ಹಾವೇರಿ ಅತ್ಯಾಚಾರ ಪ್ರಕರಣ | ತನಿಖೆಗೆ ಎಸ್ಐಟಿ ರಚಿಸಲು ನಿರಾಕರಣೆ, ಕೇಸ್‌ ಮುಚ್ಚಿಹಾಕುವ ಪ್ರಯತ್ನ: ಬೊಮ್ಮಾಯಿ ಆರೋಪ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾವೇರಿ ಅತ್ಯಾಚಾರ ಪ್ರಕರಣದ ತನಿಖೆ ನಡೆಸಲು ಎಸ್ಐಟಿ ರಚಿಸಲು ನಿರಾಕರಣೆ ಮಾಡಿರುವುದು ಒಂದು ರೀತಿಯಲ್ಲಿ ಈಗಾಗಲೇ ಕೇಸ್ ತಿರುಚುವ ಮುಖಾಂತರ ಸ್ಥಳೀಯ ಪೊಲೀಸರು ಮುಚ್ಚಿಹಾಕುವ ಪ್ರಯತ್ನ ಮಾಡುವುದಕ್ಕೆ ಲೈಸೆನ್ಸ್ ಕೊಟ್ಟಂತಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಈ ಕುರಿತು ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ಮುಖ್ಯಮಂತ್ರಿಗಳ ಈ ನಿಲುವನ್ನು ಖಂಡಿಸುತ್ತೇನೆ. ಅವರಿಗೆ ಸಂತ್ರಸ್ತ ಮಹಿಳೆಗೆ ನ್ಯಾಯ ಕೊಡಿಸುವ ಉದ್ದೇಶ ಇದ್ದರೆ ಕೂಡಲೆ ಎಸ್ಐಟಿ ರಚನೆ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.

