ಈ ಬಾರಿ ಒಂದೇ ಕ್ಷೇತ್ರದಿಂದ ಸ್ಪರ್ಧೆ ಎಂದ ಎಚ್‌ಡಿ ಕುಮಾರಸ್ವಾಮಿ

Date:

  • ಈ ಬಾರಿ ಪಾರದರ್ಶಕ ಚುನಾವಣೆ ನಡೆಯುವುದು ಅನುಮಾನ
  • ಒಂದೇ ಹಂತದಲ್ಲಿ ಚುನಾವಣೆ ನಡೆಸಬೇಕು ಎಂದು ಮನವಿ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಾನು ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಅವರು ತಿಳಿಸಿದರು.

ಮೈಸೂರಿನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿರುವ ಕುಮಾರಸ್ವಾಮಿ, “ಈ ಬಾರಿ ಸುಮಲತಾ ಅಂಬರೀಶ್ ಅವರೇ ಸ್ಪರ್ಧೆ ಮಾಡಿದರೂ ನಾನು ಮಂಡ್ಯದಲ್ಲಿ ಸ್ಪರ್ಧಿಸುವುದಿಲ್ಲ. ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸುತ್ತೇನೆ. ನಾನು ಮಂಡ್ಯದಿಂದ ಸ್ಪರ್ಧಿಸುವ ವಿಚಾರಗಳು ಬರೀ ಊಹಾಪೋಹಗಳಷ್ಟೇ” ಎಂದು ಹೇಳಿದರು.

ಕಾಂಗ್ರೆಸ್‌ನ ನಾಲ್ಕು ಗ್ಯಾರಂಟಿ ಕಾರ್ಡ್‌ಗಳ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, “ಕಾಂಗ್ರೆಸ್‌ನದು ಗ್ಯಾರಂಟಿ ಕಾರ್ಡ್‌ ಅಲ್ಲ. ಅದು ನಕಲಿ ಕಾರ್ಡ್‌. ಜನರಿಗೆ ಟೀಕೆಗಳಿಂದ ಯಾವುದೇ ಪ್ರಯೋಜನವಿಲ್ಲ. ನಾನಿದರ ಬಗ್ಗೆ ಸುಮ್ಮನೆ ಮಾತನಾಡಿ ಸಮಯ ವ್ಯರ್ಥ ಮಾಡುವುದಿಲ್ಲ. ನಾನು ಕೇವಲ 37 ಶಾಸಕರನ್ನು ಇಟ್ಟುಕೊಂಡು ಕೆಲಸ ಮಾಡಿರುವೆ. ಕಾಂಗ್ರೆಸ್​​ನ ಎಲ್ಲ ಭಾಗ್ಯಗಳ ಜೊತೆಗೆ ರೈತರ ಸಾಲಮನ್ನಾ ಮಾಡಿರುವೆ” ಎಂದು ಹೇಳಿದರು.

“ತಮ್ಮ ಸಮಾವೇಶಕ್ಕೆ ಜನರನ್ನು ಕರೆತರಲು ಬಿಜೆಪಿ ನಾಯಕರು ಜಿಲ್ಲಾಧಿಕಾರಿ ಸೇರಿದಂತೆ ಇತರೆ ಅಧಿಕಾರಿಗಳಿಗೆ ಜವಾಬ್ದಾರಿ ವಹಿಸುತ್ತಾರೆ. ಈ ಬಾರಿ ಪಾರದರ್ಶಕ ಚುನಾವಣೆ ನಡೆಯುವುದು ಅನುಮಾನ. ಆದ್ದರಿಂದ ಒಂದೇ ಹಂತದಲ್ಲಿ ಚುನಾವಣೆ ನಡೆಸಬೇಕು” ಎಂದು ಮನವಿ ಮಾಡಿಕೊಂಡರು.

