ಮಹಿಳೆಯ ಅಪಹರಣ ಪ್ರಕರಣದಲ್ಲಿ ಶನಿವಾರ ಸಂಜೆ ಎಸ್‌ಐಟಿ ತಂಡದಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಬೌರಿಂಗ್ ಆಸ್ಪತ್ರೆ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ರೇವಣ್ಣ, “ನನ್ನ ನಲವತ್ತು ವರ್ಷದ ರಾಜಕಾರಣದಲ್ಲಿ ಯಾವುದೇ ಆಪಾದನೆಗಳು ಇರಲಿಲ್ಲ. ಇದು ರಾಜಕೀಯ ಷಡ್ಯಂತ್ರ” ಎಂದಿದ್ದಾರೆ.
“ಏಪ್ರಿಲ್ 28ನೇ ತಾರೀಖು ನನ್ನ ಮೇಲೆ ದೂರು ನೀಡಿದ್ದಾರೆ. ಆದರೆ ಯಾವುದೇ ಪುರಾವೆ ಸಿಕ್ಕಿಲ್ಲ ಅಂತ ಕಿಡ್ನಾಪ್ ಕೇಸ್ ಹಾಕಿದ್ದಾರೆ. ಮೇ 2ನೇ ತಾರೀಕಿನ ಪ್ರಕರಣದಲ್ಲಿ ಯಾವುದೇ ಪುರಾವೆ ಕೂಡ ಇಲ್ಲ. ಎಲ್ಲ ಪೂರ್ತಿ ವಿಷಯ ಹೇಳ್ತೀನಿ. ಇದು ರಾಜಕೀಯ ಷಡ್ಯಂತ್ರ. ಇದನ್ನು ಎದುರಿಸುವ ಶಕ್ತಿ ನನಗಿದೆ” ಎಂದು ಹೆಚ್.ಡಿ ರೇವಣ್ಣ ಹೇಳಿದ್ದಾರೆ.
ಮಹಿಳೆಯ ಕಿಡ್ನಾಪ್ ಪ್ರಕರಣದಲ್ಲಿ ಬಂಧನದಲ್ಲಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ಮಾಡಿ, ಪುರಾವೆ ಇಲ್ಲದೆ ಕೇಸ್ ದಾಖಲು ಮಾಡಿದ್ದಾರೆ ಎಂದು ಹೇಳಿದ್ದಾರೆ.#HDRevanna #HassanCase #SIT #newsfirstlive #newsfirstkannada pic.twitter.com/UpbM9jIM3c
— NewsFirst Kannada (@NewsFirstKan) May 5, 2024
ಈ ವೇಳೆ ಎಚ್ ಡಿ ರೇವಣ್ಣ ಹೆಚ್ಚು ಹೇಳಿಕೆ ನೀಡದಂತೆ ತಡೆದ ಎಸ್‌ಐಟಿ ಅಧಿಕಾರಿಗಳು, ಮೆಡಿಕಲ್ ಚೆಕಪ್‌ಗಾಗಿ ಬೌರಿಂಗ್ ಆಸ್ಪತ್ರೆಯ ಒಳಗೆ ಕರೆದುಕೊಂಡು ಹೋದರು.
