ಜಾತಿ-ಧರ್ಮದ ಹೆಸರಲ್ಲಿ ದ್ವೇಷಿಸುವುದು ಅತ್ಯಂತ ಕೆಟ್ಟ ನಡವಳಿಕೆ: ಸಿಎಂ ಸಿದ್ದರಾಮಯ್ಯ

Date:

ಯಾವ ಕಾಯಕವೂ ಮೇಲು ಅಲ್ಲ, ಕೀಳು ಅಲ್ಲ. ಎಲ್ಲ ಕಾಯಕವೂ ಸಮಾನ ಮತ್ತು ಸಮಾನ ಘನತೆ ಹೊಂದಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

- Advertisement -

ಗಾಂಧಿ ಭವನದಲ್ಲಿ ಮಂಗಳವಾರ ಸವಿತಾ ಸಮಾಜ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಲೇಖಕ ಡಾ.ಎಂ ಎಸ್ ಮುತ್ತುರಾಜ್ ಅವರ ‘ಮಂಗಳವಾದ್ಯ’ ಕಾದಂಬರಿ ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ನಟರಾಗಿ ಜನಪ್ರಿಯತೆ ಗಳಿಸಿರುವ ಎಂ.ಆರ್.ಮುತ್ತುರಾಜ್ ಅವರು ಬಹುಮುಖ ಪ್ರತಿಭೆ. ವೃತ್ತಿ ಘನತೆಯನ್ನು ಕಾಪಾಡುವ ವ್ಯಕ್ತಿತ್ವ. ಇವರು ಕಾಯಕ ಜೀವಿ. ಪ್ರತಿಯೊಬ್ಬರೂ ಘನತೆಯಿಂದ ಕಾಯಕ ಮಾಡಬೇಕು. ಇದನ್ನೇ ಬಸವಣ್ಣನವರು ಕಾಯಕವೇ ಕೈಲಾಸ ಎಂದು ಹೇಳಿದ್ದಾರೆ. ಕೈಲಾಸ, ಸ್ವರ್ಗ, ನರಕ ಎನ್ನುವುದು ಬೇರೆಲ್ಲೂ ಇಲ್ಲ. ಎಲ್ಲವೂ ಇಲ್ಲೇ ಇದೆ” ಎಂದರು.

“ಅಯ್ಯಾ ಎಂದರೆ ಸ್ವರ್ಗ, ಎಲವೋ ಎಂದರೆ ನರಕ ಎಂದು ಬಸವಣ್ಣನವರು ಹೇಳಿದ್ದು ಈ ಕಾರಣಕ್ಕೇ. ಪರಸ್ಪರ ಮನುಷ್ಯರನ್ನು ಮನುಷ್ಯರು ಗೌರವಿಸುವುದೇ ದೊಡ್ಡ ಮೌಲ್ಯ. ಮನುಷ್ಯ ದ್ವೇಷಕ್ಕಿಂತ ಕೆಟ್ಟ ಮೌಲ್ಯ ಬೇರೆ ಇಲ್ಲ. ಅದಕ್ಕೇ ರಾಷ್ಟ್ರಕವಿ ಕುವೆಂಪು ಅವರು ‘ಸರ್ವ ಜನಾಂಗದ ಶಾಂತಿಯ ತೋಟ’ ಎಂದು ಕರೆದಿದ್ದಾರೆ” ಎಂದು ವಿವರಿಸಿದರು.

“ಧರ್ಮದ ಹೆಸರಲ್ಲಿ, ಜಾತಿಯ ಹೆಸರಲ್ಲಿ ಮುಸ್ಲಿಮರನ್ನು, ದಲಿತರನ್ನು, ಶೂದ್ರರನ್ನು, ಶ್ರಮಿಕ‌ ವರ್ಗದವರನ್ನು ದ್ವೇಷಿಸುವುದು ಅತ್ಯಂತ ಅಮಾನವೀಯವಾದ, ಕೆಟ್ಟ ನಡವಳಿಕೆ” ಎಂದರು.

