ಚಿಕ್ಕಮಗಳೂರು | ದ್ವೇಷದ ಹೇಳಿಕೆ, ಬಿಜೆಪಿ ಮುಖಂಡ ಸಿ ಟಿ ರವಿ ವಿರುದ್ಧ ಎಫ್‌ಐಆರ್‌

Date:

ಬಿಜೆಪಿ ಮುಖಂಡ ಸಿ ಟಿ ರವಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ದ್ವೇಷದ ಹೇಳಿಕೆ ಪ್ರಕಟಿಸಿದ ಆರೋಪದ ಮೇಲೆ ಅವರ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಚುನಾವಣಾ ಆಯೋಗದ ಸಾಮಾಜಿಕ ಜಾಲತಾಣ ಮೇಲ್ವಿಚಾರಣಾ ಸಮಿತಿಯ ನೋಡಲ್ ಅಧಿಕಾರಿಯ ಸೂಚನೆ ಮೇರೆಗೆ ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಕೆ.ಜಯಲಕ್ಷ್ಮಮ್ಮ ನಗರ ಠಾಣೆಗೆ ದೂರು ನೀಡಿ ಎಫ್‌ಐಆರ್ ದಾಖಲಿಸಿದ್ದಾರೆ.

“ಸಿ ಟಿ ರವಿ ಬರಹ ಚುನಾವಣಾ ನೀತಿ ಸಂಹಿತೆಯಡಿ ಉಲ್ಲಂಘನೆಯಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಕಾನೂನು ಕ್ರಮ ಕೈಗೊಂಡು ವರದಿ ಸಲ್ಲಿಸಬೇಕು” ಎಂದು ಚುನಾವಣಾ ಆಯೋಗವು ಜಿಲ್ಲಾ ಚುನಾವಣಾಧಿಕಾರಿಗೆ ಸೂಚನೆ ನೀಡಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸಿ ಟಿ ರವಿ ಏನು ಬರೆದುಕೊಂಡಿದ್ದರು?

ಸಿ ಟಿ ರವಿ ತಮ್ಮ ಎಕ್ಸ್‌ ಖಾತೆಯಲ್ಲಿ “ಸಾಗರಗಳ ಆಳವನ್ನು ಅಳೆಯಬಹುದು. ಹಿಂದೂ ಮತ್ತು ಹಿಂದೂ ಧರ್ಮದ ವಿರುದ್ಧ ರಾಹುಲ್ ಗಾಂಧಿ ದ್ವೇಷವನ್ನು ಎಂದಿಗೂ ಕಂಡು ಹಿಡಿಯಲಾಗುವುದಿಲ್ಲ. ಹಿಂದೂ ಧರ್ಮದಲ್ಲಿ ಶಕ್ತಿ ಎಂಬ ಪದವಿದೆ. ನಮ್ಮ ಹೋರಾಟ ಶಕ್ತಿ ವಿರುದ್ಧ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ದುಷ್ಟ ಶಕ್ತಿಗಳ ದಾಳಿಯಿಂದ ನಮ್ಮ ಧರ್ಮವನ್ನು ರಕ್ಷಿಸಲು ಹಿಂದೂಗಳು ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ನಿರ್ದಯವಾಗಿ ತೆಗೆದು ಹಾಕಬೇಕು” ಎಂದು ಪೋಸ್ಟ್ ಹಾಕಿದ್ದರು.

ಸಿ ಟಿ ರವಿ

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಇವಿಎಂ ಮೆಷಿನ್ ಸಾಗಿಸುತ್ತಿದ್ದ ವಾಹನದ ಟೈರ್ ಬ್ಲಾಸ್ಟ್: ಪೊಲೀಸ್ ಬಂದೋಬಸ್ತ್

ಮುಳಬಾಗಿಲಿನಿಂದ ಕೋಲಾರದ ಸ್ಟ್ರಾಂಗ್‌ ರೂಮ್‌ಗೆ ಇವಿಎಂ ಮೆಷಿನ್‌ಗಳನ್ನು ಸಾಗಾಟ ಮಾಡುತ್ತಿದ್ದ ಕ್ಯಾಂಟರ್...

ರಾಯಚೂರು | ಅರೆಬೆಂದ ಊಟ ಸೇವಿಸಿ ವಸತಿ ನಿಲಯದ ವಿದ್ಯಾರ್ಥಿನಿಯರು ಅಸ್ವಸ್ಥ

ಅಂಬೇಡ್ಕರ್ ವಸತಿ ನಿಲಯವೊಂದರಲ್ಲಿ ಅರೆಬೆಂದ ಊಟ ಸೇವಿಸಿ 24 ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ...

ಸುಪ್ರೀಂ ಆದೇಶಕ್ಕೆ ಮಣಿದು ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ

ಬರ ಪರಿಹಾರ ಬಿಡುಗಡೆ ಮಾಡದ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್‌...