ಹಾಸನ ಪೆನ್ ಡ್ರೈವ್ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ, ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ಕೊಡಿ: ಕುಶಾಲಾ ಸ್ವಾಮಿ

Date:

ಹಾಸನ ಸೇರಿದಂತೆ ರಾಜ್ಯದಾದ್ಯಂತ ಓಡಾಡುತ್ತಿರುವ ಸಾವಿರಾರು ಅಶ್ಲೀಲ ವಿಡಿಯೋಗಳುಳ್ಳ ಪೆನ್ ಡ್ರೈವ್, ಸಿಡಿ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಸಿಐಡಿ ತನಿಖೆಗೆ ವಹಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ ಮಹಿಳಾ ಘಟಕದ ಅಧ್ಯಕ್ಷೆ ಕುಶಾಲಾ ಸ್ವಾಮಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

- Advertisement -

“ವಿಡಿಯೊ ಕುರಿತು ವಿಧಿವಿಜ್ಞಾನ ಪರೀಕ್ಷೆ ನಡೆಸಿ ವಂಚಕನನ್ನು ಬಂಧನ ಮಾಡಬೇಕು. ಆತ ಎಷ್ಟೇ ಪ್ರಭಾವಿಯಾದರೂ ಕಾನೂನುಬದ್ಧ ಕ್ರಮಕೈಗೊಳ್ಳಬೇಕು. ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ನೀಡಬೇಕು. ವಿಡಿಯೋಗಳನ್ನು ಹಂಚಿಕೆ ಮಾಡುತ್ತಿರುವವರಿಗೆ ಕಡಿವಾಣ ಹಾಕಬೇಕು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯುಪಿ ಚುನಾವಣೆ | BJPಗೆ ಕ್ಷೇತ್ರ ಹಂಚಿಕೆ ಸವಾಲು;...

ಉತ್ತರ ಪ್ರದೇಶದ 2027ರ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿವೆ. ಸತತ ಮೂರನೇ ಬಾರಿಗೆ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಹೆಣಗಾಡುತ್ತಿದ್ದು, ಎನ್‌ಡಿಎ ಮಿತ್ರಪಕ್ಷಗಳೊಂದಿಗೆ ಸ್ಥಾನ ಹಂಚಿಕೆ ಮಾತುಕತೆ ಆರಂಭಿಸಿದೆ. ಮತ್ತೊಂದೆಡೆ ಸಮಾಜವಾದಿ...

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ...

ರಾಯಚೂರು ಜಿಲ್ಲೆ, ಜಾಲಹಳ್ಳಿಯ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಶುದ್ಧ ಕುಡಿಯುವ ನೀರಿನ ಅಭಾವ, ಕಾಂಪೌಂಡ್ ಇಲ್ಲದಿರುವುದು ಹಾಗೂ ಶಾಲಾ ಜಾಗದ ವಿವಾದ ಸೇರಿದಂತೆ ಹಲವು ಸಮಸ್ಯೆಗಳು ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಿವೆ....

“ಕೃತ್ಯ ಎಸಗಿರುವ ವ್ಯಕ್ತಿ ಯಾವನೇ ಆಗಿರಲಿ, ನಾವು ಮೊದಲು ಸಂತ್ರಸ್ತೆಯರ ರಕ್ಷಣೆಗೆ ನಿಲ್ಲಬೇಕು. ಸಾವಿರಾರು ಮಹಿಳೆಯರು ವಂಚನೆಗೆ ಒಳಗಾಗಿರುವುದಲ್ಲದೆ, ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿರುವುದರಿಂದ ಹಲವರು ಆತ್ಮಹತ್ಯೆಯ ಹಾದಿ ಹಿಡಿದಿದ್ದಾರೆ. ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ನೀಡುವ ಕೆಲಸ ಮೊದಲಾಗಬೇಕು. ಓರ್ವ ಅಭ್ಯರ್ಥಿ ಮೇಲಿನ ರಾಜಕೀಯ ದ್ವೇಷಕ್ಕೆ ಸಾವಿರಾರು ಮಹಿಳೆಯರ ಬದುಕು ನರಕವಾಗುವುದನ್ನು ಸಹಿಸಲಾಗುವುದಿಲ್ಲ. ಅಶ್ಲೀಲ ವಿಡಿಯೊಗಳನ್ನು ಹಂಚಿದರೆ, ಅದರಲ್ಲಿರುವ ಮಹಿಳೆಯರ ಪರಿಸ್ಥಿತಿ ಏನಾಗಬಹುದು ಎಂಬುದನ್ನು ಕೊಂಚವೂ ಯೋಚಿಸದಿರುವುದು ದುರಂತ” ಎಂದು ಬೇಸರ ವ್ಯಕ್ತಪಡಿಸಿದರು.

