ಗುಜರಾತ್ | ಎಎಪಿ ಶಾಸಕನ ಮೇಲೆ ಬೂಟು ಎಸೆದ ಕಿಡಿಗೇಡಿ

Date:

ಎಎಪಿ ಶಾಸಕರೊಬ್ಬರ ಮೇಲೆ ಕಿಡಿಗೇಡಿಯೊಬ್ಬ ಬೂಟು ಎಸೆದಿರುವ ಘಟನೆ ಗುಜರಾತ್‌ನ ಜಾಮ್‌ನಗರದಲ್ಲಿ ನಡೆದಿದೆ. ನಗರದ ಟೌನ್‌ಹಾಲ್‌ನಲ್ಲಿ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಆರೋಪಿ ಕೃತ್ಯ ಎಸಗಿದ್ದು, ಆತನನ್ನು ಸ್ಥಳದಲ್ಲಿದ್ದವರು ಥಳಿಸಿದ್ದಾರೆ.

- Advertisement -

ಗುಜರಾತ್‌ನ ವಿಶ್ವದರ್ ವಿಧಾನಸಭಾ ಕ್ಷೇತ್ರ ಎಎಪಿ ಶಾಸಕ ಗೋಪಾಲ್ ಇಟಾಲಿಯಾ ಅವರ ಮೇಲೆ ಆರೋಪಿ ಬೂಟು ಎಸೆದಿದ್ದಾನೆ. ಆತನನ್ನು ಕಾಂಗ್ರೆಸ್‌ ಕಾರ್ಯಕರ್ತ ಛತ್ರಪಾಲ್ ಸಿನ್ಹ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗ್ರಾಮೀಣ ಜಾನಪದ ಪರಂಪರೆಯನ್ನು ಜೀವಂತವಾಗಿರಿಸಿದ ಚಾಮರಾಜನಗರದ ಗೌರಮ್ಮ

ಹಳ್ಳಿಗಳ ಮಣ್ಣಿನ ಸೊಗಡು, ಮಹಿಳೆಯರ ಬದುಕಿನ ಅನುಭವ, ಕುಟುಂಬದ ಸಂಪ್ರದಾಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹಾಡಿನ ಮೂಲಕ ಅಭಿವ್ಯಕ್ತಿಸುವ ಸೋಬಾನೆ ಪದಗಳ ಗಾಯನಕ್ಕೆ ದಶಕಗಳಿಂದ ತಮ್ಮ ಬದುಕನ್ನೇ ಮುಡಿಪಾಗಿಟ್ಟಿರುವ ಚಾಮರಾಜನಗರದ ಹಿರಿಯ ಜಾನಪದ...

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ...

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ ಎಂಟು ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳ ರಚನೆ, ಮರುರಚನೆ ಹಾಗೂ ವಿಮೋಚನೆಯ ಇತಿಹಾಸವೂ ಇದೆ. ಭಾಷಾವಾರು ರಾಜ್ಯಗಳಿಗಾಗಿ ನಡೆದ...

ರಾಜ್ಯೋತ್ಸವ ವಿಶೇಷ | ಕನ್ನಡಕ್ಕೊಂದು ವಿಜ್ಞಾನದ ಓದು

ವಿಜ್ಞಾನ ಓದು ಎಂದರೇನು? ಕನ್ನಡಕ್ಕಾಗಿ ಅಂತಹದೊಂದು ಬೇಕಾ? ಇಂತಹದ್ದೊಂದರ ಚರ್ಚೆ ಇಂದಿನ ಅಗತ್ಯಗಳಲ್ಲೊಂದು. ಏಕೆಂದರೆ ನಮ್ಮಲ್ಲಿ ಓದು ಎನ್ನುವುದು ಬಹುಪಾಲು ಸಾಹಿತ್ಯಕವಾದ ಓದೇ ಆಗಿದೆ. ಸಾಹಿತ್ಯದಲ್ಲಿ ಸಹಜವಾಗಿ ಕಾಣಬರುವ ಒಂದು ಬಗೆಯ ಎಲ್ಲವೂ...

