ಕೆಂಪಣ್ಣರನ್ನೇ ಬಾಣಲೆಯಿಂದ ಬೆಂಕಿಗೆ ಹಾಕಲು ಹೊರಟ ಸಿದ್ದರಾಮಯ್ಯ: ಎಚ್‌ ಡಿ ಕುಮಾರಸ್ವಾಮಿ

Date:

  • ‘ಕೆಂಪಣ್ಣನವರ ಕೃಪಾಕಟಾಕ್ಷದಿಂದಲೇ ಅಧಿಕಾರಕ್ಕೆ ಬಂದಿದ್ದೀರಿ’
  • ಸುಲಿಗೆ ಮನಸ್ಥಿತಿಗೂ ಸೂಕ್ತ ಚಿಕಿತ್ಸೆ ಬೇಡವೇ ಸಿದ್ದರಾಮಯ್ಯ: ಪ್ರಶ್ನೆ

‘ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ..!’ ಇದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣನವರ ಹೊಸ ಹೇಳಿಕೆ. ಇದೇ ಕೆಂಪಣ್ಣನವರ 40% ಆರೋಪವನ್ನೇ ಅಸ್ತ್ರ ಮಾಡಿಕೊಂಡು, ಕೆಂಪಣ್ಣನವರ ಕೃಪಾಕಟಾಕ್ಷದಿಂದಲೇ ಅಧಿಕಾರಕ್ಕೆ ಬಂದಿದ್ದೀರಿ. ಈಗ ಅವರನ್ನೇ ಬೆಂಕಿಗೆ ಹಾಕಲು ಹೊರಟಿದ್ದೀರಿ. ಇದು ಎಂತಹ ಮನಃಸ್ಥಿತಿ? ಇದಕ್ಕೆ ಚಿಕಿತ್ಸೆ ಬೇಡವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಕುಟುಕಿದ್ದಾರೆ.

ಈ ಕುರಿತು ಅವರು ಸರಣಿ‌ ಟ್ವೀಟ್ ಮಾಡಿರುವ ಅವರು, “ಈಗ ವಿಷಯಾಂತರ ಮಾಡಿ, ಕುಮಾರಸ್ವಾಮಿಯ ಟೀಕೆ, ಭಾಷೆ, ಆರೋಪ ಇಟ್ಟುಕೊಂಡು ಅನುಕಂಪ ಗಿಟ್ಟಿಸಲು ಹೊರಟಿದ್ದೀರಿ! ಆದರೆ; ಅನುದಿನವೂ ವರ್ಗಾವಣೆ, ಕಮೀಷನ್ ದಂಧೆಯಲ್ಲಿ ಬೇಯುತ್ತಿರುವವರ ಕರುಣಾಜನಕ ಕಥೆಗಳಿಗೆ ಕೊನೆ ಎಂದು? ನಿಮ್ಮ ಹಣದ ಹಪಾಹಪಿ, ಧನಪಿಶಾಚಿ ರಕ್ಕಸತನಕ್ಕೆ ಅಂತ್ಯ ಯಾವಾಗ? ಇಂಥ ಸುಲಿಗೆ ಮನಸ್ಥಿತಿಗೂ ಸೂಕ್ತ ಚಿಕಿತ್ಸೆ ಬೇಡವೇ ಸಿದ್ದರಾಮಯ್ಯನವರೇ” ಎಂದು ಪ್ರಶ್ನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್‌ನಿಂದ ಎರಡನೇ ಹಂತದ ಭಾರತ್‌ ಜೋಡೋ: ಈ ಬಾರಿ ಗುಜರಾತ್‌ನಿಂದ ಆರಂಭ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ

“ಸರ್ಕಾರಿ ಉದ್ಯೋಗಿಗಳು, ಅವರ ಕುಟುಂಬದವರ ಕಣ್ಣೀರಿನ ಶಾಪ ನಿಮಗೆ ತಟ್ಟದಿರುವುದೇ? ಮಾನಸಿಕ ಸ್ಥಿಮಿತತೆ ಎಂದರೆ ಸರಕಾರಿ ಉದ್ಯೋಗಿಗಳನ್ನು ಕಾಸಿಗಾಗಿ ಎಡೆಬಿಡದೆ ಕಾಡುವುದೇ? ಅಥವಾ ಇದೇನಾ ಸಾಮಾಜಿಕ ನ್ಯಾಯ? ನುಡಿದಂತೆ ನಡೆಯುವುದು ಎಂದರೆ ಇದೇನಾ?” ಎಂದು ವಾಗ್ದಾಳಿ ನಡೆಸಿದ್ದಾರೆ.

