ಸಿಸೋಡಿಯಾ ಇಲ್ಲಿ ಇದ್ದಿದ್ದರೆ ನನಗೆ ಈ ರೀತಿ ಆಗುತ್ತಿರಲಿಲ್ಲ: ಸ್ವಾತಿ ಮಲಿವಾಲ್

Date:

ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಈಗ ಜೈಲಿನಿಂದ ಹೊರಗೆ ಇದ್ದಿದ್ದರೆ ನಾನು ಇಂತಹ ವಿವಾದದಲ್ಲಿ ಸಿಲುಕಬೇಕಾಗಿರಲಿಲ್ಲ ಎಂದು ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಭಾನುವಾರ ಹೇಳಿದ್ದಾರೆ.

- Advertisement -

ಈ ಬಗ್ಗೆ ಎಕ್ಸ್‌ನಲ್ಲಿ ಸ್ವಾತಿ ಮಲಿವಾಲ್ ಪೋಸ್ಟ್ ಮಾಡಿದ್ದಾರೆ. “ನಿರ್ಭಯಾಗೆ ನ್ಯಾಯ ಕೊಡಿಸಲು ನಾವೆಲ್ಲ ಬೀದಿಗಿಳಿಯುತ್ತಿದ್ದ ಕಾಲವಿತ್ತು, ಇಂದು 12 ವರ್ಷಗಳ ನಂತರ ಸಿಸಿಟಿವಿ ದೃಶ್ಯಾವಳಿಗಳನ್ನು ಕಣ್ಮರೆಯಾಗಿಸಿ ಫೋನ್ ಫಾರ್ಮಾಟ್ ಮಾಡಿದ ಆರೋಪಿಯನ್ನು ರಕ್ಷಿಸಲು ನಾವೆಲ್ಲರೂ ಬೀದಿಗಿಳಿದಿದ್ದೇವೆಯೇ” ಎಂದು ಸ್ವಾತಿ ಮಲಿವಾಲ್ ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಅವರು (ಎಎಪಿ) ಮನೀಶ್ ಸಿಸೋಡಿಯಾ ಅವರಿಗಾಗಿ ಇಷ್ಟು ಬಲ ಪ್ರಯೋಗ ಮಾಡುತ್ತಿದ್ದರು ಎಂದು ನಾನು ಬಯಸುತ್ತೇನೆ. ಸಿಸೋಡಿಯಾ ಇಲ್ಲಿ ಇದ್ದಿದ್ದರೆ ಬಹುಶಃ ವಿಷಯ ಇಷ್ಟು ಕೆಟ್ಟದಾಗುತ್ತಿರಲಿಲ್ಲ” ಎಂದು ಎಕ್ಸ್‌ ಪೋಸ್ಟ್‌ನಲ್ಲಿ ಸ್ವಾತಿ ಬರೆದುಕೊಂಡಿದ್ದಾರೆ.

ಇದನ್ನು ಓದಿದ್ದೀರಾ?  ದೆಹಲಿ ಅಬಕಾರಿ ನೀತಿ ಪ್ರಕರಣ | ಸಿಸೋಡಿಯಾ ಜಾಮೀನು ಅರ್ಜಿ; ಸಿಬಿಐ, ಇಡಿಗೆ ಹೈಕೋರ್ಟ್ ನೋಟಿಸ್

ಮೇ 13 ರಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಕುಮಾರ್ ಅವರು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸ್ವಾತಿ ಮಲಿವಾಲ್ ಆರೋಪಿಸಿದ್ದಾರೆ. ಸದ್ಯ ಈ ಪ್ರಕಣದಲ್ಲಿ ಬಂಧನಕ್ಕೆ ಒಳಗಾಗಿರುವ ಬಿಭವ್ ಐದು ದಿನಗಳ ಪೊಲೀಸ್ ಕಸ್ಟರಿಯಲ್ಲಿದ್ದಾರೆ.

ಶನಿವಾರ ತಡರಾತ್ರಿ ನಡೆದ ವಿಚಾರಣೆ ವೇಳೆ ದೆಹಲಿ ಪೊಲೀಸರು ತೀಸ್ ಹಜಾರಿ ನ್ಯಾಯಾಲಯಕ್ಕೆ ಸಿಎಂ ಗೃಹ ಸಿಬ್ಬಂದಿ ಒದಗಿಸಿದ್ದ ಸಿಸಿಟಿವಿ ದೃಶ್ಯಾವಳಿಗಳು ಬ್ಲ್ಯಾಕ್ ಆಗಿರುವುದು ಕಂಡು ಬಂದಿದೆ ಎಂದು ತಿಳಿಸಿದ್ದಾರೆ.

ಕುಮಾರ್ ತಮ್ಮ ಮೊಬೈಲ್ ಫೋನ್ ನೀಡಿದ್ದರೂ ಪಾಸ್‌ವರ್ಡ್ ನೀಡಿಲ್ಲ. ಇದಲ್ಲದೆ, ಅವರು ಈಗಾಗಲೇ ಒಂದು ದಿನದ ಹಿಂದೆ ತನ್ನ ಫೋನ್ ಅನ್ನು ಫಾರ್ಮ್ಯಾಟ್ ಮಾಡಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ.

ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ಅವರನ್ನು 2023 ಫೆಬ್ರವರಿ 26 ರಂದು ಸಿಬಿಐ ಬಂಧಿಸಿತ್ತು. ಅಂದಿನಿಂದ ಬಂಧನದಲ್ಲಿಯೇ ಇದ್ದಾರೆ.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...