ಮನರೇಗಾ ಹಗರಣ | ಜಾಮೀನು ಪಡೆದ ಬೆನ್ನಲ್ಲೇ ಗುಜರಾತ್ ಬಿಜೆಪಿ ಸಚಿವರ ಮಗ ಮತ್ತೆ ಬಂಧನ

Date:

ಮನರೇಗಾ ಹಗರಣಕ್ಕೆ ಸಂಬಂಧಿಸಿದ ಮತ್ತೊಂದು ಪ್ರಕರಣದಲ್ಲಿ ಜಾಮೀನು ಪಡೆದ ತಕ್ಷಣ ಗುಜರಾತ್ ಬಿಜೆಪಿ ಸಚಿವ ಬಚುಭಾಯ್ ಖಬಾದ್ ಅವರ ಪುತ್ರನನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

- Advertisement -

ಕಳೆದ ತಿಂಗಳು ಬೆಳಕಿಗೆ ಬಂದ 71 ಕೋಟಿ ರೂ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(MGNREGA) ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಗುಜರಾತ್ ರಾಜ್ಯ ಪಂಚಾಯತ್ ಮತ್ತು ಕೃಷಿ ಸಚಿವರ ಪುತ್ರ ಕಿರಣ್ ಖಬಾದ್ ಅವರನ್ನು ಬಂಧಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಇದನ್ನು ಓದಿದ್ದೀರಾ? ಲೋಕಸಭಾ ಚುನಾವಣೆ | ಮೋದಿ ಕಿ ಗ್ಯಾರಂಟಿ v/s ಕಾಂಗ್ರೆಸ್ ನ್ಯಾಯ್ ಗ್ಯಾರಂಟಿ

“ಮೊದಲ ಎಫ್‌ಐಆರ್‌ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ನಂತರ ಗುರುವಾರ ರಾತ್ರಿ ಕಿರಣ್ ಖಬಾದ್ ಅವರನ್ನು ಬಂಧಿಸಲಾಯಿತು. ದಾಹೋದ್ ಪೊಲೀಸರು ದಾಖಲಿಸಿದ ಹೊಸ ಪ್ರಕರಣದಲ್ಲಿ ಬಂಧಿಸಲಾಗಿದೆ.
ಕಿರಣ್ ಸೇರಿದಂತೆ ಕೆಲವು ಏಜೆನ್ಸಿಗಳು ಮನರೇಗಾ ಅಡಿಯಲ್ಲಿ ಅವರಿಗೆ ನಿಗದಿಪಡಿಸಿದ ಕೆಲಸವನ್ನು ಪೂರ್ಣಗೊಳಿಸದೆ ಸರ್ಕಾರದಿಂದ ಹಣ ಮಾತ್ರ ಪಡೆದಿವೆ” ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಜಗದೀಶ್‌ ಸಿನ್ಹಾ ಭಂಡಾರಿ ಹೇಳಿದರು.

ಮನರೇಗಾ ಅಡಿಯಲ್ಲಿ ದಾಹೋದ್‌ನ ಲಾವೇರಿಯಾ ಗ್ರಾಮದಲ್ಲಿ ಪೂರ್ಣ ಕೆಲಸ ಮಾಡದಿದ್ದರೂ ಏಜೆನ್ಸಿಗಳಿಗೆ 18.41 ಲಕ್ಷ ರೂ.ಗಳನ್ನು ಪಾವತಿಸಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಜಿಲ್ಲಾ ಗ್ರಾಮೀಣಾಭಿವೃದ್ಧಿ ಸಂಸ್ಥೆ(ಡಿಆರ್‌ಡಿಎ) ನಡೆಸಿದ ಒಟ್ಟು 71 ಕೋಟಿ ರೂ.ಗಳ ಹಗರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲವು ಮಂದಿ ವಿರುದ್ಧ ವಂಚನೆ, ನಂಬಿಕೆ ದ್ರೋಹದ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಎರಡು ವಾರಗಳ ಹಿಂದೆ ಬಿಜೆಪಿ ಸಚಿವರ ಪುತ್ರ ಕಿರಣ್ ಮತ್ತು ಅವರ ಸಹೋದರ ಬಲವಂತ್ ಅವರನ್ನು ಬಂಧಿಸಲಾಗಿತ್ತು.

ಏಜೆನ್ಸಿಯು 2021 ಮತ್ತು 2024ರ ನಡುವೆ ಮಾಡಬೇಕಾದ ಕೆಲಸವನ್ನು ಪೂರ್ಣಗೊಳಿಸದೆಯೇ ಕೆಲಸ ಪೂರ್ಣವಾಗಿದೆ ಎಂದು ನಕಲಿ ಪ್ರಮಾಣಪತ್ರ, ದಾಖಲೆಗಳನ್ನು ಸಲ್ಲಿಸಿ ಹಣ ಪಡೆದುಕೊಂಡಿದೆ. ಬಲವಂತ್ ಮತ್ತು ಕಿರಣ್ ಈ ಏಜೆನ್ಸಿಯ ಮಾಲೀಕರು. ಅವರಿಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು. ಗುರುವಾರವಷ್ಟೇ ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿತ್ತು. ಇದೀಗ ಮತ್ತೆ ಬಂಧಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪತಂಜಲಿ ಪ್ರಕರಣ: ಕಣ್ಣುಮುಚ್ಚಿಕೊಂಡು ಆದೇಶ ಹೊರಡಿಸಿದ ‘ಐಟಿಎಟಿ’ಗೆ ದೆಹಲಿ ಹೈಕೋರ್ಟ್ ತರಾಟೆ, 7 ಆದೇಶಗಳು ರದ್ದು

ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ ಸಂಬಂಧಿಸಿದಂತೆ 'ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧೀಕರಣ' (ITAT)...

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ ವಿಮಾನಗಳ ವಿಳಂಬ: ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರತಿಭಟನೆ

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ನ ಎರಡು ವಿಮಾನಗಳು ಪದೇಪದೇ ವಿಳಂಬಗೊಂಡ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ...

ಸಿಜೆಪಿ ಪ್ರತಿಭಟನೆಯ ಹಲ್ಲೆ ಆರೋಪಿ ಸಂಘಿ ಭಾರದ್ವಾಜ್‌ಗೆ 3 ವಾರ ಮಧ್ಯಂತರ ಜಾಮೀನು

ಜಂತರ್‌ ಮಂತರ್‌ನಲ್ಲಿ ನಡೆದ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಪ್ರತಿಭಟನೆ ವೇಳೆ...

ಯುಪಿ ಪೊಲೀಸರ ‘ಮಧ್ಯರಾತ್ರಿ ದಾಳಿ’: ದೆಹಲಿ ಮಾಜಿ ಮೇಯರ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪತ್ರಕರ್ತರೊಬ್ಬರನ್ನು ಹುಡುಕುವ ನೆಪದಲ್ಲಿ ಉತ್ತರ ಪ್ರದೇಶ ಪೊಲೀಸರು ತಮ್ಮ ನಿವಾಸದ ಮೇಲೆ...