ಗುಜರಾತ್| ಕೇಂದ್ರ ಸಚಿವರ ವಿರುದ್ಧ ಕ್ಷತ್ರಿಯರ ಬೃಹತ್ ಪ್ರತಿಭಟನೆ; ಬಿಜೆಪಿಗೆ ಮುಗಿಯದ ಸಂಕಷ್ಟ!

Date:

ಕ್ಷತ್ರಿಯ ಸಮುದಾಯದ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದ ಕೇಂದ್ರ ಸಚಿವರೂ ಆಗಿರುವ ಬಿಜೆಪಿಯ ಹಿರಿಯ ನಾಯಕ ಪರ್ಷೋತ್ತಮ್‌ ರೂಪಾಲಾ ಅವರ ವಿರುದ್ಧ ಕ್ಷತ್ರಿಯರು ಬೃಹತ್ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ. ಇದರಿಂದಾಗಿ ಬಿಜೆಪಿಗೆ ಗುಜರಾತ್‌ನಲ್ಲಿ ಭಾರೀ ಸಂಕಷ್ಟ ಉಂಟಾಗಿದೆ.

- Advertisement -

ಪರ್ಷೋತ್ತಮ್‌ ರೂಪಾಲಾ ಅವರ ಉಮೇದುವಾರಿಕೆಯನ್ನು ವಜಾಗೊಳಿಸುವಂತೆ ಒತ್ತಾಯಿಸಿ ಕ್ಷತ್ರಿಯ ಸಮುದಾಯವು ಬೃಹತ್ ಪ್ರತಿಭಟನೆಯನ್ನು ಭಾನುವಾರ ರಾಜ್‌ಕೋಟ್‌ನಲ್ಲಿ ನಡೆಸಿದ್ದು, ಎರಡು ಲಕ್ಷ ಜನರು ಈ ಬಿಜೆಪಿ ಸಚಿವರ ವಿರುದ್ಧದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕವಾದ ಏಪ್ರಿಲ್ 19 ರೊಳಗೆ ರೂಪಾಲಾ ಅವರನ್ನು ಪದಚ್ಯುತಗೊಳಿಸುವಂತೆ ಸಮುದಾಯದ ಮುಖಂಡರು ಆಡಳಿತಾರೂಢ ಬಿಜೆಪಿಗೆ ಗಡುವು ನೀಡಿದ್ದಾರೆ. ಅವರನ್ನು ಪದಚ್ಯುತಗೊಳಿಸದಿದ್ದರೆ ನಮ್ಮ ಈ ಪ್ರತಿಭಟನೆ ಇನ್ನಷ್ಟು ತೀವ್ರವಾಗಲಿದೆ ಎಂದು ಎಚ್ಚರಿಕೆಯನ್ನು ಕೂಡಾ ನೀಡಿದ್ದಾರೆ.

ಇದನ್ನು ಓದಿದ್ದೀರಾ?  ಗುಜರಾತ್‌| ಕ್ಷತ್ರಿಯ ಸಮುದಾಯದ ಪ್ರತಿಭಟನೆ; ಬಿಜೆಪಿಯಲ್ಲಿ ಮುಂದುವರಿದ ತಿಕ್ಕಾಟ

ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ರಾಜಕೋಟ್‌ನ ಅಭ್ಯರ್ಥಿ ಪರ್ಷೋತ್ತಮ್‌ ರೂಪಾಲಾ, “ಹಲವಾರು ರಜಪೂತ ಆಡಳಿತಗಾರರು ಬ್ರಿಟಿಷರಿಗೆ ಸಹಕಾರ ನೀಡಿದ್ದರು” ಎಂದು ಹೇಳಿಕೆ ನೀಡಿದ್ದರು. ಅವರ ಹೇಳಿಕೆಯ ನಂತರ, ಕರ್ಣಿ ಸೇನಾದ ಮುಖ್ಯಸ್ಥ ರಾಜ್ ಶೆಖಾವತ್ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ರೂಪಾಲಾ ಅವರ ಹೇಳಿಕೆಯು ಕ್ಷತ್ರಿಯ ಸಮುದಾಯವನ್ನು ಕೆರಳಿಸಿದ್ದು ನಿರಂತರವಾಗಿ ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ.