ಜಾಮ್‌ನಗರ ನಗರ ಪಾಲಿಕೆಯ ಕಾಂಗ್ರೆಸ್‌ ಕೌನ್ಸಿಲರ್‌ ಫೆಮಿದಾಬೆನ್ ಜುನೇಜಾ, ಅಸ್ಲಾಂ ಖಿಲ್ಜಿ ಹಾಗೂ ವಕೀಲ ಜನಾಬೆನ್ ಖಾಫಿ ಅವರು ಎಎಪಿ ಶಾಸಕ ಗೋಪಾಲ್ ಸಮ್ಮುಖದಲ್ಲಿ ಎಎಪಿಗೆ ಸೇರ್ಪಡೆಯಾಗಿದ್ದಾರೆ. ಇದರಿಂದ, ಕುಪಿತಗೊಂಡ ಆರೋಪಿ, ಶಾಸಕರ ಮೇಲೆ ಬೂಟು ಎಸೆದಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಲೇಖನ ಓದಿದ್ದೀರಾ?: ದ್ವೇಷ ಭಾಷಣ ನಿಷೇಧ ವಿಧೇಯಕ | ಕರ್ನಾಟಕದ ಸೌಹಾರ್ದ ಪರಂಪರೆಗೆ ರಕ್ಷಾ ಕವಚವಾಗಬಲ್ಲದೇ?

ಶಾಸಕ ಗೋಪಾಲ್ ಇಟಾಲಿಯಾ ಅವರು ಸಭೆಯಲ್ಲಿ ಮಾತನಾಡುವಾಗ, ಆರೋಪಿ ಛತ್ರಪಾಲ್ ಸಿನ್ಹ್ ವೇದಿಕೆಯ ಬಳಿ ನೆಲದಲ್ಲಿ ಕುಳಿತಿದ್ದರು. ಏಕಾಏಕಿ ಗೋಪಾಲ್ ಅವರ ಎಡೆಗೆ ಬೂಟು ಎಸೆದಿದ್ದಾರೆ. ಕ್ಷಣಾರ್ಧದಲ್ಲಿ ಗೋಪಾಲ್‌ ಅವರು ಪೆಟ್ಟು ಬೀಳುವುದರಿಂದ ತಪ್ಪಿಸಿಕೊಂಡಿದ್ದಾರೆ. ತಕ್ಷಣವೇ ವೇದಿಕೆಯ ಮೇಲಿದ್ದವರು ಆತನ್ನು ಹಿಡಿದು ಥಳಿಸಿದ್ದಾರೆ. ಪೊಲೀಸರಿಗೆ ಒಪ್ಪಿಸಿದ್ದಾರೆ.

ಘಟನೆಯ ಹಿಂದೆ ಕಾಂಗ್ರೆಸ್ ಮತ್ತು ಬಿಜೆಪಿಯ ಕೈವಾಡವಿದೆ ಎಂದು ಎಎಪಿ ಆರೋಪಿಸಿದೆ. ಘಟನೆಯನ್ನು ಖಂಡಿಸಿರುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಮಿತ್ ಚಾವ್ಡಾ, ‘ಘಟನೆಯಲ್ಲಿ ಕಾಂಗ್ರೆಸ್ ಪಕ್ಷದ ಯಾವುದೇ ಪಾತ್ರವಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಪಂಜಾಬ್‌ನಲ್ಲಿ ಆಪ್‌ಗೆ ಇಬ್ಬರು ಶಾಸಕರ ರಾಜೀನಾಮೆ

2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಮುನ್ನವೇ ಆಡಳಿತಾರೂಢ ಆಮ್ ಆದ್ಮಿ ಪಕ್ಷಕ್ಕೆ...

ಪ್ರತಿ ಅಂಗಡಿಯನ್ನೂ BJP ಬಲವಂತವಾಗಿ ಮುಚ್ಚಿಸಿದೆ, ಕನ್ನಾಟ್ ಪ್ಲೇಸ್ ವ್ಯಾಪಾರಿಗಳ ನಷ್ಟಕ್ಕೆ ಬಿಜೆಪಿಯೇ ಕಾರಣ: ರಾಹುಲ್ ಗಾಂಧಿ ಕಿಡಿ

ದೆಹಲಿಯ ಕನ್ನಾಟ್ ಪ್ಲೇಸ್‌ನ ಪ್ರತಿಯೊಂದು ಅಂಗಡಿಯನ್ನೂ ಬಿಜೆಪಿ ಬಲವಂತವಾಗಿ ಮುಚ್ಚಿಸಲಾಗಿದೆ. ಸ್ಥಳೀಯ...