ಎಪ್‌ಸ್ಟೀನ್ ಫೈಲ್ಸ್‌ | ಟ್ವೀಟ್ ಡಿಲೀಟ್‌ಗೆ ಖುದ್ದು ಪುರಿಯಿಂದ ಬೆದರಿಕೆ! ‘ಥಗ್ ಆರ್ಮಿಗೆ ಹೆದರಲ್ಲ’ ಎಂದ ಮೊಯಿತ್ರಾ

Date:

ಎಪ್‌ಸ್ಟೀನ್ ಫೈಲ್‌ನಲ್ಲಿ ಎಪ್‌ಸ್ಟೀನ್‌ಗೆ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಮಾಡಿರುವ ಇಮೇಲ್ ಕೂಡಾ ಬಹಿರಂಗವಾಗಿದ್ದು, ಈ ಮಾಹಿತಿಯನ್ನು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ಬೆನ್ನಲ್ಲೇ ಖುದ್ದು ಪುರಿ ಅವರೇ ಮೊಯಿತ್ರಾ ಅವರಿಗೆ ಕರೆ ಮಾಡಿ ಟ್ವೀಟ್ ಡಿಲೀಟ್ ಮಾಡುವಂತೆ ಒತ್ತಡ, ಬೆದರಿಕೆ ಹಾಕಿದ್ದಾರೆ!

- Advertisement -

ವಿಶ್ವದಾದ್ಯಂತ ಹಲವು ಗಣ್ಯರೆನಿಸಿಕೊಂಡ ವ್ಯಕ್ತಿಗಳು, ಮಕ್ಕಳ ಲೈಂಗಿಕ ಅಪರಾಧಿ, ಅತ್ಯಾಚಾರಿ ಜೆಫ್ರಿ ಎಪ್‌ಸ್ಟೀನ್ ಜತೆ ಇಮೇಲ್ ಮಾಡಿರುವ ದಾಖಲೆಗಳ ‘ಎಪ್‌ಸ್ಟೀನ್ ಫೈಲ್ಸ್‌’ ಪ್ರಧಾನಿ ನರೇಂದ್ರ ಮೋದಿ ಸಂಪುಟ ಸಚಿವರತ್ತ ಬೆರಳು ಮಾಡಿರುವುದು ಸದ್ಯ ರಾಜಕೀಯವಾಗಿ ಕೋಲಾಹಲಕ್ಕೆ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದನ್ನು ಓದಿದ್ದೀರಾ? Epstein files | ಕಡತಗಳು ಬಿಚ್ಚಿಡುವ ಕರಾಳ ಸತ್ಯವೇನು? ಇದೆಯೇ ಇಸ್ರೇಲ್ ನಂಟು?

ಈ ಫೈಲ್ ಬಗ್ಗೆ ಎಕ್ಸ್‌ ಪೋಸ್ಟ್ ಮಾಡಿದ್ದ ಮೊಯಿತ್ರಾ, “ಶಿಕ್ಷೆಗೊಳಗಾದ ಲೈಂಗಿಕ ಅಪರಾಧಿ ಮತ್ತು ಸರಣಿಯಾಗಿ ಮಕ್ಕಳ ಮೇಲೆ ಅತ್ಯಾಚಾರ ನಡೆಸಿದಾತನ ಜತೆ ಇಮೇಲ್‌ನಲ್ಲಿ ಮಾಜಿ ಭಾರತೀಯ ರಾಜತಾಂತ್ರಿಕ ಪುರಿ ಅವರು ಎಪ್‌ಸ್ಟೀನ್‌ಗೆ ‘ಭಾರತದಲ್ಲಿ ಆಸಕ್ತಿ ಮೂಡಿಸುವ’ ಬಗ್ಗೆ ಮಾತನಾಡಿದ್ದಾರೆ. ‘ಆನಂದಿಸಿ’ ಎಂದು ಶುಭ ಹಾರೈಸಿದ್ದಾರೆ. ಅಲ್ಲದೆ ಎಪ್‌ಸ್ಟೀನ್‌ನ ‘ಎಕ್ಸೋಟಿಕ್ ಐಲ್ಯಾಂಡ್’ ಬಗ್ಗೆ ಪುರಿ ಅವರಿಗೆ ತಿಳಿದಿತ್ತು” ಎಂದು ಪೋಸ್ಟ್ ಮಾಡಿದ್ದಾರೆ. ಜತೆಗೆ ಇಮೇಲ್‌ನ ಸ್ಕ್ರೀನ್‌ಶಾಟ್‌ ಅನ್ನೂ ಹಂಚಿಕೊಂಡಿದ್ದಾರೆ.

ಇದಾದ ಬೆನ್ನಲ್ಲೇ ಪುರಿ ನೇರವಾಗಿ ಮೊಯಿತ್ರಾಗೆ ಕರೆ ಮಾಡಿ ಟ್ವೀಟ್ ಡಿಲೀಟ್ ಮಾಡುವಂತೆ ಒತ್ತಡ ಹೇರಿದ್ದಾರೆ ಎಂಬ ಆರೋಪ ಕೇಳಿಬಂದಿದೆ. “ಸಚಿವ ಪುರಿ ಅವರು ತಮಗೆ ಫೋನ್ ಮಾಡಿ ಎಪ್‌ಸ್ಟೀನ್ ಪ್ರಕರಣಕ್ಕೆ ಸಂಬಂಧಿಸಿದ ಟ್ವೀಟ್‌ಗಳನ್ನು ಅಳಿಸುವಂತೆ ಒತ್ತಡ ಹೇರಿದ್ದಾರೆ. ‘ಜನರು ನಿಮ್ಮ ಹಿಂದೆ ಬಿದ್ದರೆ ನಾನು ಏನೂ ಮಾಡಲು ಸಾಧ್ಯವಿಲ್ಲ’ ಎಂದು ಬೆದರಿಕೆಯನ್ನೂ ಹಾಕಿದ್ದಾರೆ” ಎಂದು ಮೊಯಿತ್ರಾ ಟ್ವೀಟ್ ಮಾಡಿ ಆರೋಪಿಸಿದ್ದಾರೆ. ಹಾಗೆಯೇ “ನಿಮ್ಮ ಥಗ್ ಆರ್ಮಿಗೆ (ಗುಂಡಾ ಪಡೆಗಳಿಗೆ) ನಾನು ಹೆದರುವುದಿಲ್ಲ, ನಾನು ಎದುರಿಸಲು ಸಿದ್ಧಳಿದ್ದೇನೆ” ಎಂದೂ ಮೊಯಿತ್ರಾ ಹೇಳಿದ್ದಾರೆ.

