ಮೆಡಿಕಲ್ ಸೀಟು ಸಿಕ್ಕಿದ್ದರೆ ವೈದ್ಯನಾಗುತ್ತಿದ್ದೆ, ಸಿಗಲಿಲ್ಲ ಸಿಎಂ ಆದೆ: ಸಿದ್ದರಾಮಯ್ಯ

Date:

Advertisements
  • ವಿದ್ಯಾರ್ಥಿ ಜೀವನದ ಆಸೆಯನ್ನು ನೆನಪಿಸಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ
  • ಎಂ.ಆರ್.ಐ ಘಟಕ, ಸುಟ್ಟ ಗಾಯಗಳ ನವೀಕೃತ ವಾರ್ಡ್ ಉದ್ಘಾಟಿಸಿ ಅಭಿಮತ

ನನಗೂ ಏಪ್ರಾನ್ ಹಾಕೊಂಡು, ಸ್ಟೆಥಸ್ಕೋಪ್ ಕುತ್ತಿಗೆಗೆ ನೇತಾಕಿಕೊಂಡು ಓಡಾಡ್ಬೇಕು ಅನ್ನೋ ಆಸೆ ಇತ್ತು. ಕೆ ಆರ್‌ ಮೆಡಿಕಲ್ ಕಾಲೇಜಿನ ಕ್ಯಾಂಟೀನ್ ಗೆ ನಾನು ಹೈಸ್ಕೂಲ್ ಓದುವಾಗ ಬರುತ್ತಿದ್ದೆ. ಆಗೆಲ್ಲಾ ನನಗೆ ಈ ಆಸೆ ಬರುತ್ತಿತ್ತು. ಆದರೆ ನನಗೆ ಮೆಡಿಕಲ್ ಸೀಟೇ ಸಿಗಲಿಲ್ಲ. ಸೀಟು ಸಿಕ್ಕಿದ್ದರೆ ವೈದ್ಯನಾಗುತ್ತಿದ್ದೆ, ಮುಖ್ಯಮಂತ್ರಿ ಆಗುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ವಿದ್ಯಾರ್ಥಿ ಜೀವನದ ಆಸೆಯನ್ನು ನೆನಪಿಸಿಕೊಂಡರು.

ಮೈಸೂರಿನ ಕೆ.ಆರ್.ಆಸ್ಪತ್ರೆಯ ಆವರಣದಲ್ಲಿ ನೂತನವಾಗಿ ಪ್ರಾರಂಭಿಸಿರುವ ಎಂ.ಆರ್.ಐ ಘಟಕ ಹಾಗೂ ಸುಟ್ಟ ಗಾಯಗಳ ನವೀಕೃತ ವಾರ್ಡ್ ಉದ್ಘಾಟಿಸಿದ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

“ಯಾವುದೇ ವೃತ್ತಿಯಾದರೂ ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ಮಾಡಿದರೆ ಅದಕ್ಕಿಂತ ದೊಡ್ಡ ಸಾರ್ಥಕತೆ ಮತ್ತೊಂದಿಲ್ಲ. ಪ್ರತಿಯೊಬ್ಬರೂ ಅವರವರ ವೃತ್ತಿ ಘನತೆಯನ್ನು ಕಾಪಾಡಿಕೊಳ್ಳಬೇಕು. ವೈದ್ಯ ವೃತ್ತಿ‌ ಬಹಳ ಶ್ರೇಷ್ಠವಾದದ್ದು. ನಮ್ಮ ತಪ್ಪಿನಿಂದ ಯಾವ ರೋಗಿಯೂ ಸಾಯಬಾರದು, ನರಳಬಾರದು ಎನ್ನುವ ವೃತ್ತಿ ಘನತೆ ಪ್ರತಿಯೊಬ್ಬ ವೈದ್ಯರಲ್ಲೂ ಇರಬೇಕು” ಎಂದು ಕಿವಿಮಾತು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರಕ್ಕೆ ನೂರು, ಸಮಸ್ಯೆ ನೂರಾರು

ಕೆ ಆರ್ ಆಸ್ಪತ್ರೆಗೆ ಕಾಯಕಲ್ಪ ನೀಡುವ ಕಾರ್ಯ

“ಕೆ.ಆರ್.ಮೆಡಿಕಲ್ ಕಾಲೇಜು ಸಾವಿರಾರು ವೈದ್ಯರನ್ನು ಈ ದೇಶಕ್ಕೆ ಕೊಟ್ಟಿದೆ. ದೇಶದ ನಾನಾ ರಾಜ್ಯಗಳಲ್ಲಿ ಮತ್ತು ವಿದೇಶಗಳಲ್ಲೂ ಈ ಕಾಲೇಜಿನಲ್ಲಿ ಸಿದ್ದಗೊಂಡ ವೈದ್ಯರು ವೃತ್ತಿ ಘನತೆ ಹೆಚ್ಚಿಸುತ್ತಿದ್ದಾರೆ. ಕೆ.ಆರ್.ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಶತಮಾನೋತ್ಸವವನ್ನು ಸಂಭ್ರಮದಿಂದ ಆಚರಿಸೋಣ. ಇದಕ್ಕೆ ಅಗತ್ಯವಾದ ಎಲ್ಲ ಸಹಕಾರ ಸರ್ಕಾರ ನೀಡಲಿದೆ” ಎಂದರು.

ಕೆ ಆರ್ ಆಸ್ಪತ್ರೆಗೆ ಕಾಯಕಲ್ಪ ನೀಡುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಪ್ರಸ್ತುತ 1200 ಹಾಸಿಗೆಗಳಿರುವ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಬೇಡಿಕೆ ಇದೆ. ಇದನ್ನು ಸರ್ಕಾರ ಪರಿಶೀಲಿಸಲಿದೆ ಎಂದು ಉದ್ಘಾಟನೆಗೂ ಮುನ್ನ ಮಾಧ್ಯಮಗಳಿಗೆ ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರೂ ಆದ ಸಮಾಜ ಕಲ್ಯಾಣ ಸಚಿವ ಡಾ.ಹೆಚ್ ಸಿ ಮಹದೇವಪ್ಪ ಅಧ್ಯಕ್ಷತೆ ವಹಿಸಿದ್ದರು. ಸಂಸದ ಪ್ರತಾಪ್ ಸಿಂಹ ಸೇರಿದಂತೆ ಜಿಲ್ಲೆಯ ಶಾಸಕರು, ವೈದ್ಯಕೀಯ ಶಿಕ್ಷಣ ಇಲಾಖೆಯ ಸುಜಾತಾ ರಾಥೋಡ್ ಸೇರಿ ಹಲವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X