ರಾಜ್‌ಕೋಟ್ ಜಿಲ್ಲೆಯ ರತನ್‌ಪುರದಲ್ಲಿ 13 ಎಕರೆ ಕೃಷಿಭೂಮಿಯಲ್ಲಿ ವಿವಿಧ ರಜಪೂತ ಸಂಘಟನೆಗಳನ್ನು ಒಳಗೊಂಡ ಸಮನ್ವಯ ಸಮಿತಿಯು ಮೆಗಾ ರ್‍ಯಾಲಿಯನ್ನು ಆಯೋಜಿಸಿತ್ತು. ಸುಮಾರು ಎರಡು ಲಕ್ಷ ಜನ ಸೇರಿದ್ದರು ಎಂದು ವರದಿಯಾಗಿದೆ. ಕ್ಷತ್ರಿಯ ಸಮುದಾಯಕ್ಕೆ ಸೇರಿದ ಜನರು ಗುಜರಾತ್ ಮತ್ತು ನೆರೆಯ ರಾಜ್ಯಗಳಾದ ರಾಜಸ್ಥಾನ ಮತ್ತು ಮಹಾರಾಷ್ಟ್ರದಿಂದ ಬಂದು ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಇದನ್ನು ಓದಿದ್ದೀರಾ?  ಗುಜರಾತ್ ಬಿಜೆಪಿಯಲ್ಲಿ ಭಾರೀ ಕಲಹ; ಘರ್ಷಣೆಯಿಂದ ಆಸ್ಪತ್ರೆ ಸೇರಿದ ಕಾರ್ಯಕರ್ತರು

ತನ್ನ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆ ರೂಪಾಲಾ ಹಲವಾರು ಬಾರಿ ಕ್ಷಮೆಯಾಚಿಸಿದ್ದಾರೆ. ಆದರೆ ಸಮುದಾಯದ ಮುಖಂಡರು ಈ ಕ್ಷಮೆಯನ್ನು ಸ್ವೀಕರಿಸದೆ ಅವರನ್ನು ಪದಚ್ಯುತಗೊಳಿಸುವಂತೆ ಆಗ್ರಹಿಸಿದೆ. ಇತರೆ ಬಿಜೆಪಿ ಮುಖಂಡರೊಂದಿಗಿನ ಮಾತುಕತೆಯೂ ಕೂಡಾ ವಿಫಲವಾಗಿದೆ.

ರೂಪಾಲಾ ಅವರು ಏಪ್ರಿಲ್ 16 ರಂದು ನಾಮಪತ್ರ ಸಲ್ಲಿಸುವ ನಿರೀಕ್ಷೆಯಿದೆ. ರೂಪಾಲಾ ಅವರ ವಿರುದ್ಧ ಕ್ಷತ್ರೀಯರ ಆಕ್ರೋಶದಿಂದಾಗಿ ಆಡಳಿತಾರೂಢ ಬಿಜೆಪಿಯು ಮತ್ತಷ್ಟು ಸಂಕಷ್ಟದಲ್ಲಿ ಸಿಲುಕಿದೆ. ರಾಜಕೋಟ್‌ನಲ್ಲಿ ರೂಪಾಲಾ ಅವರೇ ಸ್ಪರ್ಧಿಸಿದರೆ ಪ್ರಭಾವಿ ಪಾಟಿದಾರ್ ಸಮುದಾಯದ ಕೆಂಗಣ್ಣಿಗೆ ಬಿಜೆಪಿ ಗುರಿಯಾಗಲಿದೆ.

ಗುಜರಾತ್‌ನಲ್ಲಿ 26 ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ನಾಮಪತ್ರ ಸಲ್ಲಿಸಲು ಏಪ್ರಿಲ್ 19 ಕೊನೆಯ ದಿನಾಂಕವಾಗಿದ್ದು, 16 ರಂದು ರೂಪಾಲಾ ನಾಮಪತ್ರ ಸಲ್ಲಿಸುವ ನಿರೀಕ್ಷೆಯಿದೆ. 2002ರಲ್ಲಿ ರೂಪಾಲಾ ಅವರನ್ನು ಸೋಲಿಸಿದ್ದ ಮಾಜಿ ವಿರೋಧ ಪಕ್ಷದ ನಾಯಕ ಪರೇಶ್ ಧನಾನಿ ಅವರನ್ನೇ ಮತ್ತೆ ಕಾಂಗ್ರೆಸ್ ಕಣಕ್ಕಿಳಿಸಿದೆ. ಧನಾನಿ ಪಾಟಿದಾರ್ ಸಮುದಾಯದ ಲೆಯುವಾ ಬಣಕ್ಕೆ ಸೇರಿದವರಾಗಿದ್ದು ರೂಪಾಲಾ ಅವರ ಹೇಳಿಕೆಯಿಂದಾಗಿ ಪಾಟಿದಾರ್ ಸಮುದಾಯದ ಮತಗಳು ಬಿಜೆಪಿ ಕೈಜಾರಿ ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...