“ಹಾವೇರಿ ಗ್ಯಾಂಗ್ ರೇಪ್ ಪ್ರಕರಣದ ಸಂತ್ರಸ್ತೆಗೆ ಸರಿಯಾದ ವೈದ್ಯಕೀಯ ಚಿಕಿತ್ಸೆ ಇಲ್ಲದೆ ಮನೆಗೆ ಕಳಿಸಿರುವುದಕ್ಕೆ ಸಿಎಂ ಬಳಿ ಉತ್ತರ ಇಲ್ಲ. ಹಾಗೂ ಅವಳಿಗೆ ವೈದ್ಯಕೀಯ ಚಿಕಿತ್ಸೆ ಕೊಡಿಸಲು ಕಾಂಗ್ರೆಸ್ ಪಕ್ಷದ ಶಾಸಕರಿಗೆ ಹೇಳಿರುವುದು. ಸರ್ಕಾರ ಇಷ್ಟು ದೊಡ್ಡ ಆರೋಗ್ಯ ಇಲಾಖೆ ಇದ್ದು, ಅವಳಿಗೆ ಸೂಕ್ತ ಚಿಕಿತ್ಸೆ ಕೊಡಲು ತಯಾರಿಲ್ಲ ಎಂದರೆ, ಮತ್ತು ಆ ಜವಾಬ್ದಾರಿಯನ್ನು ತಮ್ಮ ಶಾಸಕರಿಗೆ ವಹಿಸಿರುವಂಥದ್ದು ಈ ಪ್ರಕರಣವನ್ನು ಮುಚ್ಚಿ ಹಾಕುವ ಹಾಗೂ ಆ ಹೆಣ್ಣು ಮಗಳನ್ನು ಸಂಪೂರ್ಣ ಹತೋಟಿಗೆ ತೆಗೆದುಕೊಳ್ಳುವ ತಂತ್ರ ಗೊತ್ತಾಗುತ್ತದೆ. ಆದ್ದರಿಂದ ಅವಳಿಗೆ ಚಿಕಿತ್ಸೆಯನ್ನು ಸಂಪೂರ್ಣ ಸರ್ಕಾರಿ ವ್ಯವಸ್ಥೆಯಲ್ಲಿಯೇ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಮಾಜಿ ಪುಣ್ಯಾತ್ಮ ಉತ್ತರ ಭಾರತದಲ್ಲಿ ಪ್ರತಿದಿನ ಅಂದಾಜು ಇಪ್ಪತ್ತು ಇದಕ್ಕಿಂತ ಹೀನ ಪ್ರಕರಣಗಳು ನಡೆಯುವುದಂತೆ ಅದ್ರಲ್ಲೂ ಸಾಕ್ಷಾತ್ ದೇವಮಾನವನ ರಾಮರಾಜ್ಯದಲ್ಲಿನ ಉತ್ತರ ಪ್ರದೇಶದಲ್ಲಿ ಅತೀ ಹೆಚ್ಚು,,, ಯಾವುದಾದರೂ ಪ್ರಕರಣ ಬಹಿರಂಗಪಡಿಸಲಾಗಿದೆಯೇ,,, ಹಿಂದೂ ಹುಡುಗಿಯರು ಮುಸ್ಲಿಂ ಯುವತಿಯರೊಂದಿಗೆ ಇರುವಾಗ ಹಿಂದೂ ಗುತ್ತಿಗೆದಾರರು ಅದೇಷ್ಟೋ ಪ್ರಕರಣಗಳು ನಡೆದಿವೆ,,ಯಾವತ್ತಾದರೂ ಹಿಂದೂ ಯುವತಿಯರ ಪರವಾಗಿ ಪ್ರತಿಭಟನೆ ಮಾಡಿರುವಿರಾ,,,ಹಿಂದೂ ನಿಮ್ಮ ದೃಷ್ಟಿಯಲ್ಲಿ ಕೇವಲ ನಿಮ್ಮ ಗುತ್ತಿಗೆದಾರರೆ,,, ದೇಶದಲ್ಲಿ ಸಾಮಾಜಿಕ ಸಾಮರಸ್ಯ ಹಾಳು ಮಾಡುವಲ್ಲಿ ನಿಮ್ಮವರ ಪಾತ್ರವನ್ನು ಆತ್ಮವಂಚನೆ ಮಾಡಿಕೊಳ್ಳದೇ ನೆನಪಿಸಿಕೊಳ್ಳಿ,,ರಿಪೇರಿ ಮಾಡಲು ಆಗದಷ್ಟು ನಾಶ ಮಾಡಿದರು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪೆನ್‌ಡ್ರೈವ್‌ ಪ್ರಕರಣ; ಅಪ್ಪ- ಮಗ ಇಬ್ಬರಿಂದಲೂ ಲೈಂಗಿಕ ಕಿರುಕುಳ- ಸಂತ್ರಸ್ತೆ ದೂರು

ಹಾಸನದ ಪ್ರಭಾವಿ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದ ಲೈಂಗಿಕ ಹಗರಣ ಹಲವು ತಿರುವುಗಳನ್ನು...

ಹಾಸನ ಪೆನ್‌ಡ್ರೈವ್ ಪ್ರಕರಣ | ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ನಿರ್ಧಾರ

ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ...

ಮೋದಿ ಸುಳ್ಳುಗಳು: ಭಾಗ-1 | ಕಳೆದ 10 ವರ್ಷಗಳಲ್ಲಿ ವಿಶ್ವಾದ್ಯಂತ ಭಾರತದ ವಿಶ್ವಾಸಾರ್ಹತೆ ಹೆಚ್ಚಾಗಿದೆಯೇ? ವಾಸ್ತವ ಏನು?

ಮುಸಲ್ಮಾನರಿಗೆ ಕಳೆದ 30 ವರ್ಷದಿಂದ ಮೀಸಲಾತಿ ಜಾರಿಯಲ್ಲಿದೆ. ನಂತರ ಬಸವರಾಜ ಬೊಮ್ಮಾಯಿ...