‘ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ ವಿಧಾನಸಭೆ ಚುನಾವಣೆಯ ಹ್ಯಾಟ್ರಿಕ್ ಗೆಲುವು 2024ರ ಲೋಕಸಭೆ ಚುನಾವಣೆಯ ಹ್ಯಾಟ್ರಿಕ್ ಗೆಲುವಿನ ಮುನ್ಸೂಚನೆ’ ಎಂದು ಧಾನಿ ನರೇಂದ್ರ ಮೋದಿ ತಿಳಿಸಿದರು.
ನಾಲ್ಕು ರಾಜ್ಯಗಳ ಚುನಾವಣೆಯ ಫಲಿತಾಂಶಗಳಲ್ಲಿ ಮೂರರಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಜಯೋತ್ಸವ ಸಮಾರಂಭದಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಅವರು ಮಾತನಾಡಿದರು.
ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟವನ್ನು ಅಹಂಕಾರಿಗಳ ಕೂಟ ಎಂದು ಗೇಲಿ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಜಾಗೃತ ಮಹಿಳಾ ಶಕ್ತಿಯ ಬಲದಿಂದಾಗಿ ಬಿಜೆಪಿಗೆ ಭರ್ಜರಿ ಜಯ ಸಿಕ್ಕಿದೆ. ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಘಢ ರಾಜ್ಯಗಳ ಮತದಾರರು ಬಿಜೆಪಿಗೆ ಅಭೂತಪೂರ್ವ ಜಯ ತಂದುಕೊಟ್ಟಿದ್ದಾರೆ. ಈ ಹ್ಯಾಟ್ರಿಕ್ ಗೆಲುವು 2024ರ ಲೋಕಸಭೆ ಚುನಾವಣೆಯ ಹ್ಯಾಟ್ರಿಕ್ ಗೆಲುವಿನ ಮುನ್ಸೂಚನೆ’ ಎಂದು ತಿಳಿಸಿದರು.
ये चुनाव नतीजे, कांग्रेस और उसके घमंडिया गठबंधन के लिए भी बहुत बड़ा सबक हैं।
सबक ये है कि सिर्फ कुछ परिवारवादियों के मंच पर एक साथ आ जाने से देश का भरोसा नहीं जीता जा सकता।
देश की जनता का दिल जीतने के लिए राष्ट्रसेवा का जो जज्बा होना चाहिए, वो घमंडिया गठबंधन में नहीं है।
— BJP (@BJP4India) December 3, 2023
‘ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಈ ಗೆಲುವು ಸ್ವಾವಲಂಬಿ ಕೇಂದ್ರ ಸರ್ಕಾರದ ಅಜೆಂಡಾಕ್ಕೆ ಸಂದ ಜಯ ಎಂದ ಪ್ರಧಾನಿ ಮೋದಿ, ‘ಈ ಫಲಿತಾಂಶಗಳು ಭ್ರಷ್ಟಾಚಾರದ ವಿರುದ್ಧದ ನಮ್ಮ ಹೋರಾಟಕ್ಕೆ ಜನಬೆಂಬಲವನ್ನು ತೋರಿಸುತ್ತವೆ” ಎಂದು ತಿಳಿಸಿದರು.
ಇದನ್ನು ಓದಿದ್ದೀರಾ? ಮಧ್ಯಪ್ರದೇಶ | ಆಡಳಿತ ವಿರೋಧಿ ಅಲೆ ನಡುವೆ ಬಿಜೆಪಿ ಜಯಭೇರಿ
‘ಭ್ರಷ್ಟಾಚಾರದಲ್ಲಿ ತೊಡಗಿರುವ ವಿಪಕ್ಷಗಳಿಗೆ ಮತದಾರರು ತಮ್ಮ ಮಾರ್ಗವನ್ನು ಸರಿಪಡಿಸಿಕೊಳ್ಳುವಂತೆ ಎಚ್ಚರಿಕೆ ನೀಡಿದ್ದಾರೆ. ಇನ್ನೂ ಕೂಡ ಅವರು ಸರಿ ಮಾಡದಿದಿದ್ದರೆ ಜನರೇ ಅವರನ್ನು ಮುಗಿಸುತ್ತಾರೆ’ ಎಂದು ಹೇಳಿದರು.
#WATCH | Delhi: Prime Minister Narendra Modi says, “…I request all the BJP workers to move ahead of Modi’s guarantees from today…Jahan dusron se umeed khatam hoti hai wahan se Modi ki guarantee shuru hoti hai.” pic.twitter.com/fT34q2wpuK
— ANI (@ANI) December 3, 2023
‘ದೇಶವು ಅಭಿವೃದ್ಧಿಯಲ್ಲಿ ಸಾಗುತ್ತಿರುವ ಸಂದರ್ಭದಲ್ಲಿ ದೇಶದ ಹಿತಾಸಕ್ತಿಗೆ ವಿರುದ್ಧವಾಗಿ ಕೆಲಸ ಮಾಡುವವರನ್ನು ಜನರು ಬೆಂಬಲಿಸಿಲ್ಲ. ಈ ಫಲಿತಾಂಶಗಳು ಭಾರತದ ಮೇಲಿನ ವಿಶ್ವದ ನಂಬಿಕೆಯನ್ನು ಖಚಿತಪಡಿಸುತ್ತದೆ ಮತ್ತು ದೇಶಕ್ಕಾಗಿ ಜಾಗತಿಕ ಹೂಡಿಕೆದಾರರಲ್ಲಿ ಹೆಚ್ಚಿನ ವಿಶ್ವಾಸ ತುಂಬಲಿದೆ ಎಂದು ಹೇಳಿದರು.
ತೆಲಂಗಾಣದಲ್ಲಿ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರದಿದ್ದರೂ ಉತ್ತಮ ಗೆಲುವು ಸಾಧಿಸಿದೆ. ಅಲ್ಲಿನ ತಾಯಂದಿರು, ಯುವಕರು, ಬಡವರು ಒಳ್ಳೆಯ ನಿರ್ಣಯ ತೆಗೆದುಕೊಂಡಿದ್ದಾರೆ. ಅವರಿಗೆ ನನ್ನ ಮನಪೂರ್ವಕ ನಮಸ್ಕಾರಗಳು. ದೇಶದಲ್ಲಿ ನನ್ನ ಪ್ರಕಾರ ನಾಲ್ಕು ಜಾತಿಗಳು ಮಾತ್ರ ದೊಡ್ಡದಾಗಿವೆ. ಮಹಿಳಾ ಶಕ್ತಿ, ಯುವಶಕ್ತಿ, ರೈತರು, ಹಾಗೂ ಬಡವರ್ಗ. ಈ ನಾಲ್ಕು ಜಾತಿಗಳ ಸಶಕ್ತೀಕರಣದಿಂದ ದೇಶ ಅಭಿವೃದ್ಧಿ ಹೊಂದಲಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.