ಉತ್ತರ ಕನ್ನಡ | ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ಹಾರಿಸಿದ್ದ ಹನುಮ ಧ್ವಜ ತೆರವು

Date:

ಭಟ್ಕಳ ತಾಲೂಕಿನ ತಾಲ್ಲೂಕಿನ ತೆಂಗಿನಗುಂಡಿ ಬಂದರಿನ ಸರ್ಕಾರಿ ಜಾಗದಲ್ಲಿ ಅನುಮತಿ ಇಲ್ಲದೆ ಹಾರಿಸಲಾಗಿದ್ದ ಹನುಮ ಧ್ವಜ ಮತ್ತು ಅಲ್ಲಿ ಇರಿಸಲಾಗಿದ್ದ ಸಾವರ್ಕರ್ ನಾಮಫಲಕವನ್ನು ಅಧಿಕಾರಿಗಳು ಬುಧವಾರ ರಾತ್ರಿ ತೆರವುಗೊಳಿಸಿದ್ದಾರೆ.

ಈ ಹಿಂದೆ, ಜನವರಿ 28ರಂದು ಇದೇ ಜಾಗದಲ್ಲಿ ಬಿಜೆಪಿ ಮತ್ತು ಹಿಂದುತ್ವ ಕೋಮು ಕಾರ್ಯಕರ್ತರು ಹನುಮ ಧ್ವಜ ಹಾರಿದ್ದರು. ಅದನ್ನು ಹೆಬಳೆ ಗ್ರಾಮ ಪಂಚಾಯತಿ ಅಧಿಕಾರಿಗಳು ತೆರವುಗೊಳಿಸಿದ್ದರು.

ಆದರೆ, ಹಿಂದುತ್ವವಾದಿಗಳ ಗ್ರಾಮ ಪಂಚಾಯತಿ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಅಲ್ಲದೆ, ಕಳೆದ ಸೋಮವಾರ ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಸಭೆ ನಡೆಸಿದ್ದರು. ಸಭೆಯಲ್ಲಿ ಭಾಗಿಯಾಗಿದ್ದ ಸಂಸದ ಅನಂತ ಕುಮಾರ್ ಹೆಗಡೆ, ತನ್ನ ಬೆಂಬಲಿಗರನ್ನು ಕರೆದೊಯ್ದು, ತೆರವುಗೊಳಿಸಿದ್ದ ಸ್ಥಳದಲ್ಲೇ ಮತ್ತೆ ಹನುಮ ಧ್ವಜ ಹಾರಿಸಿ, ಸಾವರ್ಕರ್  ನಾಮಫಲಕ ಹಾಕಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಘಟನೆ ಸಂಬಂಧ ಅನಂತ ಕುಮಾರ್ ಹೆಗಡೆ ಸೇರಿದಂತೆ 21 ಮಂದಿ ವಿರುದ್ಧ ಭಟ್ಕಳ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಇದೀಗ, ಧ್ವಜ ಮತ್ತು ನಾಮಫಲಕವನ್ನು ಪಂಚಾಯತಿ ಅಧಿಕಾರಿಗಳು ತೆರವುಗೊಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ಶಾಶ್ವತ ನೀರಾವರಿ ಯೋಜನೆಗಾಗಿ ಪ್ರಧಾನಿ ಭೇಟಿ : ಶಾಸಕ ಸಮೃದ್ಧಿ ಮಂಜುನಾಥ್‌ ವಾಗ್ದಾನ

"ಬರಪೀಡಿತ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ತರುವ ಕುರಿತು ಪ್ರಧಾನಿ ಮೋದಿ ಭೇಟಿಗೆ...

ಹಾವೇರಿ : ಇಂಡಿಯಾ ಬುಕ್ ಆಫ್ ರೆಕಾರ್ಡ್‌ಗೆ ಸೇರ್ಪಡೆಗೊಂಡ ಎರಡು ವರ್ಷದ ಬಾಲಕಿ ಐರಾ

ಹಾವೇರಿ ಜಿಲ್ಲೆಯ ಹಾವೇರಿ ತಾಲೂಕಿನ ಕನವಳ್ಳಿ ಗ್ರಾಮದ ಶಿಕ್ಷಕ ಸುರೇಶ ಕತ್ತೆಬೆನ್ನೂರ...

ಉಪಚುನಾವಣೆ ಫಲಿತಾಂಶ | 13ರ ಪೈಕಿ 10ರಲ್ಲಿ ಗೆದ್ದ ‘ಇಂಡಿಯಾ’; ಎನ್‌ಡಿಎಗೆ ಕೇವಲ 2 ಸ್ಥಾನ

ಲೋಕಸಭಾ ಚುನಾವಣೆಯಲ್ಲಿನ ಪ್ರಬಲ ಪ್ರದರ್ಶನವನ್ನು ಮುಂದುವರೆಸಿರುವ 'ಇಂಡಿಯಾ' ಮೈತ್ರಿಕೂಟ ಏಳು ರಾಜ್ಯಗಳ...

ಕಲಬುರಗಿ | ನಗರಾಭಿವೃದ್ಧಿ ಇಲಾಖೆಯ ಎಡವಟ್ಟು; 6 ತಿಂಗಳ ಹಿಂದೆ ಮೃತಪಟ್ಟಿರುವ ಇಂಜಿನಿಯರ್ ವರ್ಗಾವಣೆ!

ಸರ್ಕಾರ ಮತ್ತು ಇಲಾಖೆಯಿಂದ ವರ್ಗಾವಣೆಯ ಎಡವಟ್ಟಿನಿಂದಾಗಿ 6 ತಿಂಗಳ ಹಿಂದೆ ಮೃತಪಟ್ಟ...