ಹಾಸನ ದುರಂತ | ಟ್ರಕ್‌ ಚಾಲಕ ಮುಸ್ಲಿಂ ಎಂಬ ರೀತಿಯಲ್ಲಿ ಬಿಂಬಿಸುವ ಯತ್ನ ಮಾಡಲಾಗಿತ್ತು: ಸಚಿವ ಕೃಷ್ಣ ಬೈರೇಗೌಡ

Date:

Advertisements

ಹಾಸನದ ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದಿರುವ ದುರಂತ ನಿಜಕ್ಕೂ ದುರದೃಷ್ಟಕರ. ಟ್ರಕ್‌ ಚಾಲಕ ಭುವನೇಶ್ ಎಂಬಾತನ ನಿರ್ಲಕ್ಷ್ಯವೇ ಈ ದುರಂತಕ್ಕೆ ಮುಖ್ಯ ಕಾರಣ. ಇದೇ ಸಮಯದಲ್ಲಿ ಟ್ರಕ್‌ ಚಾಲಕ ಓರ್ವ ಮುಸ್ಲಿಂ ಎಂಬ ರೀತಿಯಲ್ಲಿ ಬಿಂಬಿಸುತ್ತಾ ಕೆಲವು ವಿಪಕ್ಷದವರು ಈ ಘಟನೆಗೆ ಕೋಮು ಬಣ್ಣ ನೀಡುತ್ತಿರುವುದೂ ಸಹ ಕಂಡುಬಂದಿದೆ. ಇದು ವಿಷಾದನೀಯ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಹಾಸನ ಗಣಪತಿ ಮೆರವಣಿಗೆಯಲ್ಲಿ ಟ್ರಕ್ ಹರಿದು ಮೃತಪಟ್ಟವರ ಮನೆಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬೆನ್ನಿಗೆ ಮುಂದಿನ ಕ್ರಮಗಳ ಬಗ್ಗೆ ಪತ್ರಕರ್ತರೊಂದಿಗೆ ಮಾಹಿತಿ ನೀಡುತ್ತಾ ಅವರು ಮಾತನಾಡಿದರು.

“ಘಟನೆಯಲ್ಲಿ ಈವರೆಗೆ ಒಂಬತ್ತು ಜನ ಮೃತಪಟ್ಟಿದ್ದಾರೆ. ಸುಮಾರು 20 ಜನ ಇನ್ನೂ ಕೂಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಒಬ್ಬರ ಸ್ಥಿತಿ ಗಂಭೀರವಾಗಿದೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಸಾವುನೋವು ಆಗಿರುವುದು ತುಂಬಾ ನೋವಾಗಿದೆ. ಅವರ ದುಃಖದಲ್ಲಿ ಸರ್ಕಾರವೂ ಭಾಗಿಯಾಗುತ್ತದೆ. ತಡರಾತ್ರಿಯೇ ಎಲ್ಲ ವ್ಯವಸ್ಥೆಗಳನ್ನು ಮಾಡಿ, ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು ಎಂದು ತಿಳಿಸಿದರು.

krishna byregowda 1

ಟ್ರಕ್‌ ಚಾಲಕ ಭುವನೇಶ್ ಎಂಬಾತನ ನಿರ್ಲಕ್ಷ್ಯವೇ ಈ ದುರಂತಕ್ಕೆ ಮುಖ್ಯ ಕಾರಣ. ಈಗಾಗಲೇ ಆತನ ವಿರುದ್ಧ ಗೊರೂರು ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಜನರಿಂದ ತೀವ್ರ ಥಳಿತಕ್ಕೊಳಪಟ್ಟವನಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆತನ ವಿರುದ್ಧ ಎಲ್ಲ ರೀತಿಯ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಹಾಸನ ದುರಂತ | ಮೃತಪಟ್ಟವರ ಸಂಖ್ಯೆ 9ಕ್ಕೇರಿಕೆ: ಆರೋಪಿ ಚಾಲಕ ಸೇರಿ 20 ಮಂದಿ ಗಾಯಾಳು

ಇದೇ ಸಮಯದಲ್ಲಿ ಟ್ರಕ್‌ ಚಾಲಕ ಓರ್ವ ಮುಸ್ಲಿಂ ಎಂಬ ರೀತಿಯಲ್ಲಿ ಬಿಂಬಿಸುತ್ತಾ ಕೆಲವು ವಿಪಕ್ಷದವರು ಈ ಘಟನೆಗೆ ಕೋಮು ಬಣ್ಣ ನೀಡುತ್ತಿರುವುದೂ ಸಹ ಕಂಡುಬಂದಿದೆ. ಸಮಾಜದಲ್ಲಿ ಅಶಾಂತಿಗೆ ಕಾರಣವಾಗುವ ಇಂತಹ ದುರ್ವರ್ತನೆಯೂ ಸಹ ಕಾನೂನು ರೀತಿಯ ಅಪರಾಧವಾಗಿದ್ದು, ಅಂತಹವರ ವಿರುದ್ಧವೂ ಸಹ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಈ ಬಗ್ಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಟ್ರಕ್‌ ಚಾಲಕ ಭುವನೇಶ್ ಮದ್ಯಪಾನ ಮಾಡಿದ್ದ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈಗಾಗಲೇ ಆತನ ರಕ್ತದ ಮಾದರಿಯನ್ನು ಸಂಗ್ರಹಿಸಲಾಗಿದೆ. ಬೈಕ್‌ಗೆ ಗುದ್ದಿದ ರಭಸದಲ್ಲಿ ಬ್ರೇಕ್‌ ಬದಲು ಎಕ್ಸಲೇಟರ್ ಒತ್ತಿರುವ ಗುರುತುಗಳು ರಸ್ತೆಯಲ್ಲಿವೆ. ಎಲ್ಲ ಮಾಹಿತಿಯನ್ನು ಪೊಲೀಸರು ಸಂಗ್ರಹಿಸುತ್ತಿದ್ದಾರೆ. ಘಟನೆಯಲ್ಲಿ ಮೃತಪಟ್ಟವರಿಗೆ ಈಗಾಗಲೇ ಸರ್ಕಾರದಿಂದ 5 ಲಕ್ಷ ಪರಿಹಾರ ಘೋಷಿಸಲಾಗಿದೆ. ಗಾಯಾಳುಗಳಿಗೆ ತಲಾ 50,000 ಪರಿಹಾರ ಘೋಷಿಸಲಾಗಿದೆ. ಹೆಚ್ಚಿನ ಪರಿಹಾರಕ್ಕೆ ಸ್ಥಳೀಯರಿಂದ ಒತ್ತಾಯ ಕೇಳಿಬಂದಿದೆ. ಈ ಬಗ್ಗೆ ಸಿಎಂ ಜೊತೆಗೆ ಮಾತುಕತೆ ನಡೆಸಲಾಗುವುದು ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಪುಷ್ಪಾರ್ಚನೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವಿರೋಧಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ....

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ...

Download Eedina App Android / iOS

X