ದ್ವೇಷ ಭಾಷಣ ಪ್ರಕರಣ | ಕೇರಳ ಕೋರ್ಟ್ ಮುಂದೆ ಶರಣಾದ ಬಿಜೆಪಿ ನಾಯಕ ಪಿ ಸಿ ಜಾರ್ಜ್

Date:

ದ್ವೇಷ ಭಾಷಣ ಪ್ರಕರಣದಲ್ಲಿ ಕೇರಳ ನ್ಯಾಯಾಲಯದ ಮುಂದೆ ಬಿಜೆಪಿ ನಾಯಕ ಪಿ ಸಿ ಜಾರ್ಜ್ ಶರಣಾಗಿದ್ದಾರೆ. ಎರಟ್ಟುಪೆಟ್ಟಾ ಜಿಲ್ಲೆಯ ಕೋರ್ಟ್‌ನಲ್ಲಿ ಬಿಜೆಪಿ ನಾಯಕಿ ಶರಣಾಗಿದ್ದಾರೆ ಎಂದು ವರದಿಯಾಗಿದೆ.

- Advertisement -

“ಪಿ ಸಿ ಜಾರ್ಜ್ ಕೋರ್ಟ್ ಮುಂದೆ ಹಾಜರಾಗಿದ್ದಾರೆ ಎಂದು ನಮಗೆ ಮಾಹಿತಿ ಲಭಿಸಿದೆ” ಎಂದು ಪೊಲೀಸ್ ಅಧಿಕಾರಿಗಳು ಮಾಧ್ಯಮಕ್ಕೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಇದನ್ನು ಓದಿದ್ದೀರಾ? ಕೋಮು ದ್ವೇಷ ಭಾಷಣ; ಕೇರಳ ಬಿಜೆಪಿ ನಾಯಕ ಪಿಸಿ ಜಾರ್ಜ್ ವಿರುದ್ಧ ಪ್ರಕರಣ ದಾಖಲು

ಕೇರಳ ಹೈಕೋರ್ಟ್ ಪಿ ಸಿ ಜಾರ್ಜ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಇದಾದ ನಂತರ ಪೊಲೀಸರು ಜಾರ್ಜ್ ಅವರನ್ನು ವಶಕ್ಕೆ ಪಡೆಯಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಜಾರ್ಜ್ ಕೋರ್ಟ್ ಮುಂದೆ ಹಾಜರಾಗಿದ್ದಾರೆ ಎಂದು ಹೇಳಿದ್ದಾರೆ.

ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗಾಗಿ ತಮ್ಮ ಮುಂದೆ ಹಾಜರಾಗಲು ಫೆಬ್ರವರಿ 24ರವರೆಗೆ ಸಮಯ ವಿಸ್ತರಿಸುವಂತೆ ಶನಿವಾರ ಜಾರ್ಜ್ ಪೊಲೀಸರನ್ನು ಕೋರಿದ್ದರು. ಅವರ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್, “ಅಂತಹ ಪ್ರಕರಣದಲ್ಲಿ ಜಾಮೀನು ನೀಡುವುದು ಸಮಾಜಕ್ಕೆ ತಪ್ಪು ಸಂದೇಶವನ್ನು ರವಾನಿಸುತ್ತದೆ” ಎಂದು ಹೇಳಿದೆ.

ಇದನ್ನು ಓದಿದ್ದೀರಾ? 2024ರಲ್ಲಿ ದ್ವೇಷ ಭಾಷಣಗಳ ಸಂಖ್ಯೆ 74.4% ಹೆಚ್ಚಳ; ಬಿಜೆಪಿಗರೇ ಪ್ರಮುಖ ಆರೋಪಿಗಳು!

ಮಾಜಿ ಶಾಸಕ ಜಾರ್ಜ್ ಅವರ ಮೇಲೆ ಟಿವಿ ಚಾನೆಲ್ ಚರ್ಚೆಯ ಸಂದರ್ಭದಲ್ಲಿ ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ದ್ವೇಷ ಭಾಷಣ ಮಾಡಿದ್ದರು. “ಎಲ್ಲಾ ಮುಸ್ಲಿಮರು ಭಯೋತ್ಪಾದಕರು” ಎಂದು ಹೇಳಿದ್ದರು. ಈ ನಿಟ್ಟಿನಲ್ಲಿ ಎರಟ್ಟುಪೆಟ್ಟಾ ಪೊಲೀಸರು ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದಲ್ಲಿ ಕೊಟ್ಟಾಯಂ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಇದಾದ ಬಳಿಕ ಹೈಕೋರ್ಟ್ ಮೆಟ್ಟಿಲೇರಿದ್ದು ಹೈಕೋರ್ಟ್ ಕೂಡಾ ಅರ್ಜಿ ತಿರಸ್ಕರಿಸಿದೆ.

