ಹರಿಯಾಣ | ಇಡಿ ದಾಳಿ; ಕಾಂಗ್ರೆಸ್ ಶಾಸಕ ಸುರೇಂದರ್ ಪನ್ವಾರ್ ಬಂಧನ

Date:

ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹರಿಯಾಣ ಕಾಂಗ್ರೆಸ್ ಶಾಸಕ ಸುರೇಂದರ್ ಪನ್ವಾರ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ ಎಂದು ವರದಿಯಾಗಿದೆ. 55 ವರ್ಷದ ಶಾಸಕ ಪನ್ವಾರ್ ಅವರನ್ನು ಗುರುಗ್ರಾಮ್‌ನಲ್ಲಿ ಶನಿವಾರ ಮುಂಜಾನೆ ಬಂಧಿಸಲಾಗಿದೆ.

- Advertisement -

ಅವರನ್ನು ಅಂಬಾಲದ ವಿಶೇಷ ಪ್ರಿವೆನ್ಷನ್ ಆಫ್ ಮನಿ ಲಾಂಡರಿಂಗ್ ಆಕ್ಟ್ (ಪಿಎಂಎಲ್‌ಎ) ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಅವರನ್ನು ತನ್ನ ಕಸ್ಟಡಿಗೆ ಪಡೆಯಲು ಇಡಿ ಮನವಿ ಮಾಡಿದೆ ಎಂದು ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಟಿಪ್ಪು ನಿಜ ಕನಸು’ಗಳಿಂದ ‘ಗಾಂಧೀ ಹತ್ಯೆಯ ಸತ್ಯ’ದವರೆಗೆ: ಇತಿಹಾಸ...

ನಾಟಕಕಾರ, ಬರಹಗಾರ ಅಡ್ಡಂಡ ಕಾರ್ಯಪ್ಪ ಹಿಂದಿನಿಂದಲೂ ಒಂದಲ್ಲೊಂದು ಕಾರಣಕ್ಕೆ ಸಾರ್ವಜನಿಕ ಚರ್ಚೆಯ ಮುನ್ನೆಲೆಗೆ ಬಂದಿರುವ ಹೆಸರು. ಇತಿಹಾಸದ ನಿರೂಪಣೆ, ರಂಗಭೂಮಿಯ ಬಳಕೆ, ಧಾರ್ಮಿಕ ಮತ್ತು ರಾಜಕೀಯ ವಿಚಾರಗಳ ಅಭಿವ್ಯಕ್ತಿ ಹಾಗೂ ಕೋಮು ಸೌಹಾರ್ದದ...

ಭಾವೈಕ್ಯತೆಯ ಹೆಜ್ಜೆನಾದ: ಕದ್ರಿ ದೇಗುಲದ ಯಕ್ಷಗಾನದಲ್ಲಿ ‘ಮಹಿಷಾಸುರ ಮರ್ದಿನಿ’ಯಾಗಿ...

ಕಲೆಗೆ ಯಾವುದೇ ಧರ್ಮ, ಜಾತಿಗಳ ಭೇದವಿಲ್ಲ ಎಂಬುದನ್ನು ಕರಾವಳಿಯ ಹೆಮ್ಮೆಯ ಸಾಂಪ್ರದಾಯಿಕ ಕಲೆ ಮತ್ತೊಮ್ಮೆ ಅತ್ಯಂತ ಸುಂದರವಾಗಿ ಸಾಬೀತುಪಡಿಸಿದೆ. ಮಂಗಳೂರಿನ ಐತಿಹಾಸಿಕ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವೇದಿಕೆಯಲ್ಲಿ ಮುಸ್ಲಿಂ ಮಹಿಳೆಯೊಬ್ಬರು 'ಮಹಿಷಾಸುರ...

ಪದವೀಧರರು, ಶಿಕ್ಷಕರೇ ಗಮನಿಸಿ.. ಅ.23ರಂದು ಪ್ರಾಶಸ್ತ್ಯ ಮತ ಚಲಾಯಿಸುವಾಗ...

ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆ-2026ರ ಮತದಾನ ಅಕ್ಟೋಬರ್ 23ರಂದು ನಡೆಯಲಿದೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯನ್ನು ಆರಿಸಲು ಪ್ರಾಶಸ್ತ್ಯ ಮತದಾನ ಪದ್ಧತಿಯನ್ನು ಅನುಸರಿಸಬೇಕು. ಈ ಸಂದರ್ಭದಲ್ಲಿ...

