ಗುಜರಾತ್ ಬಿಜೆಪಿಯಲ್ಲಿ ಪಕ್ಷಪಾತ, ಭ್ರಷ್ಟಾಚಾರ ಆರೋಪಗಳ ಗದ್ದಲ; ಆಂತರಿಕ ಕಲಹ

Date:

Advertisements

ಒಂದು ಕಾಲದಲ್ಲಿ ಶಿಸ್ತುಬದ್ಧತೆ ಹೆಸರುವಾಸಿಯಾಗಿದ್ದ ಪ್ರಧಾನಿ ಮೋದಿ ಅವರ ತವರು ಗುಜರಾತ್‌ನ ಬಿಜೆಪಿ ಈಗ ಪಕ್ಷಪಾತ, ಭ್ರಷ್ಟಾಚಾರ, ಆಂತರಿಕ ಕಲಹಗಳಿಂದಲೇ ಸುದ್ದಿಯಾಗುತ್ತಿದೆ. ಯಾವ ವಿಚಾರಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್‌ಅನ್ನು ದೂಷಿಸುತ್ತಲೇ ಗುಜರಾತ್‌ನಲ್ಲಿ ಬಿಜೆಪಿ ಬೆಳೆಯಿತೋ, ಆ ಎಲ್ಲ ವಿಚಾರಗಳು ಈಗ ಬಿಜೆಪಿಯಲ್ಲೇ ಕಾಣಿಸಿಕೊಳ್ಳುತ್ತಿವೆ ಎಂದು ವಿಮರ್ಶಕರು ಹೇಳುತ್ತಿದ್ದಾರೆ. ಅದಕ್ಕೆ ಪೂರಕವಾಗಿ ಗುಜರಾತ್ ಬಿಜೆಪಿ ಹಲವಾರು ವಿವಾದಗಳ ತಾಣವಾಗಿ ಮಾರ್ಪಟ್ಟಿದೆ.

ಇತ್ತೀಚೆಗೆ, ಗುಜರಾತ್‌ನ ರಾಜ್‌ಕೋಟ್‌ನಿಂದ ಬಿಜೆಪಿ ನಾಯಕರಿಗೆ ಅನಾಮಧೇಯ ಪತ್ರವೊಂದನ್ನು ಬರೆಯಲಾಗಿದೆ. ಅದರಲ್ಲಿ, ಬಿಜೆಪಿ ಸಂಘಟನಾ ಉಸ್ತುವಾರಿ ಧವಲ್ ಡೇವ್ ಅವರು ಪಕ್ಷದ ಸ್ಥಾನಗಳನ್ನು ಹಂಚುವಲ್ಲಿ ಪಕ್ಷಪಾತ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಆ ಪತ್ರವು ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯವನ್ನು ಮತ್ತಷ್ಟು ತೀವ್ರಗೊಳಿಸಿದೆ.

ಪತ್ರದ ಪ್ರಕಾರ, ಡೇವ್ ಅವರು ಪಕ್ಷದ ಹುದ್ದೆಗಳಿಗೆ ಪದಾಧಿಕಾರಿಗಳನ್ನು ನೇಮಿಸುವಾಗ ತಮ್ಮೊಂದಿಗೆ ನಿಕಟ ಸಂಬಂಧ ಹೊಂದಿರುವವರಿಗೆ ಹೆಚ್ಚು ಒತ್ತುಕೊಟ್ಟಿದ್ದಾರೆ. ಪಕ್ಷದ ಪ್ರಧಾನ ಕಾರ್ಯದರ್ಶಿಯ ಸೂಚನೆಯ ಮೇರೆಗೆ ರಾಜ್ಯ ಘಟಕದ ಉಪಾಧ್ಯಕ್ಷ ಭರತ್ ಬೋಗ್ರಾ ವಿರುದ್ಧ ಡೇವ್ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

Advertisements

ಈ ಹಿಂದೆ, ಅಮ್ರೇಲಿಯಿಂದಲೂ ಒಂದು ಪತ್ರ ಬರೆಯಲಾಗಿತ್ತು. ಅದರಲ್ಲಿ, ಹಾಲಿ ಶಾಸಕ ಕೌಶಿಕ್ ವೆಕಾರಿಯಾ ವಿರುದ್ಧ ಗಂಭೀರ ಆರೋಪಗಳನ್ನು ಮಾಡಲಾಗಿತ್ತು.

