- 135 ಸೀಟು ಸಿಕ್ಕಿದ ಮೇಲೆ ಪ್ರಣಾಳಿಕೆ ಪುಸ್ತಕಕ್ಕೆ ಮೂವತ್ತೇ ದಿನದಲ್ಲಿ ಗೆದ್ದಲು ಹಿಡಿಯಿತಾ?
- ಬೆಲೆಗಳ ಇಳಿಕೆಯ ಬಗ್ಗೆ ಕಾಂಗ್ರೆಸ್ ಕೊಟ್ಟಿದ್ದ ಭರವಸೆಗಳು ಇಂದು ಎಲ್ಲಿ ಹೋದವು?
ಕಾಂಗ್ರೆಸ್ ನಾಯಕರೇ ಸುಳ್ಳು ಹೇಳಿದ್ದು ಸಾಕು, ಇನ್ನಾದರೂ ಏರಿದ ಬೆಲೆ ಕಡಿತಕ್ಕೆ ಕ್ರಮ ಕೈಗೊಳ್ಳಿ. ಇಲ್ಲವಾದರೇ ರಾಜ್ಯದ ನಾರಿಶಕ್ತಿ ಆಕ್ರೋಶಕ್ಕೆ ನೀವು ನಾಮಾವಶೇಷ ಆಗುತ್ತೀರಿ ಎಚ್ಚರ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.
ಬೆಲೆ ಏರಿಕೆ ಕುರಿತು ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ, “ಐದು ಗ್ಯಾರಂಟಿಗಳಿಂದ ಜನೋದ್ಧಾರ ಗ್ಯಾರಂಟಿ ಎಂದು ಹಸಿ ಸುಳ್ಳು ಹೇಳಿದ್ದ ಕಾಂಗ್ರೆಸ್ ಸರ್ಕಾರ ಬರಗೆಟ್ಟ ಈ ಹೊತ್ತಿನಲ್ಲಿ ಅಂಬರದ ಮೇಲೆ ಕೂತು ಸ್ವಯಂವರ ಮಾಡಿಕೊಳ್ಳುತ್ತಿರುವ ಮತಿಗೆಟ್ಟವರನಂತೆ ವರ್ತಿಸುತ್ತಿದೆ. ಬೆಲೆ ಏರಿಕೆ ಹೊಡೆತಕ್ಕೆ ಜನ ತತ್ತರಿಸುತ್ತಿರುವುದು ಅದರ ಕಣ್ಣಿಗೆ ಕಾಣುತ್ತಿಲ್ಲ” ಎಂದು ಕಿಡಿ ಕಾರಿದ್ದಾರೆ.
“ನನಗೂ ಫ್ರೀ, ನಿನಗೂ ಫ್ರೀ ಎಂದು ಗ್ಯಾರಂಟಿ ಜಾಗಟೆ ಹೊಡೆದ ಈ ಸರ್ಕಾರಕ್ಕೆ ಮಾರುಕಟ್ಟೆಯಲ್ಲಿ ಗಗನಮುಖಿಯಾದ ಆಹಾರ ಪದಾರ್ಥಗಳ ಬೆಲೆ ಮೇಲೆ ನಿಯಂತ್ರಣವೇ ಇಲ್ಲ. ಆಹಾರ ಮತ್ತು ನಾಗರಿಕ ಪೂರೈಕೆ, ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆಗಳು ಜನರ ಕಣ್ಣೀರಿನಲ್ಲಿ ಗೆಣಸು ಬೇಯಿಸಿಕೊಳ್ಳುತ್ತಿವೆ. ಅವರಿಗೆ ಬೆಲೆ ಇಳಿಕೆ ಬಗ್ಗೆ ಚಿಂತನೆಯೇ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ಇನ್ನೊಬ್ಬರ ಮೇಲೆ ಗೂಬೆ ಕೂರಿಸುವ ಈ ಸರ್ಕಾರ ಬಂದು ತಿಂಗಳ ಮೇಲಾಯಿತು. ಅಧಿಕಾರ ಸಿಕ್ಕ ಕೂಡಲೇ ವರ್ಗಾವಣೆ ದಂಧೆಯ ದಾಸ್ಯಕ್ಕೆ ಬಿದ್ದ ಸರ್ಕಾರಕ್ಕೆ ಮಾರುಕಟ್ಟೆಯಲ್ಲಿ ಹೆಚ್ಚುತ್ತಲೇ ಹೋಗುತ್ತಿರುವ ಬೆಲೆಗಳ ಬಗ್ಗೆ, ಆಹಾರ ಪದಾರ್ಥಗಳ ದುಬಾರಿ ಬೆಲೆ ಬಗ್ಗೆ ಗಮನ ಹೋಗಲೇ ಇಲ್ಲ. ಹಣದ ಹಪಾಹಪಿ ಭಾಗ್ಯಗಳನ್ನು ಬಲಿ ತೆಗೆದುಕೊಳ್ಳುವ ದುಸ್ಥಿತಿಗೆ ದೂಡಿದೆ” ಎಂದು ಟೀಕಿಸಿದ್ದಾರೆ.
“ಬೆಲೆ ಏರಿಕೆ ಪಟ್ಟಿ ಓದಿದರೆ ಎದೆ ನಡುಗುತ್ತದೆ. ಅಕ್ಕಿ ಬೆಲೆ ಕೆ.ಜಿಗೆ ಸರಾಸರಿ 20 ರೂ. ಏರಿದ್ದರೆ, ಕೆಜಿ ಟೊಮೆಟೊ ಬೆಲೆ 100 ರೂ. ಮುಟ್ಟಿದೆ. ಈ ಏರಿಕೆ ಲಾಭ ಅತ್ತ ರೈತನಿಗೂ ಇಲ್ಲ, ಇತ್ತ ಗ್ರಾಹಕನಿಗೂ ಇಲ್ಲ. ಜನ ಬೆಲೆ ಬೆಂಕಿಯಲ್ಲಿ ಬೇಯುತ್ತಿದ್ದರೆ ಈ ಸರ್ಕಾರ ಆ ಬೇಗೆಯಲ್ಲಿ ಚಳಿ ಕಾಯಿಸಿಕೊಳ್ಳುತ್ತಿದೆ. ಹೊಸ ಹುಂಡಿಗಳಿಗೆ ಜಾಗ ಹುಡುಕುತ್ತಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಜ್ಯಾಧ್ಯಕ್ಷ ಸ್ಥಾನ | ಬಿಜೆಪಿಯ ಗರ್ಭಗುಡಿಗೆ ದಲಿತರಿಗೆ ಪ್ರವೇಶವಿಲ್ಲ: ಕಾಂಗ್ರೆಸ್
“ಕಾಂಗ್ರೆಸ್ ತಾನು ಕೊಟ್ಟ ಭರವಸೆಗಳ ಬಗ್ಗೆ ಉತ್ತರ ಹೇಳಲಿ? ಬೆಲೆಗಳ ಇಳಿಕೆಯ ಬಗ್ಗೆ ಹೇಳಿದ್ದೆಲ್ಲ ಎಲ್ಲಿ ಹೋಯಿತು? ಮತ ಪಡೆದ ಮೇಲೆ ಎಲ್ಲ ಮರೆತು ಹೋಯಿತಾ? 135 ಸೀಟು ಸಿಕ್ಕಿದ ಮೇಲೆ ಪ್ರಣಾಳಿಕೆ ಪುಸ್ತಕಕ್ಕೆ ಮೂವತ್ತೇ ದಿನದಲ್ಲಿ ಗೆದ್ದಲು ಹಿಡಿಯಿತಾ? ನುಡಿದಂತೆ ನಡೆದಿದ್ದೇವೆ ಎಂದಿರಿ, ನುಡಿದಂತೆ ಎಲ್ಲಿ ನಡೆದಿದ್ದೀರಿ? ನುಡಿದಂತೆ ನಡೆದಿದ್ದೇವೆ ಎಂದರೆ ಲಂಗೂ ಲಗಾಮು ಇಲ್ಲದೆ ಬೆಲೆಗಳನ್ನು ಆಕಾಶಕ್ಕೆ ಜಿಗಿಸುವುದಾ? ಮಾರುಕಟ್ಟೆಯ ದಲ್ಲಾಳಿಗಳಿಗೆ ಶಕ್ತಿ ತುಂಬುವುದಾ? ಶಕ್ತಿ ಯೋಜನೆ ಮೂಲಕ ಮಹಿಳೆಯರ ಗಮನ ಬೇರೆಡೆಗೆ ಸೆಳೆದು, ಅವರ ಅಡುಗೆ ಮನೆ ಬಜೆಟ್‌ಗೆ ಕೊಳ್ಳಿ ಇಡುವುದಾ” ಎಂದು ಪ್ರಶ್ನಿಸಿದ್ದಾರೆ.
ಇನ್ನು, ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆಯೂ ವ್ಯಂಗ್ಯ ಮಾಡಿರುವ ಎಚ್ ಡಿ ಕುಮಾರಸ್ವಾಮಿ, ಹೊಸ ಹೆಸರುಗಳನ್ನು ನೀಡಿದ್ದಾರೆ. “ಅಕ್ಕಿಭಾಗ್ಯ ಹಗಲು ಕನಸು, ಬೆಲೆ ಏರಿಕೆ ಕನಸು ನನಸು. ಗೃಹಜ್ಯೋತಿ ಈಗ ಸುಡುಜ್ಯೋತಿ, ಶಕ್ತಿ ಯೋಜನೆಯಿಂದ ಸಾರಿಗೆ ವ್ಯವಸ್ಥೆಯಲ್ಲಿ ಅರಾಜಕತೆ, ಗೃಹಲಕ್ಷ್ಮಿಗೆ ಗ್ರಹಣ, ನಿದಿರೆಗೆ ಜಾರಿದೆ ಯುವನಿಧಿ” ಎಂದು ವ್ಯಂಗ್ಯವಾಡಿದ್ದಾರೆ.
ನೀವು ಇನ್ನು ಅದನ್ನೇ ಕಾಯುತ್ತ ಇರಿ. ಸರ್.
Have some patience. Modi promissed and did nothing. Atleast Congress is trying to do something and people like you are pulling them down due to rivalry. You have amassed lot of wealth. Had enough personal issues. Now take a break if you can’t digest issues Congress is trying to do
thank u