ಹಾಸನ ಪೆನ್‌ಡ್ರೈವ್ ಪ್ರಕರಣ | ವಿಡಿಯೋ ಫೇಕ್ ಅಲ್ಲ, ನಾಲ್ಕೈದು ವರ್ಷ ಹಳೆಯದ್ದು: ಹೆಚ್‌.ಡಿ ರೇವಣ್ಣ

Date:

ಹಾಸನದಲ್ಲಿ ವೈರಲ್ ಆದ ಅಶ್ಲೀಲ ವಿಡಿಯೋ ಪ್ರಕರಣ ದಾಖಲಾದ ಬಳಿಕ ಇದೇ ಮೊದಲ ಬಾರಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ, ಹೊಳೆನರಸೀಪುರ ಜೆಡಿಎಸ್ ಶಾಸಕ ಹೆಚ್‌.ಡಿ ರೇವಣ್ಣ, “ಹಾಸನ ವಿಡಿಯೋ ಪ್ರಕರಣ ನಾಲ್ಕೈದು ವರ್ಷ ಹಳೆಯದ್ದು” ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

- Advertisement -

ಬೆಂಗಳೂರಿನ ಪದ್ಮನಾಭನಗರ ನಿವಾಸದಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರ ಮನೆಗೆ ದಿಢೀರ್ ಭೇಟಿ ಕೊಟ್ಟ ರೇವಣ್ಣ, ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಮೂರು ದಿನಗಳ ಹಿಂದೆ ಜೆಡಿಎಸ್ ಮುಖಂಡರು ಹಾಸನದ ಸೈಬರ್ ಪೊಲೀಸರಿಗೆ ನೀಡಿದ್ದ ದೂರಿನಲ್ಲಿ, ಪ್ರಜ್ವಲ್ ರೇವಣ್ಣ ಅವರದ್ದು ಎಂದು ಮಾರ್ಫ್ ಮಾಡಿದ ವಿಡಿಯೋ ಹರಿಯಬಿಡಲಾಗುತ್ತಿದೆ. ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದರು. ಆದರೆ, ಇಂದು ರೇವಣ್ಣ, ‘ವಿಡಿಯೋ ನಾಲ್ಕೈದು ವರ್ಷ ಹಳೆಯದ್ದು’ ಎಂದು ವ್ಯತಿರಿಕ್ತವಾದ ಹೇಳಿಕೆ ನೀಡುವ ಮೂಲಕ ‘ವಿಡಿಯೋ ಫೇಕ್ ಅಲ್ಲ’ ಎಂಬುದನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.

“ದೇವೇಗೌಡರ ಬಳಿ ಈ ವಿಷಯವನ್ನು ಮಾತನಾಡಿಲ್ಲ. ಇದೆಲ್ಲಾ ರಾಜಕೀಯ. ನಾನು ಯಾವುದರ ಬಗ್ಗೆಯೂ ಪ್ರತಿಕ್ರಿಯೆ ನೀಡುವುದಿಲ್ಲ” ಎಂದರು.

“ಇದಕ್ಕೆಲ್ಲ ಹೆದರಿ ಓಡಿ ಹೋಗುವವನಲ್ಲ ನಾನು. ಇಲ್ಲೇ ಇದ್ದೀನಲ್ಲ. ಕಾನೂನು ರೀತಿಯಲ್ಲಿ ಏನು ಎದುರಿಸಬೇಕೋ ಅದನ್ನು ಎದುರಿಸುತ್ತೇವೆ. ನಾಲ್ಕೈದು ವರ್ಷ ಹಳೆಯದ್ದನ್ನೆಲ್ಲ ತಗೊಂದು ಬಂದು ಏನೋ ಮಾಡ್ತಿದ್ದಾರೆ. ಅದರ ಬಗ್ಗೆ ನಾನೂ ಏನೂ ಪ್ರತಿಕ್ರಿಯಿಸಲ್ಲ. ಸದ್ಯ ಎಸ್‌ಐಟಿಗೆ ತನಿಖೆಗೆ ಕೊಟ್ಟಿರುವುದರಿಂದ ಅವರ ತನಿಖೆಗೆ ಮುಜುಗರವಾಗದಿರಲು ಏನೂ ಹೇಳಿಕೆ ನೀಡುವುದಿಲ್ಲ” ಎಂದು ತಿಳಿಸಿದ್ದಾರೆ.