ಸಿದ್ದರಾಮಯ್ಯ (2)

“ಜನರಿಗೆ ಅರ್ಥ ಆಗುವ ರೀತಿಯಲ್ಲಿ ಸರಳವಾದ ಜನರ ಭಾಷೆಯಲ್ಲಿ ಮನುಷ್ಯನ ಮೌಲ್ಯಗಳನ್ನು ಬಸವಾದಿ ಶರಣರು ಹೇಳಿದ್ದಾರೆ. ನಾರಾಯಣ ಗುರುಗಳು, ಒಂದೇ ಜಾತಿ-ಒಂದೇ ಮತ-ಒಂದೇ ದೇವರು ಎಂದರು. ಕನಕದಾಸರು ಮತ್ತು ಬಸವಾದಿ ಶರಣರು ಹೇಳಿದ್ದೂ ಇದೇ ಮೌಲ್ಯ” ಎಂದು ಹೇಳಿದರು.

“ನಿಮ್ಮನ್ನು ಯಾವ ದೇವಸ್ಥಾನಕ್ಕೆ ಒಳಗೆ ಬಿಡುವುದಿಲ್ಲವೋ ಆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಿ, ನೀವೇ ದೇವಸ್ಥಾನ ಕಟ್ಟಿ ನೀವೇ ಪೂಜೆ ಮಾಡಿ ಎಂದು ನಾರಾಯಣಗುರುಗಳು ಹೇಳಿದ್ದಾರೆ. ಇದನ್ನು ಪಾಲಿಸಿ” ಎಂದರು.

“ದೇವರಿದ್ದಾನೆ. ಆದರೆ ದೇವರು ದೇವಸ್ಥಾನದಲ್ಲಿ ಮಾತ್ರ ಇದ್ದಾನೆ ಎನ್ನುವುದು ಸರಿಯಲ್ಲ. ಎಲ್ಲಾ ಕಡೆಯೂ ದೇವರಿದ್ದಾನೆ. ಅದಕ್ಕೇ ಶರಣರು, ‘ಉಳ್ಳವರು ಶಿವಾಲಯವ ಮಾಡುವರು, ನಾನೇನು ಮಾಡಲಯ್ಯ ಬಡವ’ ಎಂದಿದ್ದಾರೆ” ಎಂದು ವಚನಗಳನ್ನು ಉದಾಹರಿಸಿದರು.

ಸಾಮಾಜಿಕ ನ್ಯಾಯ ಮತ್ತು ಸ್ವಾಭಿಮಾನದ ರಾಜಕಾರಣ ಮಾಡ್ತೀನಿ

“ನಾನು ಕೊನೆಯವರೆಗೂ ಸಾಮಾಜಿಕ ನ್ಯಾಯ ಮತ್ತು ಸ್ವಾಭಿಮಾನದ ರಾಜಕಾರಣ ಮಾಡ್ತೀನಿ. ನಾವು ರೂಪಿಸುವ ಕಾರ್ಯಕ್ರಮಗಳೂ ಬಡವರ ಪರವಾಗಿ ಇರುತ್ತವೆ. ನಮ್ಮ‌ ಕಾರ್ಯಕ್ರಮಗಳು ಮನೆ ಮನೆ ತಲುಪಿವೆ. ಬಿಜೆಪಿಯವರ ಟೀಕೆಗೆ ಜನ ಬೆಲೆ ಕೊಡಲ್ಲ. ನಾನೂ ಕೊಡಲ್ಲ. ನಾಡಿನ ಜನ ನಮ್ಮ ಜತೆಗಿದ್ದಾರೆ” ಎಂದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಸಚಿವ ಎಚ್.ಎಂ.ರೇವಣ್ಣ, ಹಿರಿಯ ಸಾಹಿತಿ ಎಲ್.ಎನ್ ಮುಕುಂದರಾಜ್ ಮತ್ತು ಸವಿತ ಸಮಾಜದ ಅಧ್ಯಕ್ಷ ಕಿರಣ್ ಕುಮಾರ್ ಅವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSSಗೆ ಅಪಾರ್ಟ್‌ಮೆಂಟ್ ಬಾಗಿಲು ತೆರೆದಿದ್ದಕ್ಕೆ ಪ್ರಿಯಾಂಕ್ ಖರ್ಗೆ ಆಕ್ಷೇಪ: ಪಾರದರ್ಶಕತೆ ಪ್ರಶ್ನಿಸುವಂತೆ ಸಂಘಗಳಿಗೆ ಸಲಹೆ

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆರ್‌ಎಸ್‌ಎಸ್‌ ಆಯೋಜಿಸಿದ್ದ ಸಭೆಗೆ ಗೃಹ ಸಚಿವ ಪ್ರಿಯಾಂಕ್...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...