ಜೆಡಿಎಸ್ ಜಾತಿಗೆಟ್ಟಿದೆ ಎಂದ ಕಾಂಗ್ರೆಸ್‌ಗೆ ಚಾಟಿ ಬೀಸಿದ ಹೆಚ್ ಡಿ ಕುಮಾರಸ್ವಾಮಿ

Date:

  • ಕಾಂಗ್ರೆಸ್, ಚುನಾವಣೆ ಹೊತ್ತಿಗೆ ಸುಳ್ಳುಗಳ ಸರಮಾಲೆಯನ್ನೇ ಪೋಣಿಸುತ್ತಿದೆ
  • ಈಗಿನ ಕಾಂಗ್ರೆಸ್ ಮಹಾತ್ಮ ಗಾಂಧೀಜಿ ಅವರ ಕಾಲದ ಕಾಂಗ್ರೆಸ್ ಅಲ್ಲ

ಕಾಂಗ್ರೆಸ್ ಕುಟಿಲತೆ, ಕಪಟತನದ ಕಾಮಾಲೆ ಕಾಯಿಲೆಯಿಂದ ಬಳಲುತ್ತಿದೆ. ಕೈ ಕೊಡುವ ಚಾಳಿ ಕಾಂಗ್ರೆಸ್ ಪಕ್ಷದ ಜನ್ಮಕ್ಕೆ ಅಂಟಿದ ಆಜನ್ಮ ಜಾಢ್ಯ. ಒಳಗೊಂದು ಮುಖ, ಹೊರಗೊಂದು ಮುಖವುಳ್ಳ ಮುಖೇಡಿ ಪಕ್ಷವೇ ಕಾಂಗ್ರೆಸ್. ಅಂಥ ಕಾಂಗ್ರೆಸ್, ಚುನಾವಣೆ ಹೊತ್ತಿಗೆ ಸುಳ್ಳುಗಳ ಸರಮಾಲೆಯನ್ನೇ ಪೋಣಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ದೂರಿದ್ದಾರೆ.

ಜೆಡಿಎಸ್ ಪಕ್ಷ ಜಾತಿಗೆಟ್ಟಿದೆ ಎಂದು ಟೀಕೆ ಮಾಡಿದ್ದ ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಈ ಬಗ್ಗೆ ಸರಣಿ ಟ್ವೀಟ್ ಮಾಡಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ತೀವ್ರ ಟೀಕಾ ಪ್ರಹಾರ ನಡೆಸಿದ್ದಾರೆ.

“ಪ್ರಧಾನಿಯಾಗಿದ್ದ ಕನ್ನಡದ ಹೆಮ್ಮೆಯ ಪುತ್ರನನ್ನು ಕೆಳಗೆಳೆದ ಕಿರಾತಕ ಪಕ್ಷ, ಅಹಿಂದ ಎನ್ನುತ್ತಲೇ ಬಿಜೆಪಿ ಹಿಂದೆಬಿದ್ದು ಬೇಳೆ ಬೇಯಿಸಿಕೊಳ್ಳುತ್ತಿರುವ ಪಕ್ಷ; ಅಂಥ ಕಳಂಕಿತ ಪಕ್ಷ ಜಾತ್ಯತೀತ ಜನತಾದಳದ ಜಾತ್ಯತೀತತೆ ಬಗ್ಗೆ ಕೀರಲು ದನಿಯಲ್ಲಿ ಕಿರಚುತ್ತಿದೆ. ಇಡೀ ದೇಶದ ಉದ್ದಗಲಕ್ಕೂ ಜಾತ್ಯತೀತ ಪಕ್ಷಗಳ ಮಾರಣಹೋಮ ನಡೆಸಿ, ಈಗ ಅಳಿವು ಉಳಿವಿಗಾಗಿ ಅದೇ ಪ್ರಾದೇಶಿಕ ಪಕ್ಷಗಳ ಬಾಲವಾಗಿ ಉಸಿರಾಡುತ್ತಿದೆ ಕಾಂಗ್ರೆಸ್. ಇನ್ನೂ ಹಳೆಯ ಅಮಲಿನಲ್ಲಿಯೇ ತೇಲುತ್ತಿದೆ ಆ ಪಕ್ಷಕ್ಕೆ ವರ್ತಮಾನದ ವರ್ತನೆಯ ಅರಿವೇ ಇಲ್ಲ” ಎಂದು ಅವರು ಟೀಕಿಸಿದ್ದಾರೆ.

