ಅರಸು ಅವರ ಕಾರಲ್ಲಿ ಕೂತ ಮಾತ್ರಕ್ಕೆ ನೀವು ಅರಸು ಆಗಲ್ಲ: ಸಿಎಂ ವಿರುದ್ಧ ಹರಿಪ್ರಸಾದ್ ಪರೋಕ್ಷ ವಾಗ್ದಾಳಿ

Date:

  • ನಾನು ಮಂತ್ರಿ ಆಗಿದ್ದಿದ್ದರೆ ಸಮುದಾಯದ ಜನರ ಜೊತೆಗೆ ಇರಲು ಸಾಧ್ಯವಾಗುತ್ತಿರಲಿಲ್ಲ
  • ಸಚಿವ ಸ್ಥಾನ ಸಿಗದ್ದಕ್ಕೆ ಅಸಮಾಧಾನ ಹೊರಹಾಕಿದ ಹಿರಿಯ ಕಾಂಗ್ರೆಸ್​ ಮುಖಂಡ ಬಿಕೆ ಹರಿಪ್ರಸಾದ್​

ದೇವರಾಜ ಅರಸು ಕಾರಿನಲ್ಲಿ ಕುಳಿತರೆ ದೇವರಾಜ ಅರಸು ಆಗಲ್ಲ. ದೇವರಾಜ ಅರಸು ಅವರ ಚಿಂತನೆ ಇರಬೇಕು ಎಂದು ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿ ಕೆ ಹರಿಪ್ರಸಾದ್​ ವಾಗ್ದಾಳಿ ಮಾಡಿದರು.

ಬೆಂಗಳೂರಿನಲ್ಲಿ ಶನಿವಾರ ನಡೆದ ಈಡಿಗ, ಬಿಲ್ಲವ, ನಾಮಧಾರಿ, ದೀವರು ಮತ್ತು ಅತೀ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್, ಹಿಂದಿನ ಯಾವ ಮುಖ್ಯಮಂತ್ರಿಗಳೂ ಜಾತಿ ರಾಜಕಾರಣ ಮಾಡಲಿಲ್ಲ. ಕಾಗೋಡು ತಿಮ್ಮಪ್ಪ, ಬಂಗಾರಪ್ಪ ಜಾತಿ ರಾಜಕಾರಣ ಮಾಡಲಿಲ್ಲ. ಪಂಚೆ ಹಾಕಿಕೊಂಡು ವಾಚ್ ಕಟ್ಟಿಕೊಂಡು ಒಳಗಡೆ ಖಾಕಿ ಚಡ್ಡಿ ಹಾಕಿಕೊಂಡು ಸಮಾಜವಾದಿ ಅಂತ ಹೇಳಿದರೆ ಆಗೋದಿಲ್ಲ. ನಾನು ಮೂರು ಬಾರಿ ಸೋತಿರಬಹುದು, ಆದರೆ ಇನ್ನೂ ಸತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ಹರಿಹಾಯ್ದಿದ್ದಾರೆ.

ನಾನು ಮಂತ್ರಿ ಆಗಿದ್ದಿದ್ದರೆ ಸಮುದಾಯದ ಜನರ ಜೊತೆಗೆ ಇರಲು ಸಾಧ್ಯವಾಗುತ್ತಿರಲಿಲ್ಲ. ನಾನು ಮುಖ್ಯಮಂತ್ರಿ ಅಥವಾ ಮಂತ್ರಿ ಆಗುತ್ತೇನೆ ಅಂತ ಸಮುದಾಯದ ಯಾರೂ ಭ್ರಮೆಯಲ್ಲಿ ಇರಬೇಡಿ. ಈಡಿಗ, ಬಿಲ್ಲವ, ನಾಮಧಾರಿ ಸಮುದಾಯದವರು ಕೇವಲ ರಾಜ್ಯದಲ್ಲಿ ಮಾತ್ರ ಅಲ್ಲ, ಎಲ್ಲ ರಾಜ್ಯಗಳಲ್ಲೂ ಇದ್ದಾರೆ ಎಂದು ಕಾಂಗ್ರೆಸ್​ ಮುಖಂಡ ಬಿಕೆ ಹರಿಪ್ರಸಾದ್​ ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿ-ಜೆಡಿಎಸ್‌ ಮೈತ್ರಿ: ಪಕ್ಷಗಳಿಗೆ ಅನಿವಾರ್ಯ, ರಾಜ್ಯಕ್ಕೆಷ್ಟು ಹಿತ?

