ನಗರದ ಪತ್ರಿಕಾಗೋಷ್ಠಿಯಲ್ಲಿ ದಲಿತ ವಿಮೋಚನೆ ಮಾನವ ಹಕ್ಕುಗಳ ವೇದಿಕೆಯ ರಾಜ್ಯ ಸಂಚಾಲಕ ಆರ್. ಮರೀಜೋಸೆಫ್ ಮಾತನಾಡಿ, ‘ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಮುಖ ಮುಚ್ಚಿಕೊಂಡು ಭೇಟಿಯಾಗಲು ಬಂದ ಅಪರಿಚಿತ ವ್ಯಕ್ತಿಯನ್ನು ತಕ್ಷಣ ಬಂಧಿಸಿ ವಿಚಾರಣೆ ನಡೆಸಬೇಕು’ ಎಂದು ಆಗ್ರಹಿಸಿದ್ದಾರೆ.
ಘಟನೆಯ ಭದ್ರತಾ ಲೋಪದ ಬಗ್ಗೆ ತನಿಖೆ ನಡೆಸಬೇಕು. ಜಿಲ್ಲಾಧಿಕಾರಿ ಕಚೇರಿಗೆ ಸಂಬಂಧಿಸಿದಂತೆ ಹರಿದಾಡುತ್ತಿರುವ ಸಂದೇಶಗಳ ಮೂಲವನ್ನೂ ಪತ್ತೆಹಚ್ಚಿ, ಆರೋಪಗಳ ಸತ್ಯಾಸತ್ಯತೆ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.
ಇದನ್ನೂ ಓದಿದ್ದೀರಾ?ಹಾಸನ | ಅರಣ್ಯಾಧಿಕಾರಿ ಮನೇಲಿ 500 ನೋಟಿನ ಕಂತೆ ಪತ್ತೆ
ಜತೆಗೆ, ಭ್ರಷ್ಟಾಚಾರ ಮತ್ತು ಬೇನಾಮಿ ಆಸ್ತಿ ನಿಯಂತ್ರಣಕ್ಕೆ ಕಠಿಣ ಕಾನೂನು ಜಾರಿಗೆ ತರಬೇಕೆಂದು ದಲಿತ ವಿಮೋಚನೆ ಮಾನವ ಹಕ್ಕುಗಳ ವೇದಿಕೆಯ ಒತ್ತಾಯಿಸಿದೆ.




