ಹಡಬಿ ದುಡ್ಡಲ್ಲಿ ಚುನಾವಣೆ ಎದುರಿಸಿದ್ದೀರಿ; ಯಡಿಯೂರಪ್ಪ ವಿರುದ್ಧ ಬೇಳೂರು ಗೋಪಾಲಕೃಷ್ಣ ವಾಗ್ದಾಳಿ

Date:

ಬಿ ಎಸ್ ಯಡಿಯೂರಪ್ಪ‌ ಅವರು ಮೂರು ಬಾರಿ ಮುಖ್ಯಮಂತ್ರಿಯಾಗಿದ್ದವರು. 110 ಸೀಟಿನ ಮೇಲೆ ಯಾವತ್ತೂ ಅವರ ಪಕ್ಷ ಹೋಗಿಲ್ಲ. ಇನ್ನು 28 ಕ್ಷೇತ್ರವನ್ನೂ ಗೆಲ್ಲುತ್ತೇವೆ ಎನ್ನುವುದು ಹಾಸ್ಯಾಸ್ಪದ. ಅಪ್ಪ ಮಕ್ಕಳ ಬಳಿ ಹಡಬಿ ದುಡ್ಡು ಇರಬಹುದು, ಆ ದುಡ್ಡಿನಿಂದ ಚುನಾವಣೆ ಎದುರಿಸಿದ್ದೀರಿ ಎಂಬುದು ಗೊತ್ತಿದೆ ಎಂದು ಸಾಗರದ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ವಾಗ್ದಾಳಿ ನಡೆಸಿದರು.

- Advertisement -

ಶಿವಮೊಗ್ಗದಲ್ಲಿ ಗುರುವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಕಾಂಗ್ರೆಸ್ ಅನ್ನೋದು ಅಷ್ಟು ನಿಷ್ಕಿಯವಾಗಿದೆ ಎನ್ನುವುದು ಯಡಿಯೂರಪ್ಪ ಮಾತಿನ ಅರ್ಥವಾ? ಕಾಂಗ್ರೆಸ್ಸಿಗೆ ಒಂದೂ ಸೀಟ್ ಬರುವುದಿಲ್ಲ ಎನ್ನುತ್ತಾರೆ. ಕಾಂಗ್ರೆಸ್, ಜೆಡಿಎಸ್ ಸರ್ಕಾರ ಉರುಳಿಸಿ, ಹಡಬಿ ದುಡ್ಡು ಮಾಡಿದ್ದು ಯಾರು ಎಂಬುದು ಗೊತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಯಡಿಯೂರಪ್ಪ ಅವರಿಗೆ ಓಪನ್ ಚಾಲೆಂಜ್ ಹಾಕುತ್ತೇನೆ. 28ಕ್ಕೆ 28 ಕ್ಷೇತ್ರವನ್ನೂ ನೀವು ಗೆದ್ದರೆ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಇಲ್ಲದಿದ್ದರೆ, ಅಪ್ಪಮಕ್ಕಳು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೀರಾ” ಎಂದು ಪ್ರಶ್ನಿಸಿದರು.

“ಮೋದಿಯವರ ಹೆಸರು ಹೇಳಿ ವೋಟ್ ಕೇಳುವ ಪರಿಸ್ಥಿತಿ ರಾಘವೇಂದ್ರ ಅವರಿಗೆ ಬಂದಿದೆ ಎಂದರೆ ಅವರ ಕೆಲಸ ಶೂನ್ಯ ಎಂದರ್ಥಲ್ಲವೇ? ಯಡಿಯೂರಪ್ಪ ಏನು ಬೇಕಾದರೂ ಮಾತನಾಡುತ್ತಾರೆ. ಬಂಗಾರಪ್ಪ ಮತ್ತು ರಾಜ್ ಕುಮಾರ್ ಕುಟುಂಬದಿಂದ ಬಂದ, ನಮ್ಮ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರು ಸ್ಪರ್ಧಿಸಿದಾಗ ಜನರಿಗೆ ಮನವರಿಕೆಯಾಗಿದೆ” ಎಂದರು.

“ಯಡಿಯೂರಪ್ಪ ಅವರ ಅಭಿವೃದ್ಧಿ ಏನಂದರೆ ಶಿಕಾರಿಪುರಕ್ಕೆ ಬಂದು ಹಡಬಿ ದುಡ್ಡು ಮಾಡಿದ್ದು, ನಿಮ್ಮ ಕ್ಷೇತ್ರವನ್ನು ಬಿಟ್ಟು ನಿಮಗೆ ಜಿಲ್ಲೆಯ ಬೇರೆ ಯಾವ ತಾಲೂಕುಗಳೂ ಕಾಣಿಸಲಿಲ್ಲ. ವಿಮಾನ ನಿಲ್ದಾಣವನ್ನು ನೀವು ನಿರ್ಮಿಸಿಲ್ಲದಿದ್ದರೆ ನಮ್ಮ ಸರ್ಕಾರ ನಿರ್ಮಿಸುತ್ತಿತ್ತು, ಆ ತಾಕತ್ ನಮಗಿದೆ” ಎಂದು ಹರಿಹಾಯ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ಭದ್ರಾವತಿ | ಕಾಂಗ್ರೆಸ್‌ನಲ್ಲಿ ನಿಷ್ಠಾವಂತರಿಗೆ ಸೂಕ್ತ ಪ್ರತಿಫಲ ಸಿಗುತ್ತದೆ: ಸಿ.ಜಿ. ಮಧುಸೂದನ್

ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಸಿ.ಜಿ. ಮಧುಸೂದನ್ ಅವರು ಶನಿವಾರ...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...