“ನಿಮ್ಮ ವಿರುದ್ಧವೂ ಪ್ರಕರಣ ದಾಖಲಾಗಿದೆಯಲ್ಲವೇ?” ಎಂದು ಕೇಳಿದ್ದಕ್ಕೆ, “ಇದೆಲ್ಲ ರಾಜಕೀಯ. ಈಗ ಚುನಾವಣೆಯ ಸಂದರ್ಭದಲ್ಲಿ ಹೊರಗೆ ತಂದಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದ ಸರ್ಕಾರ ಅಧಿಕಾರದಲ್ಲಿದೆ. ಸರ್ಕಾರ ಇದೆಯಲ್ವಾ? ಏನು ಬೇಕಾದರೂ ಕ್ರಮ ತೆಗೆದುಕೊಳ್ಳಲಿ. ಅತಿದೊಡ್ಡ ಲೈಂಗಿಕ ಅಂತಿದ್ದರೆ ಅವರು ತನಿಖೆ ಮಾಡಲಿ. ಎಸ್ಐಟಿ ಮಾಡಿದ್ದಾರಲ್ವಾ” ಎಂದು ರೇವಣ್ಣ ತಿಳಿಸಿದ್ದಾರೆ.

ಪ್ರಜ್ವಲ್ ರೇವಣ್ಣ ನಿಮ್ಮ ಸಂಪರ್ಕದಲ್ಲಿದ್ದಾರಾ? ಎಲ್ಲಿದ್ದಾರೆ? ಎಂದು ಪತ್ರಕರ್ತರು ಪ್ರಶ್ನಿಸಿದ್ದಕ್ಕೆ, “ವಿದೇಶಕ್ಕೆ ಮಾಮೂಲಿಯಂತೆ ಹೋಗಿದ್ದಾನೆ. ಅವನಿಗೇನು ಗೊತ್ತು ಇಲ್ಲಿ ಎಫ್‌ಐಆರ್ ಆಗುತ್ತೆ, ಎಸ್‌ಐಟಿ ಆಗುತ್ತದೆ ಅನ್ನುವುದು. ತನಿಖೆಗೆ ಕರೆದಾಗ ಪ್ರಜ್ವಲ್ ರೇವಣ್ಣ ಬರ್ತಾನೆ. ” ಎಂದು ಹೆಚ್ ಡಿ ರೇವಣ್ಣ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಹಾಸನ ಪೆನ್‌ಡ್ರೈವ್ ಪ್ರಕರಣ | ‘ಸ್ವಂತ’ ಮೊಬೈಲ್‌ನಲ್ಲಿದ್ದ ಅಶ್ಲೀಲ ವಿಡಿಯೋ ಹೊರಗೆ ಬಂದಿದ್ದು ಹೇಗೆ?

“ದೇವೇಗೌಡರ ಬಳಿ ನಾನು ಈ ವಿಷಯ ಮಾತನಾಡಿಲ್ಲ. ಕಾನೂನು ರೀತಿ ಏನಿದೆ ಅದು ನಡೆಯಲಿ. ದೇವೇಗೌಡರ ಕುಟುಂಬದ ವಿರುದ್ಧ ಷಡ್ಯಂತ್ರ ಹೊಸದಲ್ಲ. ಇಂತಹ ಹಲವು ತನಿಖೆ ನಾವು ಎದುರಿಸಿದ್ದೇವೆ. ದೇವೇಗೌಡರ ಮೇಲೆ ಸಿಒಡಿ ತನಿಖೆ ನಡೆಸಿದ್ದರು. ದೇವೇಗೌಡರ ಕುಟುಂಬ ಲೋಕಾಯುಕ್ತ, ಸಿಐಡಿ ಎಲ್ಲ ತನಿಖೆ ಎದುರಿಸಿದ್ದೇವೆ” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಸಿಜೆಪಿ ಪಟ್ಟು: ಹೋರಾಟಕ್ಕೆ ಸೋನಮ್ ವಾಂಗ್‌ಚುಕ್ ಬೆಂಬಲ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಹೊಣೆಗಾರಿಕೆ ಮತ್ತು...

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...

ವಿಜಯನ್ ವಿರುದ್ಧ ಸಿಎಂಆರ್‌ಎಲ್ ಪ್ರಕರಣ: ಇಡಿ ಹೇಳಿದ ತಕ್ಷಣ ಎಫ್‌ಐಆರ್ ದಾಖಲಿಸಲಾಗದು ಎಂದು ಕೇರಳ ಗೃಹ ಸಚಿವ

ಜಾರಿ ನಿರ್ದೇಶನಾಲಯ (ಇಡಿ) ಕೋರಿದೆ ಎಂದಮಾತ್ರಕ್ಕೆ ತಕ್ಷಣವೇ ಎಫ್‌ಐಆರ್ ನೋಂದಾಯಿಸಲು ಸಾಧ್ಯವಿಲ್ಲ....