ದ್ವೇಷ ಭಾಷಣ ಪ್ರಕರಣದಲ್ಲಿ ಕೇರಳ ನ್ಯಾಯಾಲಯದ ಮುಂದೆ ಬಿಜೆಪಿ ನಾಯಕ ಪಿ ಸಿ ಜಾರ್ಜ್ ಶರಣಾಗಿದ್ದಾರೆ. ಎರಟ್ಟುಪೆಟ್ಟಾ ಜಿಲ್ಲೆಯ ಕೋರ್ಟ್‌ನಲ್ಲಿ ಬಿಜೆಪಿ ನಾಯಕಿ ಶರಣಾಗಿದ್ದಾರೆ ಎಂದು ವರದಿಯಾಗಿದೆ.
“ಪಿ ಸಿ ಜಾರ್ಜ್ ಕೋರ್ಟ್ ಮುಂದೆ ಹಾಜರಾಗಿದ್ದಾರೆ ಎಂದು ನಮಗೆ ಮಾಹಿತಿ ಲಭಿಸಿದೆ” ಎಂದು ಪೊಲೀಸ್ ಅಧಿಕಾರಿಗಳು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಕೋಮು ದ್ವೇಷ ಭಾಷಣ; ಕೇರಳ ಬಿಜೆಪಿ ನಾಯಕ ಪಿಸಿ ಜಾರ್ಜ್ ವಿರುದ್ಧ ಪ್ರಕರಣ ದಾಖಲು
ಕೇರಳ ಹೈಕೋರ್ಟ್ ಪಿ ಸಿ ಜಾರ್ಜ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಇದಾದ ನಂತರ ಪೊಲೀಸರು ಜಾರ್ಜ್ ಅವರನ್ನು ವಶಕ್ಕೆ ಪಡೆಯಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಜಾರ್ಜ್ ಕೋರ್ಟ್ ಮುಂದೆ ಹಾಜರಾಗಿದ್ದಾರೆ ಎಂದು ಹೇಳಿದ್ದಾರೆ.
ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗಾಗಿ ತಮ್ಮ ಮುಂದೆ ಹಾಜರಾಗಲು ಫೆಬ್ರವರಿ 24ರವರೆಗೆ ಸಮಯ ವಿಸ್ತರಿಸುವಂತೆ ಶನಿವಾರ ಜಾರ್ಜ್ ಪೊಲೀಸರನ್ನು ಕೋರಿದ್ದರು. ಅವರ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್, “ಅಂತಹ ಪ್ರಕರಣದಲ್ಲಿ ಜಾಮೀನು ನೀಡುವುದು ಸಮಾಜಕ್ಕೆ ತಪ್ಪು ಸಂದೇಶವನ್ನು ರವಾನಿಸುತ್ತದೆ” ಎಂದು ಹೇಳಿದೆ.
ಇದನ್ನು ಓದಿದ್ದೀರಾ? 2024ರಲ್ಲಿ ದ್ವೇಷ ಭಾಷಣಗಳ ಸಂಖ್ಯೆ 74.4% ಹೆಚ್ಚಳ; ಬಿಜೆಪಿಗರೇ ಪ್ರಮುಖ ಆರೋಪಿಗಳು!
ಮಾಜಿ ಶಾಸಕ ಜಾರ್ಜ್ ಅವರ ಮೇಲೆ ಟಿವಿ ಚಾನೆಲ್ ಚರ್ಚೆಯ ಸಂದರ್ಭದಲ್ಲಿ ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ದ್ವೇಷ ಭಾಷಣ ಮಾಡಿದ್ದರು. “ಎಲ್ಲಾ ಮುಸ್ಲಿಮರು ಭಯೋತ್ಪಾದಕರು” ಎಂದು ಹೇಳಿದ್ದರು. ಈ ನಿಟ್ಟಿನಲ್ಲಿ ಎರಟ್ಟುಪೆಟ್ಟಾ ಪೊಲೀಸರು ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದಲ್ಲಿ ಕೊಟ್ಟಾಯಂ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಇದಾದ ಬಳಿಕ ಹೈಕೋರ್ಟ್ ಮೆಟ್ಟಿಲೇರಿದ್ದು ಹೈಕೋರ್ಟ್ ಕೂಡಾ ಅರ್ಜಿ ತಿರಸ್ಕರಿಸಿದೆ.
ಮುಸ್ಲಿಂ ಯೂತ್ ಲೀಗ್ ನಾಯಕ ಮುಹಮ್ಮದ್ ಶಿಹಾಬ್ ಅವರು ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಾಗಿದ್ದು, ಜಾರ್ಜ್ ಅವರು ಧಾರ್ಮಿಕ ದ್ವೇಷವನ್ನು ಪ್ರಚೋದಿಸುವ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಜಾರ್ಜ್ ಅವರ ವಿರುದ್ಧ ಬಿಎನ್‌ಎಸ್‌ನ ಸೆಕ್ಷನ್ 196(1)(ಎ) ಮತ್ತು 299 ಹಾಗೂ ಕೇರಳ ಪೊಲೀಸ್ ಕಾಯ್ದೆಯ ಸೆಕ್ಷನ್ 120(ಒ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಭಾರತದಲ್ಲಿ 2023ಕ್ಕೆ ಹೋಲಿಸಿದರೆ 2024ರಲ್ಲಿ ದ್ವೇಷ ಭಾಷಣಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. 2024ರಲ್ಲಿ ಭಾರತದಾದ್ಯಂತ ದ್ವೇಷ ಭಾಷಣಗಳ ಘಟನೆಗಳ ಪ್ರಮಾಣ 74.4% ಹೆಚ್ಚಾಗಿದೆ. ಈ ಪ್ರಕರಣಗಳಲ್ಲಿ ರಾಜಕೀಯ ನಾಯಕರು, ವಿಶೇಷವಾಗಿ ಬಿಜೆಪಿ ನಾಯಕರೇ ಹೆಚ್ಚು ಆರೋಪಿಗಳು. ಬಿಜೆಪಿ-ಸಂಘಪರಿವಾರದ ನಾಯಕರು ಅಲ್ಪಸಂಖ್ಯಾತರ ವಿರುದ್ಧ ಮಾಡಿರುವ ಪ್ರಚೋದನಾಕಾರಿ ದ್ವೇಷ ಭಾಷಣಗಳೇ ಹೆಚ್ಚಿವೆ ಎಂದು ಐಎಚ್‌ಎಲ್ ಗಮನಿಸಿದೆ.
