ಗುಂಡ್ಲುಪೇಟೆ | ಕನಕ ಜಯಂತಿ ವೇಳೆ ಯತೀಂದ್ರಗೆ ಕೆಟ್ಟದಾಗಿ ಬೈದು ಪರಾರಿಯಾದ ಯುವಕ ಬಂಧನ

Date:

Advertisements

ಗುಂಡ್ಲುಪೇಟೆಯಲ್ಲಿ ನಡೆಯುತ್ತಿದ್ದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಭಾಷಣ ಮಾಡುವಾಗ ಬೈಕ್‌ನಲ್ಲಿ ಬಂದ ಯುವಕ ಅವರನ್ನು ಕೆಟ್ಟದಾಗಿ ಬೈಯ್ದು ಪರಾರಿಯಾಗಲು ಯತ್ನಿಸಿದ ಘಟನೆ ಶನಿವಾರ ನಡೆದಿದೆ.

ಯತೀಂದ್ರ ಸಿದ್ದರಾಮಯ್ಯಗೆ ಅವಾಚ್ಯ ಶಬ್ದದಿಂದ ನಿಂಧಿಸಿ ಅಲ್ಲಿಂದ ಪರಾರಿ ಆಗಿದ್ದಾನೆ. ಹೀಗೆ ಕೆಟ್ಟ ಪದಗಳಿಂದ ಬೈದು ಹೋದ ವ್ಯಕ್ತಿಯನ್ನು ಸ್ಥಳೀಯ ರಂಜಿತ್ ಎಂದು ಗುರುತಿಸಲಾಗಿದೆ.

ಯತೀಂದ್ರ ಅವರು ಬಾಷಣ ಮಾಡುವಾಗ ಕೇಂದ್ರ ಸರ್ಕಾರ ಹಾಗೂ ರಾಮಮಂದಿರ ನಿರ್ಮಾಣದ ಬಗ್ಗೆ ಮಾತನಾಡುತ್ತಿದ್ದರು. ಬಿಜೆಪಿ ರಾಮಮಂದಿರ ನಿರ್ಮಾಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಟೀಕೆ ಮಾಡಿದರು. ಈ ವೇಳೆ ರಂಜಿತ್ ಕೆಟ್ಟ ಪದಗಳಿಂದ ನಿಂದನೆ ಮಾಡಿದ್ದಾನೆ. ಈ ವೇಳೆ ಆತನನ್ನು ಹಿಡಿಯಲು ಕಾರ್ಯಕ್ರಮದಲ್ಲಿದ್ದ ಸಾರ್ವಜನಿಕರು ಹಾಗೂ ಕಾವಲಿದ್ದ ಪೊಲೀಸರು ಓಡಿ ಹೋದರೂ ಬೈಕ್‌ನಲ್ಲಿದ್ದರಿಂದ ಆತ ಅವರ ಕೈಗೆ ಸಿಗದೇ ಪರಾರಿ ಆಗಿದ್ದಾನೆ.

Advertisements

ಆ ವ್ಯಕ್ತಿ ಬೈದು ಹೋದ ನಂತರ ಜನರು ಕೂಡ ಕಾರ್ಯಕ್ರಮದಲ್ಲಿ ಎದ್ದು ಕೂಡಲೇ ಆ ವ್ಯಕ್ತಿಯನ್ನು ಬಂಧಿಸಬೇಕು ಎಂದು ಪೊಲೀಸರ ಮುಂದೆ ಪಟ್ಟು ಹಿಡಿದಿದರು. ಇನ್ನು ಯತೀಂದ್ರ ಅವರ ಭಾಷಣವನ್ನೂ ಕೇಳದೇ ಗಲಾಟೆ ಆರಂಭಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೂವರು ಮಾನಗೆಟ್ಟ ನಾಯಕರು ಮತ್ತು ರಾಜಕಾರಣ

“ನೀವು ಕುಳಿತುಕೊಳ್ಳಿ, ಶತ ಶತಮಾನಗಳಿಂದಲೂ ದಲಿತರು ಹಾಗೂ ಕೆಳವರ್ಗದವರಿಗೆ ಈ ರೀತಿಯ ಅವಮಾನ ಆಗುತ್ತಿವೆ. ಆದರೆ, ಈಗ ಸಂವಿಧಾನ ನಮ್ಮ ದೇಶದಲ್ಲಿದೆ. ಕೆಟ್ಟದಾಗಿ ಬೈದು ಹೋದವನನ್ನು ಪೊಲೀಸರು ಹಿಡಿದು ತಕ್ಕ ಶಿಕ್ಷೆ ನೀಡುತ್ತಾರೆ” ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಯತೀಂದ್ರ ಅವರಿಗೆ ಬೈದು ಪರಾರಿ ಆಗಿದ್ದ ಯುವಕ ಕೆಲವೇ ಕ್ಷಣಗಳಲ್ಲಿ ಪುನಃ ವೇದಿಕೆ ಕಾರ್ಯಕ್ರಮದತ್ತ ಆಗಮಿಸಿದ್ದಾನೆ. ಆಗ ಪೊಲೀಸರು ಅಲರ್ಟ್‌ ಆಗಿದ್ದು, ಮೈದಾನಕ್ಕೆ ಆಗಮಿಸುತ್ತಿದ್ದಂತೆ ವಶಕ್ಕೆ ಪಡೆದಿದ್ದಾರೆ. ಜನರು ಆತನ ಮೇಲೆ ಹಲ್ಲೆ ಮಾಡುವುದಕ್ಕೆ ಮುಂದಾಗ ಆತನನ್ನು ಜೀಪಿಗೆ ಹತ್ತಿಸಿಕೊಂಡು ಪೊಲೀಸ್‌ ಠಾಣೆಗೆ ಕರೆದೊಯ್ದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X