ಮುಸ್ಲಿಂ ಯೂತ್ ಲೀಗ್ ನಾಯಕ ಮುಹಮ್ಮದ್ ಶಿಹಾಬ್ ಅವರು ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಾಗಿದ್ದು, ಜಾರ್ಜ್ ಅವರು ಧಾರ್ಮಿಕ ದ್ವೇಷವನ್ನು ಪ್ರಚೋದಿಸುವ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಜಾರ್ಜ್ ಅವರ ವಿರುದ್ಧ ಬಿಎನ್‌ಎಸ್‌ನ ಸೆಕ್ಷನ್ 196(1)(ಎ) ಮತ್ತು 299 ಹಾಗೂ ಕೇರಳ ಪೊಲೀಸ್ ಕಾಯ್ದೆಯ ಸೆಕ್ಷನ್ 120(ಒ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಭಾರತದಲ್ಲಿ 2023ಕ್ಕೆ ಹೋಲಿಸಿದರೆ 2024ರಲ್ಲಿ ದ್ವೇಷ ಭಾಷಣಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. 2024ರಲ್ಲಿ ಭಾರತದಾದ್ಯಂತ ದ್ವೇಷ ಭಾಷಣಗಳ ಘಟನೆಗಳ ಪ್ರಮಾಣ 74.4% ಹೆಚ್ಚಾಗಿದೆ. ಈ ಪ್ರಕರಣಗಳಲ್ಲಿ ರಾಜಕೀಯ ನಾಯಕರು, ವಿಶೇಷವಾಗಿ ಬಿಜೆಪಿ ನಾಯಕರೇ ಹೆಚ್ಚು ಆರೋಪಿಗಳು. ಬಿಜೆಪಿ-ಸಂಘಪರಿವಾರದ ನಾಯಕರು ಅಲ್ಪಸಂಖ್ಯಾತರ ವಿರುದ್ಧ ಮಾಡಿರುವ ಪ್ರಚೋದನಾಕಾರಿ ದ್ವೇಷ ಭಾಷಣಗಳೇ ಹೆಚ್ಚಿವೆ ಎಂದು ಐಎಚ್‌ಎಲ್‌ ಗಮನಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸರ್ಕಾರದ UPI ವಿನಾಯಿತಿ ಮೋಸ; ₹2,000 ಮೇಲ್ಪಟ್ಟ ಪಾವತಿಗಳಿಗೆ MDR ವಿಧಿಸಲು ಅನುಮತಿ

₹2,000 ಮೇಲ್ಪಟ್ಟ UPI ಪಾವತಿಗಳಿಗೆ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌ (MDR) ವಿಧಿಸಲು...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್...

ಸರ್ಕಾರ ಆಧಾರ್‌ನ್ನು ನಂಬುವುದಾದರೆ, ಮತದಾರರ ಪಟ್ಟಿ ಪರಿಷ್ಕರಣೆಗೂ ಬಳಸಲಿ: ಆರ್‌ ಎಸ್‌ ಶರ್ಮಾ

ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಗುರುತು ದೃಢೀಕರಣಕ್ಕೂ, ಪಿಂಚಣಿದಾರರ ಜೀವಂತಿಕೆ ಪರಿಶೀಲನೆಗೂ ಆಧಾರ್‌...

ಹೌತಿಗಳ ವಿರುದ್ಧ ಮಿಲಿಟರಿ ದಾಳಿಗೆ ಸೌದಿ ಅರೇಬಿಯಾ ಮನವಿ: ಬೆಂಬಲಿಸಿಲ್ಲ ಎಂದ ಟ್ರಂಪ್

ಕೆಂಪು ಸಮುದ್ರದ ಆಯಕಟ್ಟಿನ ಪ್ರದೇಶಗಳಲ್ಲಿ ಇರಾನ್ ಬೆಂಬಲಿತ ಹೌತಿ ಬಂಡುಕೋರರ ದಾಳಿ...