ದ್ವೇಷ ಭಾಷಣ | ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆ: ಜ.10ಕ್ಕೆ ವಿಚಾರಣೆ ಮುಂದೂಡಿಕೆ

Date:

Advertisements

ಮುಸ್ಲಿಮ್‌ ಮಹಿಳೆಯರ ಅವಹೇಳನ ಮತ್ತು ಧಾರ್ಮಿಕ ದ್ವೇಷ ಬಿತ್ತುವ ಭಾಷಣಗೈದ ಆರೋಪ ಎದುರಿಸುತ್ತಿರುವ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ ಜಾಮೀನು ಅರ್ಜಿಯ ವಿಚಾರಣೆಯು ಇಂದು ಶ್ರೀರಂಗಪಟ್ಟಣದ 3ನೇ ಅಪರ ಜಿಲ್ಲಾ ಸೆಶನ್ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆಯಿತು.

ಪ್ರಕರಣದ ದೂರುದಾರೆ, ಸಾಮಾಜಿಕ ಹೋರಾಟಗಾರ್ತಿ ನಜ್ಮಾ ನಝೀರ್‌ ಅವರ ಪರವಾಗಿ ವಕೀಲ ಎಸ್‌ ಬಾಲನ್‌ ಅವರು ಸಿಆರ್‌ಪಿಸಿ ಸೆಕ್ಷನ್‌ 301 ಮತ್ತು 302 ಅಡಿ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯ ಆರೋಪಿ ಕಲ್ಲಡ್ಕ ಪ್ರಭಾಕರ ಭಟ್‌ಗೆ ನೀಡಿರುವ ಮಧ್ಯಂತರ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಬೇಕು ಎಂದು ಹಿರಿಯ ವಕೀಲ ಎಸ್ ಬಾಲನ್ ವಾದ ಮಂಡಿಸಿದರು‌.

ತನ್ನ ವಾದದ ವೇಳೆ, “ಪ್ರಭಾಕರ ಭಟ್ ಈ ರೀತಿ ಕೃತ್ಯಗಳ ಚಾಳಿ ಹೊಂದಿರುವ ವ್ಯಕ್ತಿ. ದ್ವೇಷ ಭಾಷಣ ಎನ್ನುವುದು ದೇಶ ಒಡೆಯುವ ಕೃತ್ಯ ಎಂದು ಸುಪ್ರಿಂ ಕೋರ್ಟ್ 2021 ಅಕ್ಟೋಬರ್ 21ರ ಆದೇಶದಲ್ಲಿ ಹೇಳಿದೆ. ಹಾಗಾಗಿ ಇದು ದೇಶದ್ರೋಹದ ಕೃತ್ಯ” ಎಂದು ಪ್ರಾಥಮಿಕ ವಾದ ಮಂಡಿಸಿದರು.

Advertisements

“ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದರೆ ಕಲ್ಲಡ್ಕ ಪ್ರಭಾಕರ್ ಭಟ್ ಮಧ್ಯಂತರ ಜಾಮೀನು ತಕ್ಷಣ ರದ್ದು ಮಾಡಬೇಕು. ದೇಶಕ್ಕಿಂತ ಮಿಗಿಲು ಯಾರೂ ಇಲ್ಲ. ಸುಪ್ರಿಂ ಕೋರ್ಟ್ ದ್ವೇಷ ಭಾಷಣದ ಬಗ್ಗೆ ಆದೇಶ ನೀಡಿದ್ದು ಮಾತ್ರವಲ್ಲ, ತೀಕ್ಷ್ಣವಾದ ಸೂಚನೆಗಳನ್ನು ಎಲ್ಲ ರಾಜ್ಯಗಳಿಗೆ ನೀಡಿದೆ” ಎಂದು ಬಾಲನ್ ವಾದ ಮಂಡಿಸಿದರು. ವಾದವನ್ನು ಆಲಿಸಿದ ನ್ಯಾಯಾಲಯವು, ಅರ್ಜಿಯ ವಿಚಾರಣೆಯನ್ನು ಜನವರಿ 10ಕ್ಕೆ ಮುಂದೂಡಿದೆ.

