ಎಂ.ಪಿ ಪ್ರಕಾಶ್‌ ಪುತ್ರಿ ಎಂ.ಪಿ ಲತಾ: ಹರಪನಹಳ್ಳಿ ಕ್ಷೇತ್ರದ ಪಕ್ಷೇತರ ಶಾಸಕಿ ಕಾಂಗ್ರೆಸ್‌ ಸೇರ್ಪಡೆ

Date:

ವಿಜಯನಗರ ಜಿಲ್ಲೆ ಹರಪನಹಳ್ಳಿ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿರುವ ಎಂ.ಪಿ ಲತಾ ಮಲ್ಲಿಕಾರ್ಜುನ್‌ ಅವರು ಬುಧವಾರ ಕಾಂಗ್ರೆಸ್‌ಗೆ ಸೇರ್ಪಡೆಯಾದರು.

ಮಾಜಿ ಉಪಮುಖ್ಯಮಂತ್ರಿ ದಿವಂಗತ ಎಂ.ಪಿ ಪ್ರಕಾಶ್‌ ಅವರ ಪುತ್ರಿ ಎಂ.ಪಿ ಲತಾ ಅವರಿಗೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್‌ ಕೈತಪ್ಪಿತ್ತು. ಬಳಿಕ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ 70,194 ಮತಗಳನ್ನು ಪಡೆದು ಬಿಜೆಪಿಯ ಕರುಣಾಕರ ರೆಡ್ಡಿ ವಿರುದ್ಧ 13,845 ಮತಗಳ ಅಂತರದಲ್ಲಿ ಜಯ ಗಳಿಸಿದ್ದರು. ಕಾಂಗ್ರೆಸ್‌ ಅಭ್ಯರ್ಥಿ ಎನ್ ಕೊಟ್ರೇಶ್ 44,988 ಮತಗಳನ್ನಷ್ಟೇ ಪಡೆದಿದ್ದರು.

ಇದೀಗ ಎಂ.ಪಿ ಲತಾ ಅವರು ಮರಳಿ ಕಾಂಗ್ರೆಸ್‌ಗೆ ಸೇರಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, “ಹರಪನಹಳ್ಳಿ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಫರ್ಧಿಸಿ ಜಯ ಗಳಿಸಿರುವ ಲತಾ ಮಲ್ಲಿಕಾರ್ಜುನ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಹ ಸದಸ್ಯರನ್ನಾಗಿ ಅನುಮೋದಿಸಿದೆ” ಎಂದು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ‘ದಲಿತರ ಸಂವಿಧಾನ’ ಎಂದು ವಿವಾದ ಸೃಷ್ಟಿಸಿದ ಬಿಜೆಪಿ ಶಾಸಕ ಬಿ ಸುರೇಶ್ ಗೌಡ

ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಬದಲಾವಣೆ ವಿಷಯ ಮಹತ್ವ ಪಡೆದುಕೊಂಡಿದೆ. ಸಂವಿಧಾನ ಬದಲಿಸುತ್ತೇವೆ...

ನನ್ನ ಜನರಿಗೆ ದೇವಸ್ಥಾನಗಳಲ್ಲಿ ಪ್ರವೇಶವಿಲ್ಲ; ನಾನು ಅಯೋಧ್ಯೆಗೆ ಹೋದರೆ ಸಹಿಸುವರೇ?: ಮಲ್ಲಿಕಾರ್ಜುನ ಖರ್ಗೆ

ದೇಶಾದ್ಯಂತ ಪರಿಶಿಷ್ಟ ಜಾತಿಗಳ (ಎಸ್‌ಸಿ) ಜನರು ಇನ್ನೂ ತಾರತಮ್ಯವನ್ನು ಎದುರಿಸುತ್ತಿದ್ದಾರೆ. ಪರಿಶಿಷ್ಠರಿಗೆ...

ಬೆಂಗಳೂರು | ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ; ನ್ಯಾಯಕ್ಕಾಗಿ ರಾಷ್ಟ್ರಪತಿಗೆ ಕರವೇ ಮನವಿ

ಗೋವಾ ಕನ್ನಡಿಗರ ರಕ್ಷಣೆಗೆ ರಾಷ್ಟ್ರಪತಿಯರು ಮಧ್ಯೆ ಪ್ರವೇಶಿಸಿ ನ್ಯಾಯ ನೀಡಬೇಕು ಎಂದು...

ಚಿಕ್ಕಬಳ್ಳಾಪುರ | ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯಲು ರೈತ ಸಂಘ ತೀರ್ಮಾನಿಸಿದೆ: ವೀರಸಂಗಯ್ಯ

ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯುವುದನ್ನು ತಪ್ಪಿಸುವ...