ಹಾಸನ | ರಸ್ತೆ, ಮೂಲ ಸೌಕರ್ಯಕ್ಕೆ ಆಗ್ರಹಿಸಿ ಚುನಾವಣಾ ಬಹಿಷ್ಕಾರಕ್ಕೆ ನಿರ್ಧಾರ

Date:

  • ಗ್ರಾಮದ ಪ್ರವೇಶ ದ್ವಾರದಲ್ಲಿ ಬ್ಯಾನರ್ ಕಟ್ಟಿದ ಗ್ರಾಮಸ್ಥರು
  • ಶಾಸಕ ಎಚ್.ಕೆ ಕುಮಾರಸ್ವಾಮಿ ವಿರುದ್ಧ ಗ್ರಾಮಸ್ಥರ ಅಸಮಧಾನ

ಗ್ರಾಮದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ರಸ್ತೆ, ಚರಂಡಿ ಸೇರಿದಂತೆ ಮೂಲ ಸೌಕರ್ಯಗಳಿಲ್ಲದೆ ಗ್ರಾಮದ ಜನರು ಸಂಕಷ್ಟ ಎದುರಿಸುತ್ತಿದ್ದಾರೆ. ಆದರೂ, ಜನಪ್ರತಿನಿಧಿಗಳು ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ತಡಕಲು ಗ್ರಾಮಸ್ಥರು ಚುನಾವಣಾ ಬಹಿಷ್ಕಾರಕ್ಕೆ ನಿರ್ಧಿರಿಸಿದ್ದಾರೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಹೋಬಳಿಯ ವ್ಯಾಪ್ತಿಯಲ್ಲಿ ತಡಕಲು ಗ್ರಾಮವಿದೆ. “ಗ್ರಾಮದ ರಸ್ತೆಗೆ ಡಾಂಬರು ಹಾಕುವಂತೆ ಕಳೆದ ಒಂಬತ್ತು ವರ್ಷಗಳಿಂದ ಒತ್ತಾಯಿಸುತ್ತಿದ್ದೇವೆ. ಆದರೆ, ಕುಂಟು ನೆಪ ಹೇಳುತ್ತಿರುವ ಜನಪ್ರತಿನಿಧಿಗಳು ಇದೂವರೆಗೂ ಡಾಂಬರು ಹಾಕಿಲ್ಲ. ಚುನಾವಣೆ ಸಂದರ್ಭದಲ್ಲಿ ಮಾತ್ರ ಗ್ರಾಮಕ್ಕೆ ಬರುತ್ತಾರೆ. ಹಾಗಾಗಿ, ಈ ಬಾರಿಯ ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿದ್ದೇವೆ” ಎಂದು ಗ್ರಾಮಸ್ಥರು ಹೇಳಿದ್ದಾರೆ.

“ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ಮಳೆಗಾಲದಲ್ಲಿ ಆ ರಸ್ತೆಯಲ್ಲಿ ಸಂಚರಿಸಲು ಗ್ರಾಮಸ್ಥರು ಹರ ಸಾಹಸ ಪಡಬೇಕಿದೆ. ರಸ್ತೆ ಜೊತೆಗೆ ಇನ್ನಿತರ ಮೂಲ ಸೌಕರ್ಯ ಇಲ್ಲದೆ ಪರಿತಪಿಸುವಂತಾಗಿದೆ” ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಶಾಸಕ ಎಚ್.ಕೆ ಕುಮಾರಸ್ವಾಮಿ ಅವರಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದೇವೆ. ಆದರೂ, ಅವರು ರಸ್ತೆ ನಿರ್ಮಾಣದ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿಲ್ಲ. ತಾಲೂಕು ಪಂಚಾಯಿತಿ ಅನುದಾನದಲ್ಲಿ ರಸ್ತೆ ನಿರ್ಮಾಣಕ್ಕಾಗಿ ₹2 ಲಕ್ಷ ಬಿಡುಗಡೆಯಾಗಿದ್ದರೂ ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯ ಕಳಲೆ ಗುರುರಾಜ್ ಎಂಬುವರು ಶಾಸಕರ ಮೇಲೆ ಒತ್ತಡ ತಂದು ಇಲ್ಲಿನ ಅನುದಾನವನ್ನು ಬೇರೆಡೆಗೆ ವರ್ಗಾವಣೆ ಮಾಡಿದ್ದಾರೆ” ಎಂದು ಗ್ರಾಮಸ್ಥರು ಆರೋಪಿಸಿದರು.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ಏಪ್ರಿಲ್‌ 20ರಂದು ಪ್ರಧಾನಿ ಮೋದಿ ಆಗಮನ

ಏಪ್ರಿಲ್‌ 20ರ ಶನಿವಾರ 3 ಗಂಟೆಗೆ ಚಿಕ್ಕಬಳ್ಳಾಪುರ ತಾಲೂಕಿನ ಚೊಕ್ಕಹಳ್ಳಿ ಬಳಿ...

ಹಾಸನ | ರೈತ ವಿರೊಧಿ ಮೋದಿ, ಬಿಜೆಪಿ, ಜೆಡಿಎಸ್ ಸೋಲಿಸಿ; ರೈತ ಸಂಘ ಕರೆ

ಕೃಷಿ ಬಿಕ್ಕಟ್ಟಿಗೆ ಕಾರಣವಾದ ರೈತ ವಿರೊಧಿ ಮೋದಿ, ಬಿಜೆಪಿ ಮತ್ತು ಮಿತ್ರ...

ದಾವಣಗೆರೆ | ವಿಪರೀತ ಸುಡುವ ಬಿಸಿಲು; ಸಾಂಕ್ರಾಮಿಕ ರೋಗಗಳ ಬಗ್ಗೆ ವೈದ್ಯರ ಎಚ್ಚರಿಕೆ

ವಿಪರೀತ ಸುಡುವ ಬಿಸಿಲಿನ ಹಿನ್ನಲೆಯಲ್ಲಿ ಸುಮಾರು 13 ಮಂದಿಗೆ ವಾಂತಿ ಬೇಧಿ...