ಹರಿಯಾಣ ಚುನಾವಣೆ | ಕಾಂಗ್ರೆಸ್‌ನಂತೆಯೇ ಬಿಜೆಪಿಯೂ 89 ಸ್ಥಾನಗಳಲ್ಲಿ ಸ್ಪರ್ಧೆ

Date:

ಹರಿಯಾಣದಲ್ಲಿ ಅಕ್ಟೋಬರ್ 5ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 9ರಂದು ಫಲಿತಾಂಶ ಪ್ರಕಟವಾಗಲಿದೆ. ರಾಜ್ಯದ ಚುನಾವಣೆಗೆ ಎಲ್ಲ ಪಕ್ಷಗಳೂ ಭಾರೀ ತಯಾರಿ ನಡೆಸುತ್ತಿವೆ. ಆ ರಾಜ್ಯದಲ್ಲಿನ 90 ಸ್ಥಾನಗಳ ಪೈಕಿ ಕಾಂಗ್ರೆಸ್‌ನಂತೆಯೇ ಬಿಜೆಪಿ ಕೂಡ 89 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಉಳಿದ ಒಂದು ಕ್ಷೇತ್ರ ಸಿರ್ಸಾದಲ್ಲಿ ಲೋಕಿತ್ ಪಕ್ಷದ (ಎಚ್‌ಎಲ್‌ಪಿ) ಮುಖ್ಯಸ್ಥ ಗೋಪಾಲ್ ಕಾಂಡಾ ಅವರನ್ನು ಬಿಜೆಪಿ ಬೆಂಬಲಿಸಿದೆ ಎಂದು ತಳಿದುಬಂದಿದೆ. ಸಿರ್ಸಾದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ರೋಹ್ತಾಶ್ ಜಂಗ್ರಾ ಅವರು ತಮ್ಮ ಉಮೇದುವಾರಿಕೆಯನ್ನು ಸೋಮವಾರ ಹಿಂಪಡೆದುಕೊಂಡಿದ್ದಾರೆ.

- Advertisement -

ಗೋಪಾಲ್ ಕಾಂಡಾ ಅವರು ಈ ಹಿಂದೆ ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡಿದ್ದರು. ಇದೀಗ, ಅವರು ಮತ್ತೆ ಅಭ್ಯರ್ಥಿಯಾಗಿ ಕಣಕ್ಕಿಳಿದ ಬೆನ್ನಲ್ಲೇ ಸಿರ್ಸಾದಲ್ಲಿ ಬಿಜೆಪಿ ತುರ್ತು ಸಭೆ ಕರೆದಿತ್ತು. ಸಭೆಯಲ್ಲಿ ಜಾಂಗ್ರಾ ಸ್ಪರ್ಧೆಯಿಂದ ಹೊರಗುಳಿಯಬೇಕೆಂದು ನಿರ್ಧರಿಸಲಾಗಿತ್ತು. “ನಾನು ನನ್ನ ನಾಮಪತ್ರವನ್ನು ಹಿಂಪಡೆದಿದ್ದೇನೆ. ರಾಜ್ಯ ಮತ್ತು ದೇಶದ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ನಾವು ಕಾಂಗ್ರೆಸ್ ಮುಕ್ತ ಹರಿಯಾಣವನ್ನು ಖಾತ್ರಿಪಡಿಸಿಕೊಳ್ಳಬೇಕು” ಎಂದು ಜಾಂಗ್ರಾ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕಾಂಡಾ ಪರವಾಗಿ ಹಿಂದೆ ಸರಿದಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಜಾಂಗ್ರಾ, “ಗೋಪಾಲ್ ಕಾಂಡಾ ಐದು ವರ್ಷಗಳಿಂದ ನಮ್ಮನ್ನು (ಬಿಜೆಪಿ) ಬೆಂಬಲಿಸಿದ್ದಾರೆ. ಸಿರ್ಸಾದ ಅಭಿವೃದ್ಧಿಗಾಗಿ ನಾವು ಈ ನಿರ್ಧಾರ ತೆಗೆದುಕೊಂಡಿದ್ದೇವೆ” ಎಂದಿದ್ದಾರೆ.