ಹರಿಯಾಣದ ಯಮುನಾನಗರ ಪ್ರದೇಶದಲ್ಲಿ ‘ದೊಡ್ಡ ಪ್ರಮಾಣದ ಅಕ್ರಮ ಗಣಿಗಾರಿಕೆ’ ನಡೆಯುತ್ತಿದೆ ಎಂಬ ಆರೋಪದ ಮೇಲೆ ಇದೇ ವರ್ಷದ ಜನವರಿಯಲ್ಲಿ ಶಾಸಕರ ನಿವಾಸ, ಕಚೇರಿಗಳ ಮೇಲೆ ಇಡಿ ದಾಳಿ ನಡೆಸಿತ್ತು. ಅಲ್ಲದೆ, ಇದೇ ಪ್ರಕರಣದಲ್ಲಿ ಭಾರತೀಯ ರಾಷ್ಟ್ರೀಯ ಲೋಕದಳದ (ಐಎನ್‌ಎಲ್‌ಡಿ) ಮಾಜಿ ಶಾಸಕ ದಿಲ್‌ಬಾಗ್ ಸಿಂಗ್ ಮತ್ತು ಅವರ ಸಹಚರ ಕುಲ್ವಿಂದರ್ ಸಿಂಗ್ ಅವರನ್ನು ಬಂಧಿಸಿತ್ತು.

ಯಮುನಾ ನದಿಯಲ್ಲಿ ಮರಳು ಗಣಿಗಾರಿಕೆ ನಡೆಸದಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ನಿಷೇಧ ವಿಧಿಸಿದ್ದರೂ, ನಮುನಾಗರದ ಬಳಿ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಹಾಗೂ ಜಲ್ಲಿ ಗಣಿಗಾರಿಕೆ ನಡೆಯುತ್ತಿದೆ ಎಂದು ಆರೋಪಿಸಲಾಗಿದೆ. ಆರೋಪಗಳ ಮೇಲೆ ಹಲವಾರು ಎಫ್‌ಐಆರ್‌ಗಳನ್ನು ಹರಿಯಾಣ ಪೊಲೀಸರು ದಾಖಲಿಸಿದ್ದಾರೆ. ಇದೀಗ, ಅದೇ ಪ್ರಕರಣಗಳಲ್ಲಿ ಅಕ್ರಮ ಹಣ ವರ್ಗಾವಣೆಯೂ ನಡೆದಿದೆ ಎಂದು ಆರೋಪಿಸಲಾಗಿದ್ದು, ಆ ಬಗ್ಗೆ ಇಡಿ ತನಿಖೆ ನಡೆಸುತ್ತಿದೆ.

ಆಪಾದಿತ ಅಕ್ರಮ ಗಣಿಗಾರಿಕೆಯಿಂದಾಗಿ ಕಳೆದ ಕೆಲವು ವರ್ಷಗಳಲ್ಲಿ ಸುಮಾರು 400-500 ಕೋಟಿ ರೂ.ಗಳಷ್ಟು ಅಕ್ರಮ ಹಣ ಸಂಪಾದನೆ ಮಾಡಲಾಗಿದೆ ಎಂದು ಇಡಿ ಅಂದಾಜಿಸಿದೆ.

ಅಂದಹಾಗೆ, ಇದೇ ವರ್ಷದ ಕೊನೆಯಲ್ಲಿ ಹರಿಯಾಣದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಛಾಯಾಚಿತ್ರ ಪ್ರದರ್ಶನಕ್ಕೂ ಸೆನ್ಸಾರ್: ರೇಹಾನ್ ವಾದ್ರಾರ 74 ಚಿತ್ರಗಳು ತೆರವು; ಖಾಲಿ ಫ್ರೇಮ್‌ಗಳಿಗೂ ನಿರ್ಬಂಧ!

ದೆಹಲಿಯ ಬಿಕಾನೇರ್ ಹೌಸ್‌ನಲ್ಲಿ ನಡೆಯುತ್ತಿದ್ದ ಯುವ ಛಾಯಾಗ್ರಾಹಕ ರೇಹಾನ್ ರಾಜೀವ್ ವಾದ್ರಾ...

ಭಾರತದಲ್ಲಿ ಮಹಿಳಾ ಕಾರ್ಮಿಕರ ಭಾಗವಹಿಸುವಿಕೆ ಹೆಚ್ಚಳ; ಆದರೆ, ಉದ್ಯೋಗ ಗುಣಮಟ್ಟ – ವೇತನ ಅಂತರ ಭಾರೀ ದೂರ!

ದೇಶದಲ್ಲಿ ಮಹಿಳಾ ಉದ್ಯೋಗಿ ಪಡೆ ಮತ್ತು ಕಾರ್ಮಿಕ ಕ್ಷೇತ್ರದಲ್ಲಿ ಮಹಿಳೆಯರ ಭಾಗವಹಿಸುವಿಕೆಯ...

ಮೂರು ಮೈತೇಯಿ ಯುವಕರ ಹತ್ಯೆ ಖಂಡಿಸಿ ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ: ಐದು ಜಿಲ್ಲೆಗಳಲ್ಲಿ ಜನಜೀವನ ಸ್ತಬ್ಧ

ಕಾಂಗ್‌ಪೋಕ್ಪಿ ಜಿಲ್ಲೆಯ ಸುನುರೋಕ್ ಬೆಟ್ಟದ ಪ್ರದೇಶದಲ್ಲಿ ಅಕ್ಟೋಬರ್ 19 ರಂದು ಸೌದೆ...