“ಈ ಕಾಂಗ್ರೆಸ್ ಮಹಾತ್ಮ ಗಾಂಧೀಜಿ ಅವರ ಕಾಲದ ಕಾಂಗ್ರೆಸ್ ಅಲ್ಲದೇ, ಅಧಿಕಾರಕ್ಕಾಗಿ ಅಡ್ಡದಾರಿ ಹಿಡಿದ ಪಕ್ಷ. ಈ ಕಾಂಗ್ರೆಸ್, ಕಾಲಚಕ್ರಕ್ಕೆ ಸಿಲುಕಿ ಕೊರಗುತ್ತಾ ನೀತಿಗೆಟ್ಟ ಕಾಂಗ್ರೆಸ್, ಕರ್ನಾಟಕದಲ್ಲಿ ಮತಗೇಡಿ ಬಿಜೆಪಿಯ ಬಾಲಂಗೋಚಿ ಆಗಿರುವುದು ಸುಳ್ಳಾ?” ಎಂದು ಪ್ರಶ್ನಿಸಿದ್ದಾರೆ.

“ಇನ್ನೊಬ್ಬರ ಬಗ್ಗೆ ಹೊಟ್ಟೆಕಿಚ್ಚು ಪಡುವ ಕೀಳುತನ ಎಂಬುದು ಕಾಂಗ್ರೆಸ್ ಪಕ್ಷಕ್ಕೆ ಅಂಟಿದ ಬಾಲಗ್ರಹ ಪೀಡೆ. ಅಧಿಕೃತ ಪ್ರತಿಪಕ್ಷವಾಗಿ ಹಗರಣಗಳ ಆಡುಂಬೋಲವಾದ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಯಕಶ್ಚಿತ್ ಒಂದು ದಾಖಲೆಯನ್ನೂ ಬಿಡುಗಡೆ ಮಾಡಲು ಯೋಗ್ಯತೆ ಇಲ್ಲದ ಪಕ್ಷ ಕಾಂಗ್ರೆಸ್” ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಳ್ಳಾರಿ ರಸ್ತೆ ವಿಸ್ತರಣೆ ಕಾಮಗಾರಿ 95% ಮುಗಿದಿದೆ ಎಂದ ಬಿಬಿಎಂಪಿ ; ವರದಿ ಕೇಳಿದ ಹೈಕೋರ್ಟ್‌

“ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಮಹೋನ್ನತ ಆಶಯಕ್ಕೆ ಕುಣಿಕೆ ಬಿಗಿದ ಆಪರೇಶನ್ ಕಮಲ ಎಂಬ ಬಿಜೆಪಿಯ ಅಸಹ್ಯದಲ್ಲಿ ಅಭ್ಯಂಜನ ಮಾಡಿದವರು ಯಾರಯ್ಯ?” ಎಂದು ಕೇಳಿದ್ದಾರೆ.

“ಕಾಂಗ್ರೆಸ್ ಅನ್ನು ಹಳ್ಳ ಹಿಡಿಸಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರತಿಪಕ್ಷ ಸ್ಥಾನದಿಂದ ಹೊರದಬ್ಬಲು ಯಡಿಯೂರಪ್ಪ ಅವರ ಜತೆ ನೇರ ಡೀಲಿಗಿಳಿದು ಕೋಟಿ ಕೋಟಿ ಸುಪಾರಿ ಪಡೆದು ಇಡಗಂಟು ಮಾಡಿಕೊಂಡವರ ಬಗ್ಗೆ ಕಾಂಗ್ರೆಸ್ ಅಸಹನೀಯ ಮೌನವೇಕೆ? ಆಗ ಎಲ್ಲಿತ್ತು ಜಾತ್ಯತೀತತೆ? ಆ ದಲಿತ ನಾಯಕ ಮಾಡಿದ ಅನ್ಯಾಯವೇನು?” ಎಂದು ಪ್ರಶ್ನಿಸಿದ್ದಾರೆ.