ಇನ್ನು, ಆರ್‌ಎಸ್‌ಎಸ್‌ ಜೊತೆ ತಮ್ಮ ಕುಟುಂಬದ ದೀರ್ಘಕಾಲದ ಸಂಪರ್ಕವನ್ನು ನೆನಪಿಸಿಕೊಂಡಿರುವ ಕಾಂಡ, “ತಮ್ಮ ತಂದೆ ಮುರಳಿ ಧರ್ ಕಾಂಡ ಅವರು 1952ರಲ್ಲಿ ಜನಸಂಘದ ಅಭ್ಯರ್ಥಿಯಾಗಿ ಡಬ್ವಾಲಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ತಮ್ಮ ತಾಯಿಯೂ ಬಿಜೆಪಿ ಬೆಂಬಲಿಗರಾಗಿದ್ದರು” ಎಂದು ಹೇಳಿದ್ದಾರೆ.

ಸಿರ್ಸಾ ರಾಜಕೀಯ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ, ಮಾಜಿ ಸಂಸದ ಅಶೋಕ್ ತನ್ವಾರ್, “ನಮಗೆ ಒಂದೇ ಗುರಿಯಿದೆ. ಅದು ಮೂರನೇ ಬಾರಿಗೆ ಬಿಜೆಪಿ ಸರ್ಕಾರ ರಚಿಸುವುದು ಮತ್ತು ಕಾಂಗ್ರೆಸ್ ಮುಕ್ತ ಭಾರತ ನಿರ್ಮಿಸುವುದು” ಎಂದು ಹೇಳಿದ್ದಾರೆ.

ಈಗಾಗಲೇ, ಎಚ್‌ಎಲ್‌ಪಿಗೆ ಐಎನ್‌ಎಲ್‌ಡಿ ಮತ್ತು ಬಿಎಸ್‌ಪಿ ಬೆಂಬಲ ನೀಡಿವೆ. ಇದೀಗ, ಬಿಜೆಪಿಯೂ ಬೆಂಬಲ ನೀಡುವುದಾಗಿ ಘೋಷಿಸಿದೆ. ಹೀಗಾಗಿ, ಕಾಂಡಾ ಅವರಿಗೆ ಪ್ರಮುಖ ಪ್ರತಿಸ್ಪರ್ಧಿಯಾಗಿ ಕಾಂಗ್ರೆಸ್‌ ಅಭ್ಯರ್ಥಿ ಗೋಕುಲ್ ಸೇಟಿಯಾ ಕಣದಲ್ಲಿದ್ದಾರೆ.

ಈ ವರದಿ ಓದಿದ್ದೀರಾ?: ಸಂಘಪರಿವಾರದವರಿಂದ ‘ಗಣೇಶ ಮೂರ್ತಿ’ಯನ್ನು ರಕ್ಷಿಸಿದ ಪೊಲೀಸರು: ಸುಳ್ಳು ಸುದ್ದಿ ಹರಡಿದ ಬಿಜೆಪಿ

ಹರಿಯಾಣದಲ್ಲಿ ಬಿಜೆಪಿಯಲ್ಲಿ ಅಧಿಕಾರದಿಂದ ಹೊರಗಿಡಬೇಕೆಂದು ಪಣತೊಟ್ಟಿರುವ ಕಾಂಗ್ರೆಸ್‌, 90 ಕ್ಷೇತ್ರಗಳ ಪೈಕಿ 89 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ‘ಇಂಡಿಯಾ’ ಮೈತ್ರಿಕೂಟದ ಭಾಗವಾಗಿರುವ ಕಾಂಗ್ರೆಸ್‌ ಮತ್ತು ಎಎಪಿ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿಯೂ ಕ್ಷೇತ್ರ ಹಂಚಿಕೆಗಾಗಿ ಮಾತುಕತೆ ನಡೆಸಿದ್ದವು. ಅದರೆ, ಮಾತುಕತೆ ಮುರಿದುಬಿದ್ದಿದೆ. ಸದ್ಯ, ಸಿಪಿಐ(ಎಂ) ಜೊತೆ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್‌ 89 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಘೋಷಿಸಿದ್ದು, ಭಿವಾಸಿ ಕ್ಷೇತ್ರವನ್ನು ಸಿಪಿಐ(ಎಂ)ಗೆ ಬಿಟ್ಟುಕೊಟ್ಟಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...