“ಭ್ರಷ್ಟಾಚಾರದ ಆರೋಪವನ್ನೇ ಅನುಕಂಪವನ್ನಾಗಿ ಪರಿವರ್ತಿಸಿಕೊಳ್ಳುವ ‘ಸಿದ್ದಕಲೆ’ ನನಗಂತೂ ಗೊತ್ತಿಲ್ಲ. ಒಂದೇ ಹುದ್ದೆಗೆ ಮುಖ್ಯಮಂತ್ರಿ ಕಚೇರಿಯ ಐದಾರು ಟಿಪ್ಪಣಿಗಳು ‘ನಡೆದಂತೆ ಎಲ್ಲವನ್ನೂ ನುಡಿಯುತ್ತಿವೆ’ ಹಾಗೂ ಆಯ್ದ ಕಿಸೆಗಳನ್ನು ಭರ್ತಿ ತುಂಬುತ್ತಿವೆ!” ಎಂದು ಆರೋಪಿಸಿದ್ದಾರೆ.

“ನಮ್ಮ ಸೋಲಿನ ಆಘಾತ ಇರಲಿ, ನಿಮ್ಮ ಶಾಸಕರ ವರಾತದ ಕಥೆ ಏನು? 136 ಸೀಟು ಎಂದು ಬೀಗುತ್ತಿದ್ದೀರಿ, ಹಣದುಬ್ಬರದಂತೆ ‘ಅತಿ ಉಬ್ಬರ’ವೂ ದೇಶಕ್ಕೆ ಒಳ್ಳೆಯದಲ್ಲ. ಸಭ್ಯ ಭಾಷೆಯಲ್ಲೇ ತಮಗೆ ಹೇಳುತ್ತಿದ್ದೇನೆ. ಅರ್ಥವಾಗಿದೆ ಎಂದು ಭಾವಿಸುತ್ತೇನೆ” ಎಂದಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಜಾತಿಗಣತಿ ವರದಿ ಅನುಷ್ಠಾನಗೊಳಿಸಲು ಆಗ್ರಹಿಸಿ ದಸಂಸ ಧರಣಿ

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿಯನ್ನು ಅಂಗೀಕರಿಸಿ, ದಲಿತ ಹಿಂದುಳಿದ...

ತುಮಕೂರು | ಎಕ್ಸ್ ಪ್ರೆಸ್ ಕೆನಾಲ್ ಕಾಮಗಾರಿ ಪುನರಾರಂಭ ವಿರೋಧಿಸಿ ಪ್ರತಿಭಟನೆ

ಹೇಮಾವತಿ ಎಕ್ಸ್  ಪ್ರೆಸ್ ಕೆನಾಲ್ ಕಾಮಗಾರಿ ಪುನರಾರಂಭವನ್ನು ವಿರೋಧಿಸಿ ಇಂದು ಮಾಜಿ...

ಯಾದಗಿರಿ | ಜಾತಿಗಣತಿ ವರದಿ ಅಂಗೀಕರಿಸಿ ಅನುಷ್ಠಾನಗೊಳಿಸಲು ಆಗ್ರಹಿಸಿ ದಸಂಸ ಪ್ರತಿಭಟನೆ

ಅಕ್ಟೋಬರ್ 25ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿಯನ್ನು ಅಂಗೀಕರಿಸಿ...

ಕಲಬುರಗಿ | ಮಹಾನ್ ಕ್ರಾಂತಿಕಾರಿ ಅಶ್ಫಾಕುಲ್ಲಾ ಖಾನ್‌ರವರ 125ನೇ ಜನ್ಮದಿನಾಚರಣೆ

ಕಲಬುರಗಿ ಜಿಲ್ಲೆಯ ಶಾಹಬಾದ್ ತಾಲೂಕಿನ ಎಐಡಿವೈಒ ಸ್ಥಳೀಯ ಸಮಿತಿಯು ನಗರದ ಬಸವೇಶ್ವರ...