ಮೋದಿ ಉಪನಾಮ ಪ್ರಕರಣ | ರಾಹುಲ್‌ ಗಾಂಧಿ ಅರ್ಜಿ ತಿರಸ್ಕರಿಸಿದ ಗುಜರಾತ್‌ ಹೈಕೋರ್ಟ್

Date:

  • ಮಾರ್ಚ್ 23 ರಂದು ರಾಹುಲ್‌ ಗಾಂಧಿ ಅವರಿಗೆ 2 ವರ್ಷ ಶಿಕ್ಷೆ ವಿಧಿಸಿದ್ದ ಸೂರತ್‌ ನ್ಯಾಯಾಲಯ
  • 2019ರಲ್ಲಿ ಕೋಲಾರ ಚುನಾವಣಾ ಪ್ರಚಾರ ವೇಳೆ ಮೋದಿ ಉಪನಾಮ ಬಗ್ಗೆ ರಾಹುಲ್‌ ಹೇಳಿಕೆ

ಮೋದಿ ಉಪನಾಮ ಹೊಂದಿದವರೆಲ್ಲ ಕಳ್ಳರು ಎಂಬ ಹೇಳಿಕೆ ಸಂಬಂದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ತಮ್ಮ ಮೇಲೆ ದಾಖಲಾಗಿದ್ದ ಮಾನಹಾನಿ ಪ್ರಕರಣದಲ್ಲಿ ಶಿಕ್ಷೆಗೆ ತಡೆ ಕೋರಿದ್ದ ಅರ್ಜಿಯನ್ನು ಗುಜರಾತ್‌ ಹೈಕೋರ್ಟ್‌ ಶುಕ್ರವಾರ (ಜುಲೈ 7) ತಿರಸ್ಕರಿಸಿದೆ.

- Advertisement -

ಈ ಮೂಲಕ ರಾಹುಲ್‌ ಅವರ ಲೋಕಸಭೆ ಸದಸ್ಯತ್ವದ ಅನರ್ಹತೆ ಮುಂದುವರಿಯುವಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ರಾಹುಲ್‌ ಗಾಂಧಿ ಅವರಿಗೆ ಮಾನಹಾನಿ ಪ್ರಕರಣದಲ್ಲಿ ಗುಜರಾತ್‌ ಸೆಷನ್ಸ್‌ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ರಾಹುಲ್‌ ಅವರು ಗುಜರಾತ್‌ ಹೈಕೋರ್ಟ್‌ ಮೊರೆ ಹೋಗಿದ್ದರು.

ನ್ಯಾಯಮೂರ್ತಿ ಹೇಮಂತ್ ಪ್ರಚ್ಚಕ್ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 2ರಂದೇ ವಿಚಾರಣೆ ಪೂರ್ಣಗೊಳಿಸಿ ಆದೇಶವನ್ನು ಕಾಯ್ದಿರಿಸಿದ್ದರು. ಮಧ್ಯಂತರ ಪರಿಹಾರದ ಅದೇಶ ನೀಡಲು ನಿರಾಕರಿಸಿದ್ದರು. ಬೇಸಿಗೆ ರಜೆ ಮುಗಿದ ಬಳಿಕವೇ ಆದೇಶ ಪ್ರಕಟಿಸುವುದಾಗಿ ತಿಳಿಸಿದ್ದರು.

ಗುಜರಾತ್‌ ಹೈಕೋರ್ಟ್ ಶುಕ್ರವಾರ ತೀರ್ಪು ಪ್ರಕಟಿಸಿದೆ. “ಕೆಳ ನ್ಯಾಯಾಲಯ ನೀಡಿದ ತೀರ್ಪು ಸರಿಯಾಗಿದೆ. ತೀರ್ಪಿನಲ್ಲಿ ನಾವು ಮಧ್ಯಪ್ರವೇಶಿಸುವುದಿಲ್ಲ” ಎಂದು ಹೈಕೋರ್ಟ್ ಹೇಳಿದೆ.

ಈ ಹಿಂದೆ ಗುಜರಾತ್ ಹೈಕೋರ್ಟ್ ಮಾನಹಾನಿ ಪ್ರಕರಣದಲ್ಲಿ ರಾಹುಲ್‌ ಅವರಿಗೆ ವಿಧಿಸಿರುವ ಶಿಕ್ಷೆಗೆ ತಡೆ ನೀಡಲು ಸಾಧ್ಯವಿಲ್ಲ. ಅಂತಿಮ ಆದೇಶ ನೀಡಲಾಗುವುದು ಎಂದು ಏಪ್ರಿಲ್‌ 20ರ ಆದೇಶದಲ್ಲಿ ಹೇಳಿತ್ತು.

ಈ ತೀರ್ಪಿನ ವಿರುದ್ಧ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬಹುದಾಗಿದೆ.

ರಾಹುಲ್ ಅವರು 2019ರಲ್ಲಿ ಕೋಲಾರದಲ್ಲಿ ನಡೆದ ಚುನಾವಣೆ ಪ್ರಚಾರ ಸಭೆ ವೇಳೆ ‘ಮೋದಿ ಉಪನಾಮ ಹೊಂದಿರುವವರೆಲ್ಲಾ ಕಳ್ಳರು’ ಎಂದು ಹೇಳಿದ್ದರು.

ಈ ಸುದ್ದಿ ಓದಿದ್ದೀರಾ? ರಾಜ್ಯಪಾಲರು ರಾಜಕಾರಣದ ಬಗ್ಗೆ ಮಾತನಾಡಬಾರದು ಎಂದ ಅಣ್ಣಾಮಲೈ

ಪ್ರಕರಣ ಸಂಬಂಧ ಗುಜರಾತ್ ಸೂರತ್‌ನ ಸೆಷನ್ಸ್‌ ನ್ಯಾಯಾಲಯದಲ್ಲಿ ಬಿಜೆಪಿ ಶಾಸಕ ಪೂರ್ಣೇಶ್‌ ಮೋದಿ ಅವರು ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ರಾಹುಲ್ ಗಾಂಧಿಯವರಿಗೆ ಮಾರ್ಚ್‌ 23 ರಂದು 2 ವರ್ಷಗಳ ಶಿಕ್ಷೆ ವಿಧಿಸಿತ್ತು.

ಬಳಿಕ ರಾಹುಲ್‌ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿತ್ತು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...

ಜಂತರ್ ಮಂತರ್ ಧರಣಿ ಸ್ಥಳ ರದ್ದತಿ ಖಂಡಿಸಿ ಎಸ್‌ಎಫ್‌ಐ, ಡಿವೈಎಫ್‌ಐ ಪ್ರತಿಭಟನಾ ಮೆರವಣಿಗೆ: ಹಲವು ನಾಯಕರು ಪೊಲೀಸ್ ವಶಕ್ಕೆ

ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರಜಾಸತ್ತಾತ್ಮಕ ಪ್ರತಿಭಟನಾ...