ಸಚಿವ ಸ್ಥಾನ ಸಿಗದ ಕಾರಣಕ್ಕಾಗಿ ಅಸಮಾಧಾನ ಹೊಂದಿರುವ ಕಾಂಗ್ರೆಸ್​ ಹಿರಿಯ ಮುಖಂಡ ಬಿಕೆ ಹರಿಪ್ರಸಾದ್​ ವಿರುದ್ಧ ಬಹಿರಂಗವಾಗಿಯೇ ಮತ್ತೊಮ್ಮೆ ಅಸಮಾಧಾನ ಹೊರ ಹಾಕಿದ್ದಾರೆ.

ದೇವರಾಜ ಅರಸು ಅವರ ಬಗ್ಗೆ ಭಾಷಣದಲ್ಲಿ ಪುಂಖಾನುಪುಂಖವಾಗಿ ಹಾಡಿ ಹೊಗಳುವರು, ಅವರ ಮೊಮ್ಮಗನಿಗೆ ಯಾವ ಸ್ಥಾನವನ್ನೂ ಕೊಟ್ಟಿಲ್ಲ ಅಂತ ಅವಮಾನ ಆಗುತ್ತಿದೆ ಎಂದು ಹರಿಪ್ರಸಾದ್ ಬೇಸರ ವ್ಯಕ್ತಪಡಿಸಿದರು.

ನಮ್ಮ ಸಮುದಾಯ ಅತಂತ್ರವಾಗಿದೆ. ಇದು ಅತಂತ್ರ ಸಮುದಾಯದ ವೇದಿಕೆ. ಚುನಾವಣೆ ಬರುವಾಗ ಘೋಷಣೆ ಮಾಡಿದ್ದೇ ಮಾಡಿದ್ದು. ಅಧಿಕಾರಕ್ಕೆ ಬರಲು ಏನೇನೋ ಭರವಸೆ ನೀಡಿದರು. ಆದರೆ ಅಧಿಕಾರಕ್ಕೆ ಬಂದ ಮೇಲೆ ಅತೀ ಹಿಂದುಳಿದ ವರ್ಗಗಳ ನೆನಪೇ ಆಗಿಲ್ಲ. ಅಧಿಕಾರ ಸಿಕ್ಕ ತಕ್ಷಣವೇ ಸಮುದಾಯಕ್ಕೆ ಸಿಗಬೇಕಾಗಿರುವುದು ಇನ್ನೂ ಸಿಕ್ಕಿಲ್ಲ. ಸಮುದಾಯದ ಶಕ್ತಿ ಏನೂ ಎನ್ನುವುದನ್ನು ನಾವೇ ಇನ್ನೂ ತಿಳಿದುಕೊಂಡಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಹರಿಹಾಯ್ದಿದ್ದಾರೆ.

ಸಮಾವೇಶದಲ್ಲಿ ಆಮ್​ ಆದ್ಮಿ ಪಕ್ಷದ ಕರ್ನಾಟಕ ಘಟಕದ ಅಧ್ಯಕ್ಷ, ಹಿರಿಯ ನಟ ಮುಖ್ಯಮಂತ್ರಿ ಚಂದ್ರು, ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ, ವಿಧಾನಪರಿಷತ್ ಮಾಜಿ ಸದಸ್ಯ ಎಚ್.ಆರ್ ಶ್ರೀನಾಥ್, ಮಾಜಿ ಸಚಿವ ಶಿವಮೂರ್ತಿ ನಾಯಕ್, ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ದ್ವಾರಕಾನಾಥ್, ಬಿಜೆಪಿ ಮುಖಂಡ ನರೇಂದ್ರಬಾಬು ಹಲವರು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಿಂದುತ್ವ | ಭಾರತೀಯ ಸಮಾಜವನ್ನು ಒಳಗಿನಿಂದಲೇ ವಂಚಿಸುವ ‘ಗೋಮುಖ ವ್ಯಾಘ್ರ’

ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಬಿಜೆಪಿ ಭಾರತದ ಅತಿದೊಡ್ಡ ರಾಜಕೀಯ ಶಕ್ತಿಯಾಗಿದೆ. ಆದರೆ,...

ಸಂತ್ರಸ್ತೆ ಅಪಹರಣ ಪ್ರಕರಣ | ಮೇ 31ಕ್ಕೆ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ತೀರ್ಪು

ಕೆ ಆರ್‌ ನಗರ ಮಹಿಳೆ ಅಪಹರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ...

ಚಂದ್ರಶೇಖರ್‌ ಆತ್ಮಹತ್ಯೆ | ಸರ್ಕಾರದ ಖಜಾನೆಯನ್ನೇ ಲೂಟಿ ಮಾಡಿದ ಹಗರಣವಿದು: ಗೋವಿಂದ ಕಾರಜೋಳ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿ ಇಲಾಖಾ ಸಚಿವ ನಾಗೇಂದ್ರ ಅವರು...