“ಧರ್ಮ, ಜಾತಿಗಳ ನಡುವೆ ವೈಷಮ್ಯದ ವಿಷಬೀಜ ಬಿತ್ತಿದ, ಹಗರಣಗಳಲ್ಲಿ ಮುಳುಗೇಳುತ್ತಿರುವ ಕಡುಕೆಟ್ಟ ಭ್ರಷ್ಟ ಈ ರಾಜ್ಯ ಬಿಜೆಪಿ ಸರ್ಕಾರ ಬರಲು ಕಾರಣರು ಯಾರಯ್ಯ? ಮೇಲೆ ಮಾತ್ರ ಜಾತ್ಯತೀತ, ಒಳಗೆ ಮಾತ್ರ ಎಲ್ಲಕ್ಕೂ ಅತೀತ! ಇದು ಯಾವ ಸೀಮೆಯ ತತ್ತ್ವ ಸಿದ್ದಾಂತ? ಇನ್ನೆಷ್ಟು ದಿನ ಈ ಟೋಪಿ ರಾಜಕಾರಣ? ರಾಜಕೀಯದಲ್ಲಿ ಕಳ್ಳ ಸಂಸಾರ ಎನ್ನುವುದು ಕಾಂಗ್ರೆಸ್ ಪಕ್ಷದ ಆವಿಷ್ಕಾರ” ಎಂದು ಕಾಂಗ್ರೆಸ್ ಪಕ್ಷಕ್ಕೆ ಚಾಟಿ ಬೀಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಹಶೀಲ್ದಾರ್ ಅಜಿತ್ ಕುಮಾರ್ ರೈ ಅನ್ನು ನ್ಯಾಯಾಲಯ ವಿಚಾರಣೆಗೆ ಒಳಪಡಿಸಲು ಆದೇಶ

ಅರಣ್ಯ ಜಮೀನನ್ನು ಕಂದಾಯ ಜಮೀನನ್ನಾಗಿ ಪರಿವರ್ತಿಸಿರುವ ಆರೋಪ ಅನುಕಂಪದಲ್ಲಿ ಸರ್ಕಾರಿ...

ಬೆಂಗಳೂರು ಟೆಕ್ ಸಮ್ಮಿಟ್ 2023 | ಜೈವಿಕ ತಂತ್ರಜ್ಞಾನ ಕಾರ್ಯನೀತಿಯ ಪರಿಷ್ಕೃತ ಕರಡು ಬಿಡುಗಡೆ

ಬೆಂಗಳೂರು ಅರಮನೆಯಲ್ಲಿ 'ಬ್ರೇಕಿಂಗ್ ದಿ ಬೌಂಡರೀಸ್' ಘೋಷವಾಕ್ಯದ 26ನೇ ‘ಬೆಂಗಳೂರು ತಂತ್ರಜ್ಞಾನ...

ಕಾಗಿನೆಲೆ ಪೀಠ ಒಂದು ಜಾತಿಯ ನೆಲೆ ಅಲ್ಲ, ಎಲ್ಲ ಶೋಷಿತ ಜಾತಿ-ಸಮುದಾಯಗಳ ನೆಲೆ: ಸಿದ್ದರಾಮಯ್ಯ

ಕನಕದಾಸರು ಜಾತಿ‌, ಅನಕ್ಷರತೆಯ ಅಸಮಾನತೆ ಹೋಗಲಾಡಿಸಲು ಹೋರಾಡಿದರು ಯಾವ ಧರ್ಮವೂ...

ಡಿಕೆಶಿ ಕಾಲ ಕೆಳಗೆ ಸಿದ್ದರಾಮಯ್ಯ ಸರ್ಕಾರ: ಎಚ್‌ ಡಿ ಕುಮಾರಸ್ವಾಮಿ ಲೇವಡಿ

ರಾಜ್ಯ ಸರ್ಕಾರದ ನಿರ್ಧಾರ ಕಾನೂನು ಬಾಹಿರ ಸರ್ಕಾರದ ನಿರ್ಣಯಗಳನ್ನು ಬಯಲಾಗುತ್ತಿವೆ ಮುಖ್ಯಮಂತ್ರಿ...