ಹಾಸನ ದುರಂತ | ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

Date:

ಗಣೇಶ ವಿಸರ್ಜನೆ ಸಂದರ್ಭದಲ್ಲಿ ಹಾಸನದ ಮೊಸಳೆ ಹೊಸಹಳ್ಳಿಯಲ್ಲಿ ಸಂಭವಿಸಿದ ಭೀಕರ ಅಪಘಾತದ ಹಿನ್ನೆಲೆಯಲ್ಲಿ ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸಿದ್ದರಾಮಯ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡರು ನೀಡಿದ ಸೂಚನೆಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ರಾತ್ರಿಯಿಡೀ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ.

- Advertisement -

ಘಟನೆ ನಡೆದ ಕ್ಷಣದಿಂದ ರಾತ್ರಿಯಿಡೀ ಅಧಿಕಾರಿಗಳ ತಂಡ-ವೈದ್ಯರ ತಂಡಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದು ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡರು ತೀವ್ರ ನಿಗಾ ವಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಮೃತರ ಕುಟುಂಬಗಳ ಜೊತೆ ಸತತ ಸಂಪರ್ಕದಲ್ಲಿದ್ದ ಅಧಿಕಾರಿಗಳು ಮೃತರ ಮರಣೋತ್ತರ ಪರೀಕ್ಷೆ ರಾತ್ರಿಯೇ ನಡೆಯಲು ಬೇಕಾದ ಅಗತ್ಯ ಕ್ರಮ ಕೈಗೊಂಡರು. ವೈದ್ಯರ ತಂಡ ಬೆಳಗಾಗುವವರೆಗೂ ಕಾಯದೇ ರಾತ್ರಿಯೇ ಮರಣೋತ್ತರ ಪರೀಕ್ಷೆ ಮತ್ತು ಕಾನೂನು ಪ್ರಕ್ರಿಯೆ ಮುಗಿಸಿ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದೆ.

ಗಾಯಾಳುಗಳ ಚಿಕಿತ್ಸೆಗೆ ಖುದ್ದಾಗಿ ಜಿಲ್ಲಾ ವೈದ್ಯಾಧಿಕಾರಿಗಳೇ ಉಸ್ತುವಾರಿ ವಹಿಸಿದ್ದು, ಅಗತ್ಯ ವೈದ್ಯರ ತಂಡವನ್ನು ರಚಿಸಿದ್ದಾರೆ. ಅಗತ್ಯವಾದ ಎಲ್ಲಾ ಆಧುನಿಕ ಚಿಕಿತ್ಸಾ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ.

ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ವೈದ್ಯಾಧಿಕಾರಿಯವರ ಜೊತೆ ನಿರಂತರ ಸಂಪರ್ಕದಲ್ಲಿರುವ ಉಸ್ತುವಾರಿ ಸಚಿವರು, ಆಸ್ಪತ್ರೆಗಳಿಗೆ ಭೇಟಿ ನೀಡುತ್ತಿದ್ದು, ಮೃತರ ಕುಟುಂಬದವರ ಜೊತೆಗೂ ಮಾತನಾಡುತ್ತಿದ್ದಾರೆ.

ಈಗಾಗಲೇ ಹಾಸನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಪ್ರಯಾಣ ಬೆಳೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಸೆ.17ರಂದು ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದಿಂದ ದತ್ತಿ ಪ್ರಶಸ್ತಿ ಪ್ರದಾನ

ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದ ವತಿಯಿಂದ ವಾರ್ಷಿಕ ದತ್ತಿ...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...