ಗುಜರಾತ್ | ಕಾಂಗ್ರೆಸ್ ಕುಟುಂಬದ ರಿವಾಬಾಗೆ ಬಿಜೆಪಿ ಸರ್ಕಾರದಲ್ಲಿ ಮಂತ್ರಿಗಿರಿ

Date:

ಗುಜರಾತ್‌ ಬಿಜೆಪಿ ಸರ್ಕಾರಕ್ಕೆ ಬಹುದೊಡ್ಡ ‘ಸರ್ಜರಿ’ ನಡೆದಿದ್ದು, ಸಚಿವ ಸಂಪುಟದಲ್ಲಿ ಬೃಹತ್ ಪ್ರಮಾಣದ ಸಚಿವರನ್ನು ಹೊರಹಾಕಿ, ಹೊಸಬರಿಗೆ ಮಣೆ ಹಾಕಲಾಗಿದೆ. ಒಟ್ಟು 26 ಮಂದಿ ಸಚಿವರುಳ್ಳ ಸಂಪುಟದಲ್ಲಿ 19 ಮಂದಿ ಹೊಸಬರ ಸೇರ್ಪಡೆಯಾಗಿದೆ. ಅವರಲ್ಲಿ ಮೂವರು ಮಹಿಳೆಯರಿದ್ದಾರೆ. ಈ ಪೈಕಿ, ಭಾರತೀಯ ಕ್ರಿಕೆಟ್‌ ತಂಡದ ರವೀಂದ್ರ ಜಡೇಜಾ ಅವರ ಪತ್ನಿ, ಕಾಂಗ್ರೆಸ್‌ ಕುಟುಂಬದ ಹಿನ್ನೆಲೆಯುಳ್ಳ ರಿವಾಬಾ ಅವರಿಗೂ ಮಂತ್ರಿಗಿರಿ ದೊರೆತಿದೆ.

- Advertisement -

2022ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜಾಮ್‌ನಗರ ಉತ್ತರ ವಿಧಾನಸಭಾ ಕ್ಷೇತ್ರದಿಂದ ಮೊದಲ ಬಾರಿಗೆ ಆಯ್ಕೆಯಾಗಿದ್ದ ರಿವಾಬಾ ಅವರು ಶಾಸಕಿಯಾದ ಮೂರೇ ವರ್ಷದಲ್ಲಿ ಸಚಿವರಾಗಿ ಸಂಪುಟ ಸೇರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ರಿವಾಬಾ ಅವರು ಮೂತಃ ಕಾಂಗ್ರೆಸ್‌ ಕುಟುಂಬದ ರಾಜಕೀಯ ಹಿನ್ನೆಲೆ ಉಳ್ಳವರು. ಅವರ ಚಿಕ್ಕಪ್ಪ ಹರಿ ಸಿಂಗ್ ಸೋಲಂಕಿ ಅವರು ಈಗಲೂ ಕಾಂಗ್ರೆಸ್‌ನಲ್ಲಿದ್ದಾರೆ. ಮಾತ್ರವಲ್ಲ, ಅವರು ರಾಜ್‌ಕೋಟ್‌ ವಿಭಾಗದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಕಟ್ಟುವಲ್ಲಿ ಸಕ್ರಿಯವಾಗಿದ್ದಾರೆ. ಜೊತೆಗೆ, ರಿವಾಬಾ ಅವರ ಪತಿ ರವೀಂದ್ರ ಜಡೇಜಾ ಅವರ ಸಹೋದರಿ ನೈನಾ ಕೂಡ ಜಾಮ್‌ನಗರ ಕಾಂಗ್ರೆಸ್ ಮಹಿಳಾ ಮೋರ್ಚಾದ ಅಧ್ಯಕ್ಷೆಯಾಗಿದ್ದಾರೆ.

ಗಮನಾರ್ಹವೆಂದರೆ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಿವಾಬಾ ಮತ್ತು ನೈನಾ ಅವರು ಪರಸ್ಪರ ಎದುರಾಳಿಗಳಾಗಿ ರಾಜ್‌ಕೋಟ್‌ನಲ್ಲಿ ಸ್ಪರ್ಧಿಸಿದ್ದರು. ಅತ್ತಿಗೆ-ನಾದಿನಿಯರ ಚುನಾವಣಾ ಹೋರಾಟದಲ್ಲಿ ರವೀಂದ್ರ ಜಡೇಜಾ ಅವರು ರಿವಾಬಾ ಪರವಾಗಿ ಪ್ರಚಾರ ನಡೆಸಿದ್ದರು.

ಕಾಂಗ್ರೆಸ್ ಹಿನ್ನೆಲೆಯ ಕುಟುಂಬದಿಂದ ಬಂದ ರಿವಾಬಾ ಅವರಿಗೆ ಇಷ್ಟು ಬೇಗ ಬಿಜೆಪಿಯಲ್ಲಿ ಮಂತ್ರಿಗಿರಿ ದೊರೆತಿರುವುದು ಚರ್ಚೆಗೆ ಗ್ರಾಸವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...