“ಸರ್ಕಾರದ ಆಸ್ತಿ ದ್ವಿಗುಣ ಆಗುವ ನಿಟ್ಟಿನಲ್ಲಿ ನಾನು ಕಾರ್ಯಕ್ರಮಗಳನ್ನು ನೀಡುತ್ತಿರುವೆ. ಆದರೆ, ಕಾಂಗ್ರೆಸ್ ಪ್ರಸ್ತಾಪಿಸಿರುವ ಕಾರ್ಯಕ್ರಮಗಳು ಸರ್ಕಾರದ ಆಸ್ತಿ ವೃದ್ಧಿಸಲಾರವು. ಬರೀ ಚುನಾವಣೆಯಲ್ಲಿ ಮತ ಪಡೆಯುವ ದೃಷ್ಟಿಯಿಂದಲೇ ಯೋಜನೆಗಳನ್ನು ಪ್ರಸ್ತಾಪಿಸಲಾಗುತ್ತಿದೆ” ಎಂದು ವ್ಯಂಗ್ಯವಾಡಿದರು.

“ಸದ್ಯದ ಆರ್ಥಿಕ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಯೋಜನೆ ಸಾಧ್ಯವಿಲ್ಲ. ಅವರು ಅಧಿಕಾರಕ್ಕೆ ಬರುವುದಿಲ್ಲ ಅಂತಾ ಗೊತ್ತಿದೆ. ಅವರ ನಿರ್ಧಾರಗಳೇ ಅವರನ್ನು ರಾಜಕೀಯದಿಂದ ನಿವೃತ್ತಿ ಮಾಡುತ್ತವೆ” ಎಂದರು.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಿಗಮ ಮಂಡಳಿ ನೇಮಕಾತಿಯಲ್ಲಿ ಯಾರ ಅಭಿಪ್ರಾಯವನ್ನೂ ಪಡೆದಿಲ್ಲ: ಸಿದ್ದರಾಮಯ್ಯ

ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಕಾನೂನುಬಾಹಿರ ನ್ಯಾಯಾಲಯದ ಮೊರೆ...

‘ಮಹಾಧರಣಿ’ಗೆ ಸಿಎಂ ಸಿದ್ದರಾಮಯ್ಯ ಸ್ಪಂದನೆ: ಡಿ.19ರಂದು ಮಹತ್ವದ ಸಭೆ

ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಕಳೆದ ಮೂರು ದಿನಗಳಿಂದ ಸಂಯುಕ್ತ ಹೋರಾಟ ಸಮಿತಿಯ...

ದೇಶದಲ್ಲಿ ‘ಬ್ರ್ಯಾಂಡ್‌ ಬೆಂಗಳೂರು’ ನಂಬರ್ ಒನ್ ಆಗಿಸಬೇಕಿದೆ: ಸಿದ್ದರಾಮಯ್ಯ

'ದೇಶ ಸುಸ್ಥಿರವಾಗಿ ಬೆಳೆಯಬೇಕಾದರೆ ನಗರ-ಗ್ರಾಮೀಣ ಸುಸ್ಥಿರ ಬೆಳವಣಿಗೆ ಕಾಣಬೇಕು' 'ರಾಜ್ಯದ...

‘ಫ್ರೀಡಂ ಪಾರ್ಕ್’ನಿಂದ ನಮಗೆ ‘ಫ್ರೀಡಂ’ ಕೊಡಿ: ಸಿಎಂ ಸಿದ್ದರಾಮಯ್ಯಗೆ ‘ಮಹಾಧರಣಿ’ ಆಗ್ರಹ

ರಾಜಧಾನಿ ಬೆಂಗಳೂರಿನಲ್ಲಿ ನಡೆಯುವ ಪ್ರತಿಯೊಂದು ಪ್ರತಿಭಟನೆಗಳು ಕೇವಲ 'ಫ್ರೀಡಂ ಪಾರ್ಕ್‌'ಗೆ ಸೀಮಿತವಾಗಿದ್ದು,...