ಹಾಸನ | ಮತ್ತೆ ನಾಲಿಗೆ ಹರಿಬಿಟ್ಟ ಸೂರಜ್ ರೇವಣ್ಣ; ಪಕ್ಷದ ಮುಖಂಡರಿಗೆ ಅಶ್ಲೀಲವಾಗಿ ನಿಂದನೆ

Date:

ಜೆಡಿಎಸ್‌ ಕಾರ್ಯಕರ್ತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಜೈಲು ಸೇರಿದ್ದ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ, ಎಂಎಲ್‌ಸಿ ಸೂರಜ್ ರೇವಣ್ಣ ಜಾಮೀನು ಪಡೆದು ಹೊರಬಂದಿದ್ದಾರೆ. ತಮ್ಮ ಪಕ್ಷದ ಮುಖಂಡರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದು, ಅಶ್ಲೀಲವಾಗಿ ನಿಂದಿಸಿದ್ದಾರೆ.

- Advertisement -

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಅಗ್ರಹಾರ ಗ್ರಾಮದಲ್ಲಿ ನಡೆದ ತಮ್ಮ ಹುಟ್ಟುಹಬ್ಬ ಸಂಭ್ರಮಾಚರಣೆಯಲ್ಲಿ ಮಾತನಾಡಿದ ಸೂರಜ್ ರೇವಣ್ಣ, “ಪಕ್ಷದೊಳಗಿದ್ದು ಮೋಸ ಮಾಡುವವರು, ಪಕ್ಷ ವಿರೋಧಿ ಕೆಲಸ ಮಾಡುವುವವರು ಸೂ**ಗಳು” ಎಂದು ಅಶ್ಲೀಲ ಮತ್ತು ಅವಾಚ್ಯವಾಗಿ ನಿಂದಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ನನಗೆ ನಾಯಿ ಕಣ್ಣು, ನರಿ ಕಣ್ಣು ಅಂತ ನನ್ನ ದೃಷ್ಟಿ ತೆಗೆದಿದ್ದಾರೆ. ಆದರೆ, ಕೆಟ್ಟ ಸೂ** ಕಣ್ಣು ಅಂತ ಯಾಕೆ ಹೇಳಲಿಲ್ಲ. ಮಹಿಳೆಯರ ಬಗ್ಗೆ ತಪ್ಪಾಗಿ ಮಾತನಾಡುತ್ತಿಲ್ಲ. ಪಕ್ಷದೊಳಗಿದ್ದು ಮೋಸ ಮಾಡುವವರಿಗೆ ಈ ಮಾತು ಹೇಳುತ್ತಿದ್ದೇನೆ” ಎಂದು ಹೇಳಿದ್ದಾರೆ.

“ನಮ್ಮ ತಾತ ದೇವೇಗೌಡರು ಯಾವುದೇ ಜಾತಿ ನೋಡದೆ ಕೆಲಸ ಮಾಡು ಎಂದಿದ್ದಾರೆ. ಪಕ್ಷದ ಕಾರ್ಯಕರ್ತರಿಗೆ ಯಾವುದೇ ಇಲಾಖೆಯಲ್ಲಿ ತೊಂದರೆಯದರೂ ನನ್ನ ಗಮನಕ್ಕೆ ತನ್ನಿ, ನಾನು ನಿಮಗಾಗಿ ಕೆಲಸ ಮಾಡುತ್ತೇನೆ” ಎಂದಿದ್ದಾರೆ.

ಈ ವರದಿ ಓದಿದ್ದೀರಾ?: ಲಾಸ್‌ ಏಂಜಲೀಸ್‌ ಕಾಡ್ಗಿಚ್ಚು: ಜಗತ್ತು ಕಲಿಯಬೇಕಾದ ಪಾಠವೇನು?

ಕಳೆದ ಲೋಕಸಭಾ ಚುನಾವಣೆಯ ಸಮಯದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ಪೆನ್‌ಡ್ರೈವ್‌ಗಳು ಪತ್ತೆಯಾಗಿದ್ದವು. ತನ್ನ ಕಾಮತೃಷೆ ತೀರಿಸಿಕೊಳ್ಳಲು ಹೆದರಿಸಿ, ಬೆದರಿಸಿ, ಆಮಿಷವೊಡ್ಡಿ ಜೆಡಿಎಸ್‌ ಕಾರ್ಯಕರ್ತೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು. ಪ್ರಕರಣ ಬೆಳಕಿಗೆ ಬಂದ ಬಳಿಕ ಪ್ರಜ್ವಲ್‌ ರೇವಣ್ಣನನ್ನು ಬಂಧಿಸಲಾಗಿದೆ. ಆತ ಜೈಲಿನಲ್ಲಿದ್ದಾನೆ. ಆ ಪ್ರಕರಣದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನೂ ಬಂಧಿಸಲಾಗಿತ್ತು. ಅವರಿಗೆ ಜಾಮೀನು ನೀಡಲಾಗಿದೆ. ಇನ್ನು, ಜೆಡಿಎಸ್‌ ಕಾರ್ಯಕರ್ತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸೂರಜ್ ರೇವಣ್ಣನನ್ನು ಬಂಧಿಸಲಾಗಿತ್ತು. ಆತನಿಗೂ ಜಾಮೀನು ನೀಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....