ಗುಜರಾತ್ | 24 ಗಂಟೆಗಳಲ್ಲಿ ನಾಲ್ಕು ದಲಿತ ದೌರ್ಜನ್ಯ ಪ್ರಕರಣ; ಇದು ಅಮೃತಕಾಲವೇ? ಎಂದ ಜಿಗ್ನೇಶ್ ಮೇವಾನಿ

Date:

  • ಚರಂಡಿ ಸ್ವಚ್ಛಗೊಳಿಸುವ ವೇಳೆ ಇಬ್ಬರ ಸಾವು
  • ದಲಿತ ಯುವತಿಯ ಮೇಲೆ ಅತ್ಯಚಾರ, ಕೊಲೆ

ಕಳೆದ 24 ಗಂಟೆಗಳ ಅವಧಿಯೊಳಗೆ ಗುಜರಾತ್‌ ಒಂದರಲ್ಲೇ ನಾಲ್ವರು ದಲಿತರ ಮೇಲೆ ದೌರ್ಜನ್ಯ ಎಸಗಿರುವ ಘಟನೆಗಳು ಜರುಗಿವೆ. ಈ ಕುರಿತು ಕಳವಳ ವ್ಯಕ್ತಪಡಿಸಿರುವ ಶಾಸಕ ಜಿಗ್ನೇಶ್ ಮೇವಾನಿ ಅವರು, “ಇದು ಅಮೃತಕಾಲವೇ?” ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.

ಗುಜರಾತಿನಲ್ಲಿ ಕೆಲವು ಪುಂಡರು ದಲಿತ ವ್ಯಕ್ತಿಗೆ ಥಳಿಸುತ್ತಿರುವ ವಿಡಿಯೋವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ಜಿಗ್ನೇಶ್ ಮೇವಾನಿ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ‘ಅಮೃತಕಾಲ’ದ ಹೇಳಿಕೆಗೆ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಜಿಗ್ನೇಶ್ ಮೇವಾನಿ, “ಕಳೆದ 24 ಗಂಟೆಗಳಲ್ಲಿಯೇ ಗುಜರಾತ್ ನಾಲ್ಕು ದಲಿತ ದೌರ್ಜನ್ಯ ಪ್ರಕರಣಗಳಿಗೆ ಸಾಕ್ಷಿಯಾಗಿದೆ. ರಾಜಕೋಟ್‌ನಲ್ಲಿ ಚರಂಡಿ ಸ್ವಚ್ಛಗೊಳಿಸಲು ತೆರಳಿ ಇಬ್ಬರು ಬಲಿಯಾದರು, ಮಹಿಸಾಗರ್ ಜಿಲ್ಲೆಯ ಯುವತಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ. ಸ್ಥಳೀಯ ಗೂಂಡಾಗಳು ದಲಿತನ ಮೇಲೆ ಹಲ್ಲೆ ನಡೆಸಿರುವ ಮತ್ತೊಂದು ವಿಡಿಯೋ ಇಲ್ಲಿದೆ” ಎಂದು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“24 ಗಂಟೆಗಳ ಅವಧಿಯಲ್ಲಿಯೇ ನಾಲ್ಕು ದಲಿತ ದೌರ್ಜನ್ಯ ಪ್ರಕರಣಗಳು ನಡೆದಿವೆ. ಇದು ಅಮೃತಕಾಲವೇ?” ಎಂದು ವ್ಯಂಗ್ಯವಾಡಿದ್ದಾರೆ.

ಚರಂಡಿ ಸ್ವಚ್ಛಗೊಳಿಸುವ ವೇಳೆ ಇಬ್ಬರ ಸಾವು

ರಾಜ್‌ಕೋಟ್‌ನ ಸಾಮಾಟ್ರ್ ಕೈಗಾರಿಕ ಪ್ರದೇಶದ ಬಳಿ ತುಂಬಾ ಆಳಕ್ಕೆ ಇರುವ ಚರಂಡಿ ಸ್ವಚ್ಛಗೊಳಿಸುವ ವೇಳೆ ಮೆಹುಲ್ ಮೆಹ್ದಾ (24) ಮತ್ತು ಅಫ್ಜಲ್ ಫುಫರ್ (24) ಎಂಬುವವರು ಉಸಿರುಗಟ್ಟಿ ಮಂಗಳವಾರ ಮೃತಪಟ್ಟಿದ್ದಾರೆ.

ಸಾಮ್ರಾಟ್ ಮುಖ್ಯ ರಸ್ತೆಯಲ್ಲಿನ ಒಳಚರಂಡಿಯನ್ನು ‘ಜೆಟ್ಟಿಂಗ್’ ಯಂತ್ರ ಮತ್ತು ಯಾಂತ್ರೀಕೃತ ‘ಕ್ರೇನ್‌’ನಿಂದ ಸ್ವಚ್ಛಗೊಳಿಸುವ ವೇಳೆ ಇಬ್ಬರು ದಲಿತ ಕಾರ್ಮಿಕರು ಮೃತರಾಗಿದ್ದಾರೆ. ಈ ಕುರಿತು ತನಿಖೆ ನಡೆಸುತ್ತಿರುವುದಾಗಿ ಗುಜರಾತ್ ಪೊಲೀಸರು ಹೇಳಿದ್ದಾರೆ.

Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಮಾರಣ್ಣನ ಜೇಬಲ್ಲಿದ್ದ ‘ಪೆನ್‌ಡ್ರೈವ್‌’ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಯ್ತು: ಡಿ ಕೆ ಶಿವಕುಮಾರ್

ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಜೆಡಿಎಸ್ ಸಂಸದ ಹಾಗೂ ಹಾಸನ...

‘ಬರ ಪರಿಹಾರ ಸಾಕು’ ಎಂದಿರುವ ಕುಮಾರಸ್ವಾಮಿ ನಾಡದ್ರೋಹಿ: ಡಿಸಿಎಂ ಡಿಕೆಶಿ ವಾಗ್ದಾಳಿ

"ಕೇಂದ್ರ ಸರ್ಕಾರ ಕರ್ನಾಟಕದ ಬರಕ್ಕೆ ಅಲ್ಪ ಪರಿಹಾರ ಮೊತ್ತ ಘೋಷಿಸಿದ್ದು, ನಾವು...

ಹಿಂದುಳಿದ ಸಮುದಾಯಗಳೇ ಎಚ್ಚರ, ಮೋದಿ ನಿಮ್ಮ ಹಾದಿ ತಪ್ಪಿಸುತ್ತಿದ್ದಾರೆ: ಘರ್ಜಿಸಿದ ಸಿದ್ದರಾಮಯ್ಯ

ರಾಜ್ಯದ ಹಿಂದುಳಿದ ಸಮುದಾಯಗಳೇ ಎಚ್ಚರ. ಮೋದಿ ನಿಮ್ಮ ಹಾದಿ ತಪ್ಪಿಸಿ ಮುಸ್ಲಿಮರ...

ಪಿಎಂ ಮೋದಿ ಸೂಪರ್‌ ಮ್ಯಾನ್ ಅಲ್ಲ ದುಬಾರಿ ಮ್ಯಾನ್: ಪ್ರಿಯಾಂಕಾ ಗಾಂಧಿ ವ್ಯಂಗ್ಯ

ಪ್ರಧಾನಿ ನರೇಂದ್ರ ಮೋದಿ ಸೂಪರ್ ಮ್ಯಾನ್ ಅಲ್ಲ ಬದಲಾಗಿ ಅವರು ದುಬಾರಿ...