ಕುಮಾರಸ್ವಾಮಿಯೊಂದಿಗಿನ ಮನಸ್ತಾಪ ಪಕ್ಷ ಬಿಡಲು ಕಾರಣ ಎಂದ ಶ್ರೀನಿವಾಸ್

ಜೆಡಿಎಸ್ ಶಾಸಕ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಸಿರುವ ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕ ಆರ್‌ ಶ್ರೀನಿವಾಸ್‌ ಮಾರ್ಚ್ 31ಕ್ಕೆ ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತು ನನ್ನ ನಡುವೆ ಆದ ಮನಸ್ತಾಪವೇ ಪಕ್ಷ ಬಿಡಲು ಕಾರಣ ಎಂದು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ನಾನು ನೋವಿನಿಂದ ಜೆಡಿಎಸ್‌ಗೆ ರಾಜೀನಾಮೆ ಸಲ್ಲಿಕೆ ಮಾಡುತ್ತಿದ್ದೇನೆ. ತುಮಕೂರಿನಲ್ಲಿ ಎಚ್‌ ಡಿ ದೇವೇಗೌಡರನ್ನ ಸೋಲಿಸಿಲ್ಲ. ನಾನು ಪಕ್ಷ ಬಿಡಲ್ಲ ಅಂದರೂ ಅಭ್ಯರ್ಥಿ ಘೋಷಿಸಿದರು ಇದು ನನಗೆ ನೋವು ತರಿಸಿತು. ಈ ಹಿನ್ನೆಲೆಯಲ್ಲಿ ನಾನು ಪಕ್ಷ ಬಿಡುವ ನಿರ್ಧಾರಕ್ಕೆ ಬಂದೆ” ಎಂದು ಶ್ರೀನಿವಾಸ್ ಹೇಳಿದರು.

“ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ಇಂದು ರಾಜೀನಾಮೆ ಸಲ್ಲಿಸಿದ್ದೇನೆ”, ನಮ್ಮ ತಾಲೂಕಿನ ಎಲ್ಲ ಮುಖಂಡರ ಜೊತೆ ಮಾತನಾಡಿಯೇ ಕಾಂಗ್ರೆಸ್ ಸೇರುವ ನಿರ್ಧಾರ ಮಾಡಿದ್ದೇನೆ” ಎಂದರು.

“ಶಾಸಕನಾಗಲು ಅವಕಾಶ ನೀಡಿದ ಜೆಡಿಎಸ್ ಪಕ್ಷಕ್ಕೆ ಧನ್ಯವಾದ ಹೇಳಿದ ಶ್ರೀನಿವಾಸ್, ಕಳೆದ 20 ವರ್ಷಗಳಿಂದ ನನಗೆ ಜನತಾದಳದಲ್ಲಿ ಕೆಲಸ ಮಾಡುವುದಕ್ಕೆ ಅವಕಾಶ ಕೊಟ್ಟ ಪಕ್ಷದ ವರಿಷ್ಟ ದೇವೇಗೌಡ, ಕುಮಾರಸ್ವಾಮಿ, ರೇವಣ್ಣನವರಿಗೆ ಕೃತಜ್ಞತೆ ಸಲ್ಲಿಸುವುದಾಗಿ” ಹೇಳಿದರು.

ಕಾಂಗ್ರೆಸ್‌ ಜೆಡಿಎಸ್‌ ಸಮ್ಮಿಶ್ರ ಸರ್ಕಾರದಲ್ಲಿ ಸಣ್ಣಕೈಗಾರಿಕಾ ಸಚಿವರಾಗಿ ಶ್ರೀನಿವಾಸ್‌ ಕಾರ್ಯ ನಿರ್ವಹಿಸಿದ್ದರು.

ಈ ಸುದ್ದಿ ಓದಿದ್ದೀರಾ? : ಈ ದಿನ ಎಕ್ಸ್ ಕ್ಲ್ಯೂಸಿವ್‌ | ಕೋಲಾರದಿಂದಲೇ ರಾಹುಲ್ ರಣಕಹಳೆ; ಏ.5ಕ್ಕೆ ‘ಸತ್ಯಮೇವ ಜಯತೆ’

ಕಾಂಗ್ರೆಸ್ ಸಖ್ಯ:
ಮಾರ್ಚ್ 31ಕ್ಕೆ ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿರುವ ಗುಬ್ಬಿ ಶ್ರೀನಿವಾಸ್, ಕಳೆದ ನವೆಂಬರ್‌ನಲ್ಲೇ ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿದ್ದರು.

ಕಾಂಗ್ರೆಸ್ ಪಕ್ಷ ನಡೆಸಿದ ಒಕ್ಕಲಿಗ ಶಾಸಕರ ಸಭೆಯಲ್ಲೂ ಭಾಗಿಯಾಗಿದ್ದ ಅವರು, ಭಾರತ ಐಕ್ಯತಾಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆಗೆ ಹೆಜ್ಜೆ ಹಾಕಿದ್ದರು.

Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಿಂದಿಗಿಂತ ಈಗ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸ ನನಗಿದೆ: ಡಿ ಕೆ ಸುರೇಶ್

ನಾನು ಕಳೆದ ಮೂರು ಚುನಾವಣೆಗಳಿಗಿಂತ ಈ ಬಾರಿ ಅತಿ ಹೆಚ್ಚಿನ ಮತಗಳ...

ಏ.29 ರಿಂದ ರಾಜ್ಯದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ : ಹವಾಮಾನ ಇಲಾಖೆ

ಏಪ್ರಿಲ್ 29ರಿಂದ ರಾಜ್ಯದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ...

ಮಂಗಳೂರು | ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಗೂಂಡಾಗಿರಿ

ರಾಜ್ಯದ 14 ಕ್ಷೇತ್ರಗಳಲ್ಲಿ ಏ.26 ರಂದು ಬೆಳಗ್ಗಿನಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದೆ....

ಲೋಕಸಭಾ ಚುನಾವಣೆ | ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಆರಂಭ: ಉತ್ಸಾಹದಿಂದ ಮತ ಚಲಾಯಿಸುತ್ತಿರುವ ಮತದಾರರು

ರಾಜ್ಯದ 14 ಕ್ಷೇತ್ರಗಳಲ್ಲಿ ಏ.26ರಂದು ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ....