ಎಚ್‌ ಡಿ ರೇವಣ್ಣ ಜಾಮೀನು ಅರ್ಜಿ | ಎಸ್‌ಐಟಿಗೆ ಆಕ್ಷೇಪಣೆ ಸಲ್ಲಿಸಲು ಕೋರ್ಟ್‌ ಸೂಚನೆ

Date:

Advertisements

ಆರೋಪಿ ಪೊಲೀಸ್ ಕಸ್ಟಡಿಯಲ್ಲಿ ಇರುವಾಗ ಆತ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಬಹುದೇ ಹೇಗೆ ಎಂಬ ಬಗ್ಗೆ ಆಕ್ಷೇಪಣೆ ಸಲ್ಲಿಸಿ ಎಂದು ಎಸ್ಐಟಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಮಹಿಳೆಯೊಬ್ಬರ ಅಪಹರಣ ಪ್ರಕರಣದ ಆರೋಪಿಯಾಗಿ ಸದ್ಯ ಎಸ್‌ಐಟಿ ಬಂಧನದಲ್ಲಿರುವ ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್‌ ಶಾಸಕ ಎಚ್‌.ಡಿ.ರೇವಣ್ಣ ಸಲ್ಲಿಸಿರುವ ನಿಯಮಿತ ಜಾಮೀನು ಅರ್ಜಿಯನ್ನು ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ (ಸಿಸಿಎಚ್‌–82) ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ವಿಚಾರಣೆ ನಡೆಸಿ ಮೇಲಿನ ಆದೇಶ ನೀಡಿದರು.

ವಿಚಾರಣೆ ವೇಳೆ ಅರ್ಜಿದಾರ ರೇವಣ್ಣ ಪರ ಹಾಜರಾಗಿದ್ದ ಹೈಕೋರ್ಟ್ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿ, ಆರೋಪಿಗೆ ಜಾಮೀನು ನೀಡಲು ಸಾಧ್ಯವಿರುವ ಕಾನೂನಿನ ಅಂಶಗಳು ಹಾಗೂ ಸುಪ್ರೀಂ ಕೋರ್ಟ್ ತೀರ್ಪಿನ ಪೂರ್ವ ನಿದರ್ಶನಗಳನ್ನು ನ್ಯಾಯಾಧೀಶರಿಗೆ ವಿವರಿಸಿದರು. ವಾದ ಆಲಿಸಿದ ನ್ಯಾಯಾಧೀಶರು, ‘ಆರೋಪಿ ಪೊಲೀಸ್ ಕಸ್ಟಡಿಯಲ್ಲಿ ಇರುವಾಗ ಆತ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಬಹುದೇ ಹೇಗೆ ಎಂಬ ಬಗ್ಗೆ ಆಕ್ಷೇಪಣೆ ಸಲ್ಲಿಸಿ‘ ಎಂದು ಎಸ್ಐಟಿಗೆ ಆದೇಶಿಸಿ ನೋಟಿಸ್ ಜಾರಿಗೊಳಿಸಿದರು.

Advertisements

ಮುಂದಿನ ಅರ್ಜಿ ವಿಚಾರಣೆಯನ್ನು ಬುಧವಾರ (ಮೇ 8) ಬೆಳಗ್ಗೆ 11 ಗಂಟೆಗೆ ಮುಂದೂಡಿದರು. ಅರ್ಜಿದಾರ ರೇವಣ್ಣ ಪರ ಹೈಕೋರ್ಟ್ ವಕೀಲ ಪವನ್ ಸಾಗರ್ ವಕಾಲತ್ತು ವಹಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X