“ಎರಡು ಸಾವಿರಕ್ಕೂ ಹೆಚ್ಚು ಖಾಸಗಿ ವಿಡಿಯೋಗಳು ಹರಿದಾಡುತ್ತಿವೆ ಎನ್ನಲಾಗುತ್ತಿದೆ. ಅಷ್ಟೂ ಮಂದಿ ಸಂತ್ರಸ್ತೆಯರ ಪರಿಸ್ಥಿತಿ ಏನಾಗಬೇಕು? ಅವರ ಕುಟುಂಬ ಸದಸ್ಯರಿಗೆ ಖಾಸಗಿ ವಿಡಿಯೊಗಳು ಲಭ್ಯವಾದರೆ ಏನೇನು ದುರಂತಗಳಾಗುತ್ತವೆ? ಮುಂದಾಗಬಹುದಾದ ದುಷ್ಪರಿಣಾಮಗಳಿಗೆ ಯಾರು ಹೊಣೆ? ವಿಡಿಯೊಗಳ ಹಂಚಿಕೆಗೆ ತಡೆಯೊಡ್ಡುವ ನಿಟ್ಟಿನಲ್ಲಿ ಏನು ಕ್ರಮ ಕೈಗೊಳ್ಳಲಾಗಿದೆ? ಹೆಣ್ಣುಮಕ್ಕಳ ಬದುಕು ಬೀದಿಗೆ ಬಿದ್ದರೂ ಬೀಳಲಿ, ನಮಗೆ ರಾಜಕೀಯ ಲಾಭವಾದರೆ ಸಾಕು ಎಂಬ ಧೋರಣೆಯನ್ನು ರಾಜ್ಯ ಸರ್ಕಾರ ಅನುಸರಿಸುತ್ತಿದೆಯೇ?” ಎಂದು ಖಾರವಾಗಿ ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅಬ್ಬರದ ಜನಜಾಗೃತಿ ನಡುವೆಯೂ ಕರ್ತವ್ಯ ಮರೆತ ನಗರದ ಮಂದಿ: ಅದೇ ಹಳೆ ಕಥೆ

“ಅಧಿಕಾರದ ಪ್ರಭಾವದಿಂದ ಮಹಿಳೆಯರನ್ನು ದುರ್ಬಳಕೆ ಮಾಡಿಕೊಂಡಿರುವುದು ಎಷ್ಟು ದೊಡ್ಡ ಅಪರಾಧವೋ, ವಿಡಿಯೊಗಳನ್ನು ಹಂಚಿಕೆ ಮಾಡುತ್ತಿರುವುದೂ ಅಷ್ಟೇ ದೊಡ್ಡ ಅಪರಾಧವಾಗಿದೆ. ಇವರೆಲ್ಲರೂ ಮಹಿಳೆಯರ ಪಾಲಿನ ರಾಕ್ಷಸರಾಗಿದ್ದಾರೆ. ಮಹಿಳೆಯರು ಎಚ್ಚೆತ್ತುಕೊಳ್ಳಬೇಕು. ಯಾವುದೇ ಪ್ರಭಾವಕ್ಕೆ ಒಳಗಾಗಿ ಇಂತಹ ಸಂಕಷ್ಟದ ಪರಿಸ್ಥಿತಿಗೆ ಸಿಕ್ಕಿಹಾಕಿಕೊಳ್ಳಬಾರದು” ಎಂದು ಎಚ್ಚರಿಕೆ ನೀಡಿದರು.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಸರ್ಕಾರಿ ಕಾನೂನು ಕಾಲೇಜಿನ ಪ್ರಾಚಾರ್ಯರ ವರ್ಗಾವಣೆಗೆ ಆಗ್ರಹಿಸಿ ವಿದ್ಯಾರ್ಥಿಗಳ ಮನವಿ

ಮರತೂರಿನ ವಿಜ್ಞಾನೇಶ್ವರ ಸರ್ಕಾರಿ ಕಾನೂನು ಕಾಲೇಜಿನ ಪ್ರಾಚಾರ್ಯ ಶಿವಾನಂದ ಎಚ್. ಲೇಗಂಟಿ...

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...