ಕೊಲೆ ಯತ್ನ ಆರೋಪ: ಗುಜರಾತ್ ಎಎಪಿ ಶಾಸಕ ಚೈತರ್ ವಾಸವ ಬಂಧನ

Date:

ಗುಜರಾತ್‌ನ ನರ್ಮದ ಜಿಲ್ಲೆಯ ದೇಡಿಯಾಪದದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕನ ಕೊಲೆ ಯತ್ನ ಮಾಡಿದ ಆರೋಪದ ಮೇಲೆ ಎಎಪಿ ಶಾಸಕ ಚೈತರ್ ವಾಸವ ಅವರನ್ನು ಬಂಧಿಸಲಾಗಿದೆ.

- Advertisement -

ವಾಸವ ಅವರ ಕ್ಷೇತ್ರ ದೇಡಿಯಾಪದ ವ್ಯಾಪ್ತಿಯ ಪ್ರಾಂಟ್ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಶನಿವಾರ ಈ ಘಟನೆ ನಡೆದಿದೆ. ವಾಸವ ಅವರನ್ನು ಶನಿವಾರ ತಡರಾತ್ರಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಇದನ್ನು ಓದಿದ್ದೀರಾ? ಬಿಜೆಪಿ ಶಾಸಕ ಮುನಿರತ್ನ ಮತ್ತೆ ಬಂಧನ

ಸ್ಥಳೀಯ ಮಟ್ಟದ ಸಮನ್ವಯ ಸಮಿತಿಯಾದ ‘ಆಪ್ನೋ ತಾಲುಕೋ ವೈಬ್ರಂಟ್ ತಾಲುಕೋ’ (ಎಟಿವಿಟಿ) ಸದಸ್ಯರಾಗಿ ನೇಮಕಗೊಳ್ಳಲು ತಮ್ಮ ನಾಮನಿರ್ದೇಶಿತರನ್ನು ಪರಿಗಣಿಸದಿದ್ದಕ್ಕಾಗಿ ಆಕ್ಷೇಪ ವ್ಯಕ್ತಪಡಿಸಿದ ಕಾರಣ ವಾಸವ ಆಕ್ರೋಶಿತಗೊಂಡಿದ್ದರು.

ಸಭೆಯಲ್ಲಿ ಭಾಗವಹಿಸಿದ್ದ ದೇಡಿಯಾಪ್ಡಾ ತಾಲೂಕು ಪಂಚಾಯತ್ ಅಧ್ಯಕ್ಷ ಸಂಜಯ್ ವಾಸವ ಅವರು ಆಕ್ಷೇಪ ವ್ಯಕ್ತಪಡಿಸಿದ ಕಾರಣ ಶಾಸಕರು ಅವರ ಮೇಲೆ ಮೊಬೈಲ್ ಫೋನ್ ಎಸೆದು ಹಲ್ಲೆ ನಡೆಸಿದ್ದಾರೆ ಎಂದು ಸಂಜಯ್ ವಾಸವ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಶಾಸಕರು ದೂರುದಾರರ ಮೇಲೆ ಗಾಜಿನಿಂದ ಹಲ್ಲೆ ನಡೆಸಲು ಪ್ರಯತ್ನಿಸಿದರು. ಆದರೆ ಅಲ್ಲಿದ್ದ ಪೊಲೀಸ್ ಸಿಬ್ಬಂದಿ ತಡೆದರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಹಾಗೆಯೇ ದೇಡಿಯಾಪದ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 109(ಕೊಲೆ ಯತ್ನ), 79(ಪದಗಳು, ಸನ್ನೆಗಳ ಮೂಲಕ ಮಹಿಳೆಯ ಘನತೆಗೆ ಅವಮಾನ), 115 (2) (ಸ್ವಯಂಪ್ರೇರಣೆಯಿಂದ ನೋವುಂಟುಮಾಡುವುದು), 351 (3) (ಕ್ರಿಮಿನಲ್ ಬೆದರಿಕೆ), 352 (ಉದ್ದೇಶಪೂರ್ವಕ ಅವಮಾನ) ಮತ್ತು 324 (3) (ಆಸ್ತಿಗೆ ಹಾನಿ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದ ಖಜಾನೆ ಖಾಲಿ, ಆದರೂ ಪ್ರಧಾನಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಪೋಲು: ತೇಜಸ್ವಿ ಯಾದವ್ ಆರೋಪ

ಬಿಹಾರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರು ತೊಂದರೆಯಲ್ಲಿರುವಾಗ ಮತ್ತು ರಾಜ್ಯ...

ಹಿರಿಯ ಪತ್ರಕರ್ತೆ ಪಾಯಲ್ ಮೆಹ್ತಾ ಅಕಾಲಿಕ ನಿಧನ: ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸೇರಿದಂತೆ ಗಣ್ಯರ ಸಂತಾಪ

ಸಿಎನ್‌ಎನ್-ನ್ಯೂಸ್18 ವಾಹಿನಿಯ ಹಿರಿಯ ರಾಜಕೀಯ ಪತ್ರಕರ್ತೆ ಪಾಯಲ್ ಮೆಹ್ತಾ (46) ಅವರು...

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ: ರಾಜಕೀಯ ಲಾಭ ಸಿಗುತ್ತಾ?

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು...