ದ್ವೇಷ ಭಾಷಣ: ಸಚಿವ ಮುನಿರತ್ನ ವಿರುದ್ಧ ಎಫ್‌ಐಆರ್‌ ದಾಖಲು

Date:

  • ಚುನಾವಣಾಧಿಕಾರಿ ದೂರಿನ ಅನ್ವಯ ಮುನಿರತ್ನ ವಿರುದ್ಧ ಎಫ್‌ಐಆರ್‌
  • ಆರ್‌ ಆರ್‌ ನಗರ ಕ್ಷೇತ್ರದ ಖಾತಾ ನಗರದಲ್ಲಿ ಭಾಷಣ ಮಾಡಿದ್ದ ಸಚಿವ

ಅಲ್ಪಸಂಖ್ಯಾತ ಕ್ರೈಸ್ತ ಸಮುದಾಯವನ್ನು ಹೊಡೆದು ಓಡಿಸಿ ಎಂದು ಹೇಳಿಕೆ ನೀಡಿದ್ದ ತೋಟಗಾರಿಕೆ ಸಚಿವ ಮುನಿರತ್ನ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಕೋಮು ದ್ವೇಷ ಭಾಷಣ ಹಾಗೂ ಕೋಮು ಗಲಭೆಗೆ ಪ್ರಚೋದನೆ ಆರೋಪದ ಮೇರೆಗೆ ಚುನಾವಣಾಧಿಕಾರಿ ಮನೋಜ್ ಕುಮಾರ್ ದೂರು ನೀಡಿರುವ ಹಿನ್ನೆಲೆ ಆರ್ ಆರ್ ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಆರ್‌ ಆರ್‌ ನಗರ ಕ್ಷೇತ್ರದ ಖಾತಾ ನಗರದಲ್ಲಿ ಈ ಹಿಂದೆ ಭಾಷಣ ಮಾಡಿದ್ದ ಮುನಿರತ್ನ ಹೊಡಿಬಡಿಯ ಮಾತನಾಡಿದ್ದರು. ಸಚಿವರ ಭಾಷಣದ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು. ಇದೀಗ ಮುನಿರತ್ನ ಅವರಿಗೆ ಸಂಕಷ್ಟ ಎದುರಾಗಿದೆ.

“ಇಲ್ಲಿಗೆ ಯಾರೇ ಬಂದರೂ ಹೊಡೆದು ಕಳುಹಿಸಿ, ಹೆಂಗೆ ಹೊಡಿಬೇಕು ಅಂದರೆ ಅವರು ತಿರುಗಿ ನೋಡಬಾರದು ಹಂಗೆ ಹೊಡೆದು ಕಳುಹಿಸಿ. ಬಂದಿದ್ದೆಲ್ಲಾ ನಾನು ನೋಡಿಕೊಳ್ಳುತ್ತೇನೆ” ಎಂದು ಮುನಿರತ್ನ ಭಾಷಣ ಮಾಡಿದ್ದರು.

ಈ ಸುದ್ದಿ ಓದಿದ್ದೀರಾ? ಈಗ ಮುಸ್ಲಿಮರ ಮೀಸಲಾತಿ ರದ್ದು… ಮುಂದಿನ ಸರದಿ ದಲಿತರದ್ದು!

ಪೊಲೀಸರ ಮುಂದೆಯೇ ಭಾಷಣ ಮಾಡಿರುವ ವಿಡಿಯೋ ತುಣುಕನ್ನು ಕಾಂಗ್ರೆಸ್ ಬಿಡುಗಡೆ ಮಾಡಿತ್ತು. ಅಲ್ಲದೇ, ಆರ್​.ಆರ್​ ನಗರ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಕುಸುಮಾ ಅವರು ಕೂಡ ಪೊಲೀಸರಿಗೆ ದೂರು ನೀಡಿದ್ದರು.

ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಸಚಿವ ಮುನಿರತ್ನ ತಮಿಳಿಗರನ್ನ, ಕನ್ನಡಿಗರ ಮೇಲೆ ಎತ್ತಿಕಟ್ಟುತ್ತಿದ್ದಾರೆ ಅಂತ ಕಾಂಗ್ರೆಸ್​ ಆರೋಪ ಮಾಡಿತ್ತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಸ್ಟ್ರೇಲಿಯನ್ ಹೂಡಿಕೆದಾರರಿಗೆ ಸಿಎಂ ಸಿದ್ದರಾಮಯ್ಯ ಆಹ್ವಾನ

ರಾಜ್ಯದ ಮೂಲಸೌಕರ್ಯ ಅಭಿವೃದ್ಧಿ ವಲಯದಲ್ಲಿ ಹೂಡಿಕೆ ಗ್ರೀನ್ ಫೀಲ್ಡ್...

ಸರ್ಕಾರದ ಉಚಿತ ಕೊಡುಗೆಗಳು ಜನರಲ್ಲಿ ಖರೀದಿಸುವ ಶಕ್ತಿ ಹೆಚ್ಚಿಸುತ್ತವೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರಿನಲ್ಲಿ ನಡೆಯುತ್ತಿರುವ ಬೆಂಗಳೂರು ಟೆಕ್‌ ಸಮ್ಮಿಟ್‌ನಲ್ಲಿ ಇನ್ಫೋಸಿಸ್‌ ಸ್ಥಾಪಕಾಧ್ಯಕ್ಷ ನಾರಾಯಣ ಮೂರ್ತಿ...

ಅನ್ ಬಾಕ್ಸಿಂಗ್ ಬಿಎಲ್‌ಆರ್‌ ಹಬ್ಬಕ್ಕೆ ಚಾಲನೆ ನೀಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ‘ಅನ್‌ಬಾಕ್ಸಿಂಗ್ ಬೆಂಗಳೂರು ಫೌಂಡೇಷನ್’ ವತಿಯಿಂದ ಡಿಸೆಂಬರ್‌ 1ರಿಂದ...

ಅರ್ಹ ರೈತರಿಗೆ ತಲಾ 2000 ರೂ.ವರೆಗೆ ಬೆಳೆ ಪರಿಹಾರ: ಸಿದ್ದರಾಮಯ್ಯ ಘೋಷಣೆ

ಕೇಂದ್ರದಿಂದ ಹಣ ಬರುವವರೆಗೂ ಕಾಯಲು ಸಾಧ್ಯವಿಲ್ಲ: ಸಿಎಂ ಮೊದಲನೇ ಕಂತಿನಲ್ಲಿ...