ಒಂದೆಡೆ ಅನಾಮಧೇಯ ಪತ್ರಗಳು ಸದ್ದು ಮಾಡುತ್ತಿದ್ದರೆ, ಮತ್ತೊಂದೆಡೆ, ಪಕ್ಷವು 500-600 ಕೋಟಿ ರೂ.ಗಳ ಪೊಂಝಿ ಸ್ಕೀಮ್ ಹಗರಣದ ಆರೋಪವನ್ನು ಎದುರಿಸುತ್ತಿದೆ. ಹಗರಣದಲ್ಲಿ ಸಬರ್ಕಾಂತದ ಬಿಜೆಪಿ ನಾಯಕ ಭೂಪೇಂದ್ರಸಿಂಹ ಝಲಾ ಅವರನ್ನು ಮಾಸ್ಟರ್ ಮೈಂಡ್ ಎಂದು ಹೇಳಲಾಗಿದ್ದು, ಅವರನ್ನು ಸಿಐಡಿ ಅಪರಾಧ ವಿಭಾಗವು ಬಂಧಿಸಿದೆ.

ಈ ವರದಿ ಓದಿದ್ದೀರಾ?: ಟ್ರಂಪ್ ಟೀಮ್‌ನಿಂದ ಭಾರತೀಯ ಮೂಲದ ವಿವೇಕ್ ರಾಮಸ್ವಾಮಿ ಔಟ್ ಆಗಿದ್ದೇಕೆ?

ಈ ಬೆಳವಣಿಗೆಗಳ ನಡುವೆ, ಬಿಜೆಪಿಯೊಳಗಿನ ಆಂತರಿಕ ಭಿನ್ನಾಭಿಪ್ರಾಯ ಹೆಚ್ಚುತ್ತಿದೆ. ನಾಯಕರನ್ನು ನೇಮಿಸುವಲ್ಲಿ ಅರ್ಹತೆಯ ಮಾನದಂಡಗಳನ್ನು ಕಡೆಗಣಿಸಿ, ಸ್ವಜನ ಪಕ್ಷಪಾತ ಹೆಚ್ಚುತ್ತಿದೆ ಎಂದು ಪಕ್ಷದ ಕಾರ್ಯಕರ್ತರು ಹತಾಶೆ ವ್ಯಕ್ತಪಡಿಸಿದ್ದಾರೆ. ಪಕ್ಷದ ಸಿದ್ಧಾಂತ ಅಥವಾ ತಳಮಟ್ಟದ ಕೆಲಸದಲ್ಲಿ ತೊಡಗಿರುವುದಕ್ಕಿಂತ, ಉನ್ನತ ನಾಯಕತ್ವಕ್ಕೆ ನಿಷ್ಠರಾಗಿರುವುದೇ ರಾಜಕೀಯ ಪ್ರಗತಿಯ ಮಾನದಂಡವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತವಾಗುತ್ತಿದೆ.

ಆಂತರಿಕ ಕಲಹದ ಪರಿಣಾಮವು ಚುನಾವಣಾ ಹಿನ್ನಡೆಗಳಲ್ಲಿ ಸ್ಪಷ್ಟವಾಗಿ ಕಂಡುಬಂದಿದೆ. ವಿಧಾನಸಭಾ ಚುನಾವಣೆಯಿಂದ ಸ್ಥಳೀಯ ಸಂಸ್ಥೆಗಳ ಸ್ಪರ್ಧೆಗಳವರೆಗೆ ವಿವಿಧ ಚುನಾವಣೆಗಳಲ್ಲಿ ಬಂಡಾಯ ನಾಯಕರು ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಈ ಬೆಳೆಯುತ್ತಿರುವ ಅಶಿಸ್ತು ಬಿಜೆಪಿಯ ಸಾಂಪ್ರದಾಯಿಕ ಸಂಘಟನಾ ಏಕತೆ ಮತ್ತು ಸೈದ್ಧಾಂತಿಕ ಬದ್ಧತೆಯಿಂದ ವಿಮುಖಗೊಳ್ಳುತ್ತಿರುವುದನ್ನು ಸೂಚಿಸುತ್ತದೆ. ಪಕ್ಷದಲ್ಲಿ ಗುಂಪುಗಾರಿಕೆ ಹೆಚ್ಚುತ್ತಿದ್ದು, ಪಕ್ಷದ ಬೆಂಬಲದ ನೆಲೆಯು ಕುಸಿಯುತ್ತಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X