ಕಲ್ಲಡ್ಕ ಪ್ರಭಾಕರ್ ಭಟ್ ಪರವಾಗಿ ಹಿರಿಯ ವಕೀಲರು ಹಾಜರಾಗದೇ ಇದ್ದುದ್ದರಿಂದ ಅವರ ಕಿರಿಯ ವಕೀಲರು ಸಮಯ ಕೇಳಿದರು. “ಆರೋಪಿ ವಿರುದ್ದ ಚಾರ್ಜ್ ಶೀಟ್ ಸಿದ್ಧವಾಗಿದೆ” ಎಂದು ನ್ಯಾಯಾಧೀಶರು ಎಸ್ ಬಾಲನ್ ಅವರಿಗೆ ತಿಳಿಸಿದರು ಎಂದು ಗೊತ್ತಾಗಿದೆ.

ಪ್ರಕರಣದ ಹಿನ್ನೆಲೆ:

ಹನುಮ ಜಯಂತ್ಯುತ್ಸವದ ಅಂಗವಾಗಿ ಡಿಸೆಂಬರ್‌ 24ರಂದು ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆಯು ಆಯೋಜಿಸಿದ್ದ ಸಂಕೀರ್ತನಾ ಯಾತ್ರೆಯಲ್ಲಿ ಪ್ರಭಾಕರ್‌ ಭಟ್‌ ಮುಸ್ಲಿಮರ ವಿರುದ್ಧ ಧಾರ್ಮಿಕ ದ್ವೇಷಕಾರಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಝೀರ್‌ ನೀಡಿದ್ದರು.

ಈ ದೂರಿನ ಅನ್ವಯ ಶ್ರೀರಂಗಪಟ್ಟಣ ಟೌನ್‌ ಠಾಣೆಯ ಪೊಲೀಸರು ಪ್ರಭಾಕರ್‌ ಭಟ್‌ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 294 (ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲ ಮಾತುಗಳನ್ನು ಆಡುವುದು), 509 (ಮಹಿಳೆಯ ಖಾಸಗಿತನಕ್ಕೆ ಸಂಬಂಧಿಸಿದ ಮಾತುಗಳನ್ನಾಡುವುದು), 153ಎ (ಧರ್ಮದ ಆಧಾರದಲ್ಲಿ ಸಮುದಾಯಗಳ ನಡುವೆ ದ್ವೇಷ ಹರಡುವುದು) ಮತ್ತು 298 (ಉದ್ದೇಶಪೂರ್ವಕವಾಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡುವುದು) ಅಡಿ ಪ್ರಕರಣ ದಾಖಲಿಸಿಕೊಂಡಿದ್ದರು.

ಆರೋಪಿಯನ್ನು ಬಂಧಿಸಲ್ಲ ಎಂದಿದ್ದ ಸರ್ಕಾರಿ ವಕೀಲರು!

ತನ್ನ ವಿರುದ್ಧದ ಎಫ್‌ಐಆರ್ ಅನ್ನು ವಜಾಗೊಳಿಸುವಂತೆ ಆರೋಪಿ ಕಲ್ಲಡ್ಕ ಪ್ರಭಾಕರ್ ಭಟ್ ಹೈಕೋರ್ಟಿನ ಮೊರೆ ಹೋಗಿದ್ದರು. ಈ ನಡುವೆ ಆರೋಪಿಯನ್ನು ನಾವು ಬಂಧಿಸಲ್ಲ ಎಂದು ಸರ್ಕಾರದ ಪರ ವಕೀಲರು ನ್ಯಾಯಾಲಯಕ್ಕೆ ಭರವಸೆ ನೀಡಿದ್ದರಿಂದ ಹೈಕೋರ್ಟ್‌ ತಾತ್ಕಾಲಿಕ ರಿಲೀಫ್ ನೀಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X