ಏನಿದು ಎಪ್‌ಸ್ಟೀನ್ ಫೈಲ್ಸ್?

ಅಮೆರಿಕದ ಕುಖ್ಯಾತ ಹಣಕಾಸು ತಜ್ಞ, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ನ ಅಪರಾಧ ಜಾಲಕ್ಕೆ ಸಂಬಂಧಿಸಿದ ಲಕ್ಷಾಂತರ ಪುಟಗಳ ಗೌಪ್ಯ ದಾಖಲೆಗಳೇ ಎಪ್‌ಸ್ಟೀನ್ ಫೈಲ್ಸ್ (Epstein Files) ಆಗಿದೆ. ದಶಕಗಳ ಕಾಲ ಬಾಲಕಿಯರ ಮೇಲೆ ಲೈಂಗಿಕ ಶೋಷಣೆ ಮತ್ತು ಮಾನವ ಕಳ್ಳಸಾಗಣೆ ಜಾಲವನ್ನು ನಡೆಸುತ್ತಿದ್ದವ ಎಪ್‌ಸ್ಟೀನ್. 2019ರಲ್ಲಿ ಆತ ಜೈಲಿನಲ್ಲಿ ಇದ್ದಾಗಲೇ ನಿಗೂಢವಾಗಿ ಸಾವನ್ನಪ್ಪಿದ್ದಾನೆ.

ಇದನ್ನು ಓದಿದ್ದೀರಾ? ಅಮೆರಿಕದಲ್ಲಿ ಕೋಲಾಹಲವೆಬ್ಬಿಸಿದ ಎಪ್‌ಸ್ಟೀನ್ ಫೈಲ್ಸ್, ಇಕ್ಕಟ್ಟಿನಲ್ಲಿ ಡೊನಾಲ್ಡ್ ಟ್ರಂಪ್

ಅಮೆರಿಕದ ನ್ಯಾಯಾಂಗ ಇಲಾಖೆಯು ‘ಎಪ್‌ಸ್ಟೀನ್ ಫೈಲ್ಸ್ ಪಾರದರ್ಶಕತೆ ಕಾಯಿದೆ’ ಅಡಿಯಲ್ಲಿ ಜನವರಿ 30ರಂದು 30 ಲಕ್ಷ ಪುಟಗಳ ದಾಖಲೆಗಳು, 2,000 ವೀಡಿಯೊಗಳು ಮತ್ತು 1.8 ಲಕ್ಷ ಚಿತ್ರಗಳನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಿದೆ. ಇವುಗಳಲ್ಲಿ ಎಪ್‌ಸ್ಟೀನ್‌ನ ವಿಮಾನದ ಹಾರಾಟದ ದಾಖಲೆಗಳು (Flight Logs), ಇಮೇಲ್‌ಗಳು, ಫೋಟೋಗಳು, ವೀಡಿಯೊಗಳು ಮತ್ತು ಸಾಕ್ಷಿಗಳ ಹೇಳಿಕೆಗಳು ಸೇರಿವೆ.

ಈ ದಾಖಲೆಗಳಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್, ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಉದ್ಯಮಿಗಳಾದ ಬಿಲ್ ಗೇಟ್ಸ್ ಮತ್ತು ಎಲಾನ್ ಮಸ್ಕ್, ಬ್ರಿಟನ್‌ನ ಪ್ರಿನ್ಸ್ ಆಂಡ್ರ್ಯೂ ಅವರಂತಹ ಅನೇಕ ಪ್ರಭಾವಿ ವ್ಯಕ್ತಿಗಳ ಹೆಸರುಗಳಿವೆ. ಪ್ರಧಾನಿ ನರೇಂದ್ರ ಮೋದಿ ಹೆಸರು, ಸಚಿವ ಹರ್ದೀಪ್ ಸಿಂಗ್ ಪುರಿ ಹೆಸರೂ ಕಾಣಿಸಿಕೊಂಡಿರುವುದು ಸದ್ಯ ದೇಶದಲ್ಲಿ ತೀವ್ರ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ. ಸರ್ಕಾರ ಮಾತ್ರ ಪ್ರಧಾನಿ ಮೋದಿ ಹೆಸರು ಇದೆ ಎಂಬುದು ಆಧಾರರಹಿತ ಎಂದು ಹೇಳಿಕೊಳ್ಳುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಕಪಕ್ಷೀಯ ನಿರ್ಧಾರ ವಿವಾದದ ಬೆನ್ನಲ್ಲೇ ಸಭೆ: ಸರ್ವಮತದಿಂದ ತೀಮಾರ್ನಗಳ ತಗೆದುಕೊಂಡಿದ್ದು ಎಂದ ಇಸಿಐ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಹಾಗೂ ಚುನಾವಣಾ ಆಯುಕ್ತರಾದ...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...